• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರಿ ಶಾಲೆಗಳನ್ನು ದತ್ತು ಪಡೆಯದ ಖಾಸಗಿ ಶಾಲೆಗಳಿಗೆ ಶುಲ್ಕ ಮಿತಿ: ಸಿಎಂ ಮಹತ್ವದ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
July 23, 2026
in Top Story, ಕರ್ನಾಟಕ, ರಾಜಕೀಯ
0
ಸರ್ಕಾರಿ ಶಾಲೆಗಳನ್ನು ದತ್ತು ಪಡೆಯದ ಖಾಸಗಿ ಶಾಲೆಗಳಿಗೆ ಶುಲ್ಕ ಮಿತಿ: ಸಿಎಂ ಮಹತ್ವದ ಘೋಷಣೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: “ರಾಜ್ಯದಲ್ಲಿ ಸುಮಾರು 10 ಸಾವಿರ ಕೋಟಿಯಷ್ಟು ಸಿಎಸ್ಆರ್ ನಿಧಿ ಇದ್ದು, ಇದರ ಪ್ರತಿಯೊಂದು ಪೈಸೆ ಗ್ರಾಮೀಣ ಭಾಗದ ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗವಾಗಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕರೆ ನೀಡಿದರು.

NEET Protest : ಮೋದಿಗೆ ಹಿಗ್ಗಾಮುಗ್ಗಾ ಬೈದ ಪ್ರಿಯಾಂಕಾ ಗಾಂಧಿ #pratidhvani

ಕೆ.ಜಿ ರಸ್ತೆಯಲ್ಲಿರುವ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ ಕೆಸಿಸಿಐ)ಯ ಎಂ.ವಿ ಸಭಾಂಗಣದಲ್ಲಿ ಎಫ್ ಕೆಸಿಸಿಐ ಜಾಗತಿಕ ಸಿಎಸ್ಆರ್ ಮತ್ತು ಸುಸ್ಥಿರ ಅಭಿವೃದ್ಧಿ ಶೃಂಗಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, “ನಾವು ಅಧಿಕಾರಕ್ಕೆ ಬಂದ ಬಳಿಕ ನಮ್ಮ ಸಚಿವರ ಜೊತೆ ಚರ್ಚೆ ಮಾಡಿ, ಸಿಎಸ್ಆರ್ ನಿಧಿಯನ್ನು ಶಿಕ್ಷಣ ಕ್ಷೇತ್ರಕ್ಕೆ ಬಳಸಲು ತೀರ್ಮಾನಿಸಿದ್ದೇವೆ. ಕೆಲವರು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಆದರೆ 50% ಉದ್ಯಮಿಗಳು ಈ ಸಿಎಸ್ಆರ್ ನಿಧಿ ದುರುಪಯೋಗ ಮಾಡುತ್ತಿದ್ದಾರೆ. ಹೀಗಾಗಿ ಪ್ರತ್ಯೇಕ ಅಧಿಕಾರಿಗಳ ತಂಡ ನೇಮಿಸಿ ನಿಧಿಯನ್ನು ಎಲ್ಲೆಲ್ಲಿ ಬಳಸಲಾಗುತ್ತಿದೆ ಎಂದು ಪರಿಶೀಲನೆ ಮಾಡಲಾಗುವುದು” ಎಂದು ತಿಳಿಸಿದರು.

“ಗ್ರಾಮೀಣ ಭಾಗದ ಮಕ್ಕಳಿಗೆ ನಗರ ಪ್ರದೇಶದಂತೆ ಗುಣಮಟ್ಟದ ಶಿಕ್ಷಣ ಸಿಗಬೇಕು. ಹೀಗಾಗಿ ನಾವು ನೀತಿ ರೂಪಿಸುತ್ತಿದ್ದು, ಎಲ್ಲರೂ ಸಿಎಸ್ಆರ್ ನಿಧಿಯನ್ನು ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗಿಸಬೇಕು. ಸಿಎಸ್ಆರ್ ನಿಧಿಯಲ್ಲಿ ಶಾಲೆಗಳನ್ನು ಗ್ರಾಮೀಣ ಭಾಗದಲ್ಲಿ ನಿರ್ಮಾಣ ಮಾಡಬೇಕು. ನಮ್ಮ ಸರ್ಕಾರ ರಾಜ್ಯದಲ್ಲಿ 2 ಸಾವಿರ ಜಾಗಗಳನ್ನು ಗುರುತಿಸಿದ್ದು, ಪ್ರತಿ ಕಾರ್ಪೊರೇಟ್ ಸಂಸ್ಥೆ ಈ ಜಾಗಗಳಲ್ಲಿ ಅತ್ಯುತ್ತಮ ಮೂಲಸೌಕರ್ಯವಿರುವ ಶಾಲೆಗಳನ್ನು ನಿರ್ಮಾಣ ಮಾಡಬೇಕು. ನೀವು ನಮಗೆ ಹಣ ನೀಡಬೇಡಿ, ನೀವೇ ಹಣ ಹಾಕಿ ಶಾಲೆ ನಿರ್ಮಿಸಿ. ಶಾಲೆಗೆ ನಿಮ್ಮ ಸಂಸ್ಥೆಯ ಹೆಸರನ್ನು ಸೇರಿಸಿ. ಟೊಯೋಟಾ ಬೆಂಗಳೂರಿನಲ್ಲಿ 7-8 ಶಾಲೆಗಳನ್ನು ನಿರ್ಮಿಸುತ್ತಿವೆ. ಟೋಯೋಟಾದವರು ಪ್ರತಿ ಶಾಲೆಗೆ 10-15 ಕೋಟಿ ಹಣ ವೆಚ್ಚ ಮಾಡಿ ನಿರ್ಮಿಸುತ್ತಿದ್ದಾರೆ ಉಪಆಯುಕ್ತರು ನಿಮಗೆ ಜಾಗ ನೀಡುತ್ತಾರೆ. ಆ ಜಾಗದಲ್ಲಿ ನೀವು ಶಾಲೆ ನಿರ್ಮಿಸಬಹುದು. ನಿಮಗೆ ಒಬ್ಬರಿಂದಲೇ ಸಂಪೂರ್ಣ ಶಾಲೆಗಳನ್ನು ನಿರ್ಮಾಣ ಮಾಡಲು ಸಾಧ್ಯವಾಗದಿದ್ದರೆ, ಶಾಲೆಯ ಕೆಲವೊಂದು ಭಾಗವನ್ನು ನಿರ್ಮಾಣ ಮಾಡಲು ಅವಕಾಶ ಮಾಡಿಕೊಡಲಾಗುವುದು. ಇದಕ್ಕಾಗಿಯೇ ಒಂದು ವೇದಿಕೆ ರೂಪಿಸಲಾಗುವುದು” ಎಂದರು.

Manjunath Gowda youth congress on Rashok :ತಾಕತ್ತಿದ್ರೆ ರಾಹುಲ್ ಗಾಂಧಿನಾ ಜೈಲಲ್ಲಿ ಇಡಬೇಕಿತ್ತು ನೋಡೋಣ..!

“ನಗರ ಪ್ರದೇಶಗಳಲ್ಲಿ 50 ಸಾವಿರಕ್ಕಿಂತ ಹೆಚ್ಚು ಶುಲ್ಕ ಪಡೆಯುತ್ತಿರುವ ಶಾಲೆಗಳು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ಪಡೆಯಬೇಕು. ಒಂದು ವೇಳೆ ಈ ಶಾಲೆಗಳು ದತ್ತು ಪಡೆಯದೇ ಇದ್ದರೆ ಈ ಶಾಲೆಗಳ ಶುಲ್ಕಗಳಿಗೆ ಮಿತಿ ಹಾಕಲಾಗುವುದು. ಈ ಶಾಲೆಗಳು ಸರ್ಕಾರಿ ಶಾಲೆಗಳ ಕಟ್ಟಡ ನಿರ್ಮಾಣಕ್ಕೆ ಹಣ ಹಾಕುವುದು ಬೇಡ, ಅವರು ಕೇವಲ ಬೋಧಕರನ್ನು ನಿಯೋಜಿಸಿದರೆ ಸಾಕು. ನಮ್ಮ ರಾಜ್ಯದಲ್ಲಿ ಶಿಕ್ಷಕರ ಕೊರತೆ ಇದೆ. ಸರ್ಕಾರಿ ಶಾಲಾ ಶಿಕ್ಷಕರಿಗೆ ನಾವು ಖಾಸಗಿ ಶಾಲೆಗಳಿಗಿಂತ ಉತ್ತಮ ವೇತನ ನೀಡುತ್ತಿದ್ದೇವೆ. ನೀವೆಲ್ಲರೂ ಇದರ ಭಾಗವಾಗಬೇಕು. ನಾನು ಕೂಡ ಮೂರು ಶಾಲೆ ನಡೆಸುತ್ತಿದ್ದೇನೆ. ನಮ್ಮ ಶಾಲೆಗಳು ಕೂಡ ಗ್ರಾಮೀಣ ಭಾಗದ ಸರ್ಕಾರಿ ಶಾಲೆ ದತ್ತು ಪಡೆಯಬೇಕು ಎಂದು ನನ್ನ ಮಗಳಿಗೆ ತಿಳಿಸಿದ್ದೇನೆ. ಆಕೆ ಮೂರು ಶಾಲೆ ದತ್ತು ಪಡೆದಿದ್ದಾರೆ” ಎಂದು ತಿಳಿಸಿದರು.

ಸರ್ಕಾರಿ ಮೆಡಿಕಲ್ ಕಾಲೇಜು ಯಾಕೆ ಓಪನ್ ಮಾಡ್ತಿಲ್ಲ, ಇದೆಲ್ಲ ವ್ಯಾಪಾರ ಆಗಿಬಿಟ್ಟಿದೆ..! #pratidhvani

“ಸಿಎಸ್ಆರ್ ನಿಧಿಯನ್ನು ಮೊದಲು ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗಿಸಿ, ನಂತರ ಆರೋಗ್ಯ ಕ್ಷೇತ್ರದತ್ತ ಗಮನಹರಿಸಬಹುದು. ನಾವು ಈ ವಿಚಾರವಾಗಿ ನೀತಿ ರೂಪಿಸಿ, ಎಲ್ಲಾ ಕೈಗಾರಿಕೋದ್ಯಮಿಗಳ ಜೊತೆ ಚರ್ಚೆ ಮಾಡಲಾಗುವುದು. ಸಧ್ಯದಲ್ಲೇ ನಾನು ವಿವಿಧ ಕ್ಷೇತ್ರಗಳ ಉದ್ಯಮಗಳ ಜೊತೆ ಸಭೆ ಮಾಡಲಿದ್ದೇನೆಇದರಿಂದ ಶಿಕ್ಷಣಕ್ಕೆ ನಗರಗಳತ್ತ ವಲಸೆ ಹೋಗುವುದನ್ನು ತಪ್ಪಿಸಬಹುದು. ನಮ್ಮ ಹಳ್ಳಿಯ ಮಕ್ಕಳು ಕೇವಲ ಬೆಂಗಳೂರು ಅಥವಾ ಇತರೆ ಭಾಗದ ಮಕ್ಕಳ ಜೊತೆ ಸ್ಪರ್ಧೆ ಮಾಡುತ್ತಿಲ್ಲ. ನಮ್ಮ ಮಕ್ಕಳು ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ” ಎಂದರು.

NEET Protest : ಇವ್ರಿಗೆ ವಿದ್ಯಾರ್ಥಿಗಳನ್ನ ಹೊಡೆಯೋ ರೈಟ್ಸ್ ಕೊಟ್ಟೋರು ಯಾರು..?#pratidhvani

ರಾಜ್ಯದ ಪ್ರಗತಿಯಲ್ಲಿ ಎಫ್‌ಕೆಸಿಸಿಐ ಕೊಡುಗೆ

“ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ ಕೆಸಿಸಿಐ) ಮಹಾರಾಜರ ಕಾಲದಿಂದ ಇಂದಿನವರೆಗೂ ಎಲ್ಲರನ್ನು ಒಟ್ಟಾಗಿ ಮುನ್ನಡೆಸಿಕೊಂಡು ಬಂದು ಅತ್ಯುತ್ತಮ ಕೆಲಸ ಮಾಡುತ್ತಿದೆ. ಜತೆಗೂಡುವುದು ಆರಂಭ, ಜತೆಗೂಡಿ ಆಲೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂದು ನಾನು ಹೇಳುತ್ತಿರುತ್ತೇನೆ. ಎಫ್ ಕೆಸಿಸಿಐ ಕರ್ನಾಟಕ ಹಾಗೂ ಭಾರತದ ಪ್ರಗತಿಗೆ ತನ್ನದೇ ಆದ ಕೊಡುಗೆ ನೀಡಿದೆ. ಪ್ರತಿ ಕ್ಷೇತ್ರದಲ್ಲೂ ತನ್ನ ಸೇವೆ ಸಲ್ಲಿಸಿದ್ದು, ಕರ್ನಾಟಕದ ಯಶಸ್ಸು ಈ ಸಂಸ್ಥೆಯ ಜೊತೆಯಲ್ಲಿದೆ. ಇಂದು ಐಟಿ ಬಿಟಿ, ಎಐ ಕ್ಷೇತ್ರಗಳು ಬಂದಿವೆ. ಆದರೆ ಇದ್ಯಾವುದೂ ಇಲ್ಲದಿರುವಾಗಲೂ ಎಫ್ ಕೆಸಿಸಿಐ ಕೆಲಸ ಮಾಡಿಕೊಂಡು ಬಂದಿದೆ. ರಾಜ್ಯವನ್ನು ಹೀಗೆ ಪ್ರಗತಿಯ ಹಾದಿಯಲ್ಲಿ ಮುನ್ನಡೆಸಿಕೊಂಡು ಹೋಗಬೇಕು” ಎಂದು ತಿಳಿಸಿದರು.

DkShivakumar on BJP: ಬಿಜೆಪಿಯವ್ರು ಏನೇನ್ ಆಗಿದೆ ಅಂತ ಲೆಕ್ಕ ಇಟ್ಕೊಬೇಕು ಎಂದ ಸಿಎಂ ಡಿಕೆ

“ಇಂದು ನಾವು ಸಿಎಸ್ಆರ್ ವಿಚಾರವಾಗಿ ಚರ್ಚೆ ಮಾಡುತ್ತಿದ್ದೇವೆ. ಈ ಸಂಸ್ಥೆ ಗ್ಲೋಬಲ್ ಸಿಎಸ್ಆರ್ ವಿಚಾರ ಪ್ರಸ್ತಾಪಿಸಿದೆ. ಈ ಸಂದರ್ಭದಲ್ಲಿ ನಾನು ಪ್ರಣಬ್ ಮುಖರ್ಜಿ ಅವರನ್ನು ಸ್ಮರಿಸಲೇಬೇಕು. ಅವರು ಆರ್ಥಿಕ ಸಚಿವರಾಗಿದ್ದಾಗ ಈ ಸಿಎಸ್ಆರ್ ಅನ್ನು ಜಾರಿಗೆ ತಂದರು. ಪರಿಣಾಮ ಇಂದು ಸಿಎಸ್ಆರ್ ಸೇವೆಯಾಗಿ ಉಳಿದಿಲ್ಲ. ಇದು ಸುಸ್ಥಿರ ಅಭಿವೃದ್ಧಿಗೆ ತಂತ್ರಗಾರಿಕಾ ಹೂಡಿಕೆಯಾಗಿದೆ. ಲಾಭ ಮಾಡಿ ಬೆಳವಣಿಗೆ ಕಂಡಿದ್ದವರು ಸಮಾಜಕ್ಕಾಗಿ ತಮ್ಮ ಲಾಭಾಂಶವನ್ನು ಹಂಚಿಕೊಳ್ಳುವುದು ಸಿಎಸ್ಆರ್ ಉದ್ದೇಶವಾಗಿದೆ” ಎಂದರು.

NEET Protest : ವಿದ್ಯಾರ್ಥಿಗಳ ಮೇಲಿನ ಒಂದೊಂದು ಹೊಡೆತವೂ Vote ಆಗಿ ಬದಲಾಗುತ್ತೆ ನೋಡ್ತೀರಿ..! #pratidhvani

ಶಿಕ್ಷಣಕ್ಕಾಗಿ ಹಳ್ಳಿಗಳಿಂದ ನಗರಕ್ಕೆ ವಲಸೆ

“ನಾನು ಹಳ್ಳಿಯಿಂದ ನಗರಕ್ಕೆ ವಿದ್ಯಾಭ್ಯಾಸಕ್ಕಾಗಿ ಬಂದವನು. ನನಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ನಮ್ಮ ಪೋಷಕರು ನನ್ನನ್ನು ಬೆಂಗಳೂರಿಗೆ ಕಳುಹಿಸಿದರು. ನಾನು ಇಲ್ಲೇ ವಿದ್ಯಾರ್ಥಿಯಾಗಿದ್ದಾಗಿನಿಂದ ರಾಜಕಾರಣದಲ್ಲಿ ತೊಡಗಿಕೊಂಡು ಮತ್ತೆ ಊರಿಗೆ ವಾಪಸ್ ಹೋಗಲೇ ಇಲ್ಲ. ಇದು ಕೇವಲ ನನ್ನ ಕಥೆ ಮಾತ್ರವಲ್ಲ. ನಗರ ಪ್ರದೇಶದ ಎಲ್ಲರ ಪರಿಸ್ಥಿತಿಯಾಗಿದೆ. ಇಂದು ನಗರಗಳ ಜನಸಂಖ್ಯೆ 43%ನಷ್ಟಿದೆ. ಈ ಹಿಂದೆ 31% ಇತ್ತು. ಕೃಷ್ಣ ಅವರ ಸರ್ಕಾರದಲ್ಲಿ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ಬೆಂಗಳೂರಿನ ಜನಸಂಖ್ಯೆ 70 ಲಕ್ಷ ಇತ್ತು. ಇಂದು 1.40 ಕೋಟಿಯಷ್ಟಾಗಿದೆ. 1.35 ಕೋಟಿ ವಾಹನಗಳು ಬೆಂಗಳೂರು ರಸ್ತೆಗಳಲ್ಲಿವೆ. ಇಡೀ ವಿಶ್ವದಾದ್ಯಂತ ಜನ ಬೆಂಗಳೂರಿನತ್ತ ಮುಖ ಮಾಡಿದ್ದಾರೆ” ಎಂದು ತಿಳಿಸಿದರು.

Students Protest At Delhi: ನೀಟ್ ಹಗರಣ..ದೇಶಾದ್ಯಂತ ಕಾಂಗ್ರೆಸ್-ಬಿಜೆಪಿ ಯುದ್ಧ!  #pratidhvani
Tags: BJPCM DK ShivakumarcongressDK ShivakumarKarnatakaKarnataka PoliticsPoliticsSchool
Previous Post

ಪ್ರಶ್ನೆ ಪತ್ರಿಕೆ ಸೋರಿಕೆ ರಾಜಕೀಯ ವಿಚಾರವಲ್ಲ: ಸಿಎಂ ಡಿ.ಕೆ ಶಿವಕುಮಾರ್

Next Post

ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ವಿಜಯ್‌ಗೆ ಕರ್ನಾಟಕದ ಆಹ್ವಾನ

Related Posts

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?
Top Story

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?

by ಪ್ರತಿಧ್ವನಿ
July 25, 2026
0

ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮದ ವಿರುದ್ಧ 35 ದಿನಗಳ ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಯಶಸ್ವಿಯಾಗಿ ಅಂತ್ಯಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ...

Read moreDetails
ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

July 25, 2026
ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

July 25, 2026
ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

July 25, 2026
ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

July 25, 2026
Next Post
ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ವಿಜಯ್‌ಗೆ ಕರ್ನಾಟಕದ ಆಹ್ವಾನ

ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ವಿಜಯ್‌ಗೆ ಕರ್ನಾಟಕದ ಆಹ್ವಾನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada