• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿಯವರು ದತ್ತು ತೆಗೆದುಕೊಳ್ಳಬೇಕು: ಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
July 25, 2026
in Top Story, ಕರ್ನಾಟಕ, ರಾಜಕೀಯ
0
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿಯವರು ದತ್ತು ತೆಗೆದುಕೊಳ್ಳಬೇಕು: ಸಿಎಂ
Share on WhatsAppShare on FacebookShare on Telegram
ADVERTISEMENT

ಚಿತ್ರದುರ್ಗ: “ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ನಗರ ಪ್ರದೇಶದ ಅತ್ಯುತ್ತಮ ಖಾಸಗಿ ಶಾಲೆಗಳು ದತ್ತು ಪಡೆದು ಶಿಕ್ಷಕರನ್ನು ನಿಯೋಜಿಸಿ, ತಮ್ಮ ಶಾಲೆಗಳ ಗುಣಮಟ್ಟದ ಶಿಕ್ಷಣವನ್ನು ಗ್ರಾಮೀಣ ಭಾಗದ ಮಕ್ಕಳಿಗೆ ನೀಡಬೇಕು” ಎಂದು ಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

Dharmendra Pradhan Resigns :  ನಾವು ಸಾಧಿಸಿದ್ದೇವೆ #pratidhvani

ಹಿರಿಯೂರಿನ ವೇದಾವತಿ ವಿಜ್ಞಾನ ಕಾಲೇಜು ಕ್ರೀಡಾಂಗಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಖಾಸಗಿ ಶಾಲೆಗಳು ಇದರ ಬಗ್ಗೆ ನನ್ನ ಬಳಿ ಹೇಳಲಿ ಆ ನಂತರ ನಾನು ಪ್ರತಿಕ್ರಿಯೆ ನೀಡುತ್ತೇನೆ. ಇದು ನನಗೂ ಅವರಿಗೂ ಇರುವ ಒಪ್ಪಂದ. ಖಾಸಗಿ ಶಾಲೆಗಳು ಎಂದರೆ ಎಲ್ಲಾ ಶಾಲೆಗಳು ದತ್ತು ತೆಗೆದುಕೊಳ್ಳುವುದಲ್ಲ. ಇದಕ್ಕೆ ಕೆಲವು ಮಾನದಂಡಗಳಿವೆ. ಅತ್ಯುತ್ತಮ ಶಾಲೆಗಳು ಗ್ರಾಮೀಣ ಭಾಗದ ಶಾಲೆಗಳನ್ನು ತಮ್ಮ ಶಾಲೆಗಳ ಮಟ್ಟಕ್ಕೆ ಕೊಂಡೊಯ್ಯಲು ದತ್ತು ತೆಗೆದುಕೊಳ್ಳುವುದು. ಸಿಎಸ್ ಆರ್ ಹಣವನ್ನು ಹೀಗೆ ಖರ್ಚು ಮಾಡಿದರೆ ಪ್ರಾಥಮಿಕ ಶಿಕ್ಷಣ ಬಲಗೊಳ್ಳುತ್ತದೆ. ಹಳ್ಳಿ ಮಕ್ಕಳು ನಗರಗಳಿಗೆ ಶಿಕ್ಷಣಕ್ಕಾಗಿ ವಲಸೆ ಬರುವುದು ತಪ್ಪಬೇಕು. ಅವರಿಗೂ ಬೆಂಗಳೂರು ಮಟ್ಟದ ಶಿಕ್ಷಣ ದೊರೆಯಬೇಕು ಎಂಬುದು ನನ್ನ ಅಭಿಲಾಷೆ. ಸರ್ಕಾರ 1.40 ಲಕ್ಷ ರೂಪಾಯಿಯನ್ನು ಒಂದು ಮಗುವಿನ ಮೇಲೆ ಖರ್ಚು ಮಾಡುತ್ತಿದೆ. ಆದರೂ ಸಹ ಗುಣಮಟ್ಟದ ಶಿಕ್ಷಣ ನೀಡಲು ತೊಡಕಾಗುತ್ತಿದೆ‌. ಅದಕ್ಕಾಗಿ ನಾನು ಖಾಸಗಿ ಅವರ ಬಳಿ ಮಾತುಕತೆ ನಡೆಸಿದ್ದೇನೆ” ಎಂದು ತಿಳಿಸಿದರು.

Dharmendra Pradhan Resigns | ಸಚಿವ ಧರ್ಮೇಂದ್ರ ಪ್ರಧಾನ್​ ರಾಜೀನಾಮೆ #pratidhvani

ಕೆಪಿಎಸ್‌ಸಿ ಅಧ್ಯಕ್ಷರನ್ನು ನೇಮಿಸಿದ್ದೇ ಬಿಜೆಪಿ

ಬಿಜೆಪಿಯವರು ಕಾಂಗ್ರೆಸ್ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾತನಾಡಿದ ಅವರು, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದನ್ನು ಬೇಡ ಎಂದು ಹೇಳಲು ಆಗುತ್ತದೆಯೇ? ನನ್ನ ವಿರುದ್ಧ ಪ್ರತಿಭಟನೆ ಮಾಡುವವರನ್ನು ನಾನು ಬೇಡ ಎನ್ನಲು ಸಾಧ್ಯವೇ? ಮಾಧ್ಯಮದವರೂ ಪ್ರತಿಭಟನೆ ಮಾಡುತ್ತಾರೆ. ಇದನ್ನು ಬೇಡ ಎನ್ನಲು ಆಗುತ್ತದೆಯೇ? ಕೆಪಿಎಸ್‌ಸಿ ಅಧ್ಯಕ್ಷನನ್ನ ನಾವು ಮಾಡಿದ್ದಲ್ಲ. ಬಿಜೆಪಿಯವರೇ ಆಯ್ಕೆ ಮಾಡಿದ್ದು. ಈಗ ಅವರೇ ಸಿಲುಕಿಕೊಂಡಿದ್ದಾರೆ. ಅದಕ್ಕೆ ಅವರೇ ಮುಂಚಿತವಾಗಿ ಪತ್ರ ಬರೆದು ವಜಾ ಮಾಡಬೇಕು ಎಂದಿದ್ದಾರೆ. ರಾಜ್ಯಪಾಲರು ಕಳಿಸಿದ್ದನ್ನು ನಾವು ಅಂಗೀಕಾರ ಮಾಡಿದ್ದೇವೆ. ತನಿಖೆ ನಡೆಸುತ್ತೇವೆ. ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದು ಸ್ಪಷ್ಟಪಡಿಸಿದರು.

ಮಳೆ ಕೊರತೆ ಪ್ರದೇಶಗಳಿಗೆ ಭೇಟಿ ಬಗ್ಗೆ ಮಾತನಾಡಿದ ಸಿಎಂ ಡಿ.ಕೆ ಶಿವಕುಮಾರ್‌, “ಬೆಂಗಳೂರಿನಲ್ಲಿ ಬರ ಪರಿಸ್ಥಿತಿ ಹಾಗೂ ಪ್ರಗತಿ ಪರಿಶೀಲನೆ ಮಾಡುವ ಬದಲು, ಚಿತ್ರದುರ್ಗದಲ್ಲಿ ನಡೆಸೋಣ ಎಂದು ಬಂದಿದ್ದೇನೆ. ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಸಿಇಓಗಳ ಸಭೆಯನ್ನು ಈಗಾಗಲೇ ನಡೆಸಿದ್ದೇನೆ. ಈಗ ತುಮಕೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಭಾಗಗಳಿಗೆ ಅನುಕೂಲವಾಗಲಿದೆ. ಆದ ಕಾರಣ ಸಭೆ ನಡೆಸುತ್ತಿದ್ದೇ‌ನೆ. ಇಂದು ಕೆಲವು ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುತ್ತೇನೆ” ಎಂದು ತಿಳಿಸಿದರು.

Dharmendra Pradhan Resigns : ನಾವು ಸಾಧಿಸಿದ್ದೇವೆ; ಅಭಿಜಿತ್‌ ದೀಪ್ಕೆ! #genz

“ಬೆಳಗಾವಿಯಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆ ವೇಳೆ ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ತೊಂದರೆಯಾಗಬಾರದು ಎಂದು ತೀರ್ಮಾನ ಮಾಡಿದ್ದೇವೆ. ಆಲಮಟ್ಟಿ ಅಣೆಕಟ್ಟು ಹೊರತಾಗಿ ರಾಜ್ಯದ ಬೇರೆ ಯಾವ ಭಾಗದಲ್ಲೂ ಉತ್ತಮ ಮಳೆ ಇಲ್ಲ. ರಾಜ್ಯದಲ್ಲಿ ಬರ ಇನ್ನೂ ಹೆಚ್ಚಾಗುತ್ತಲೇ ಇದೆ. ಬರ ಪರಿಸ್ಥಿತಿ ಬಗ್ಗೆ ಅಧಿಕಾರಿಗಳು ಈಗಾಗಲೇ ಮಾಹಿತಿ ಪಡೆದುಕೊಂಡಿದ್ದು, ಅವರ ಜೊತೆ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸುತ್ತೇನೆ. ಭಾನುವಾರ ದಿವಂಗತ ಸುಧಾಕರ್ ಅವರ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ನಾಳೆಯೂ ಚಿತ್ರದುರ್ಗಕ್ಕೆ ಆಗಮಿಸಲಿದ್ದೇನೆ” ಎಂದು ತಿಳಿಸಿದರು.

Anil Kumar Tadkal on PM Modi neet : ಹೀಗೆಲ್ಲ ನಡೆಸಿ ಅಂತ ಇವ್ರ  ಕೊಟ್ಟಿಲ್ಲ, ದೇಶಕ್ಕೆ ದೊಡ್ಡ ಇತಿಹಾಸವಿದೆ.!
Previous Post

Big Breaking: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

Next Post

ಒಗ್ಗೂಡಿ ನಿಲ್ಲುವುದೇ ನಿಜವಾದ ಧೈರ್ಯ: ದೇಶದ ಯುವ ಸಮೂಹಕ್ಕೆ ರಾಹುಲ್ ಗಾಂಧಿ ಅಭಿನಂದನೆ

Related Posts

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?
Top Story

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?

by ಪ್ರತಿಧ್ವನಿ
July 25, 2026
0

ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮದ ವಿರುದ್ಧ 35 ದಿನಗಳ ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಯಶಸ್ವಿಯಾಗಿ ಅಂತ್ಯಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ...

Read moreDetails
ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

July 25, 2026
ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

July 25, 2026
ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

July 25, 2026
ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

July 25, 2026
Next Post
ಒಗ್ಗೂಡಿ ನಿಲ್ಲುವುದೇ ನಿಜವಾದ ಧೈರ್ಯ: ದೇಶದ ಯುವ ಸಮೂಹಕ್ಕೆ ರಾಹುಲ್ ಗಾಂಧಿ ಅಭಿನಂದನೆ

ಒಗ್ಗೂಡಿ ನಿಲ್ಲುವುದೇ ನಿಜವಾದ ಧೈರ್ಯ: ದೇಶದ ಯುವ ಸಮೂಹಕ್ಕೆ ರಾಹುಲ್ ಗಾಂಧಿ ಅಭಿನಂದನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada