ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಖಾಸಗಿ ಸಾರಿಗೆ ಸಂಘಟನೆಗಳು ಸೋಮವಾರ (ಸೆಪ್ಟೆಂಬರ್ 11) ಹಮ್ಮಿಕೊಂಡಿದ್ದ ಮುಷ್ಕರವನ್ನು ವಾಪಾಸ್ ಪಡೆದಿವೆ.
ಸ್ವಾತಂತ್ರ್ಯ ಉದ್ಯಾನದಲ್ಲಿ ಖಾಸಗಿ ಸಾರಿಗೆ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದರು. ಮಧ್ಯಾಹ್ನ ವೇಳೆಗೆ ಅಲ್ಲಿಗೆ ತೆರಳಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಖಾಸಗಿ ಸಾರಿಗೆ ನೌಕರರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೇಡಿಕೆಗಳನ್ನು ಪರಿಗಣಿಸಿ ಈಡೇರಿಸುವುದಾಗಿ ರಾಮಲಿಂಗಾ ರೆಡ್ಡಿ ಭರವಸೆ ನೀಡಿದ ನಂತರ ಖಾಸಗಿ ಸಾರಿಗೆ ಮುಷ್ಕರ ಅಂತ್ಯಗೊಳಿಸಲು ಖಾಸಗಿ ಸಾರಿಗೆ ಸಂಘಟನೆಗಳು ತೀರ್ಮಾನಿಸಿವೆ.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಖಾಸಗಿ ಸಾರಿಗೆ ಸಂಘಟನೆಗಳು ಸೋಮವಾರ ಖಾಸಗಿ ಸಾರಿಗೆ ಮುಷ್ಕರಕ್ಕೆ ಕರೆ ನೀಡಿದ್ದರು.