• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ತಿಂಗಳಲ್ಲಿ 134 ಸಭೆ ನಡೆಸಿದ ಪ್ರಿಯಾಂಕ್ ಖರ್ಗೆ | ಹಲವು ಮಹತ್ವದ ನಿರ್ಧಾರ

ಪ್ರತಿಧ್ವನಿ by ಪ್ರತಿಧ್ವನಿ
September 1, 2023
in ಇದೀಗ, ಕರ್ನಾಟಕ, ರಾಜಕೀಯ
0
ಪ್ರಿಯಾಂಕ್‌ ಖರ್ಗೆ

ಪ್ರಿಯಾಂಕ್‌ ಖರ್ಗೆ

Share on WhatsAppShare on FacebookShare on Telegram

ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಆಗಸ್ಟ್ ತಿಂಗಳಲ್ಲಿ 134 ಸಭೆ, ಸಮಾರಂಭ, ಸಮಾವೇಶಗಳಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಹಲವು ಮಹತ್ವದ ವಿಷಯಗಳು ಚರ್ಚೆಯಾಗಿವೆ ಎಂದು ವರದಿಯಾಗಿದೆ.

ADVERTISEMENT

ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರದ ತಮ್ಮ ಮೂರನೆಯ ತಿಂಗಳ ಕಾರ್ಯ ವರದಿ (ವರ್ಕ್ ರಿಪೋರ್ಟ್) ಬಿಡುಗಡೆ ಮಾಡಿರುವ ಸಚಿವರು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವಾಲಯದ ಕಚೇರಿಯನ್ನು ಜನಸಾಮಾನ್ಯರಿಗೆ ಮತ್ತಷ್ಟು ಹತ್ತಿರಗೊಳಿಸಲು ಕ್ಯೂ.ಆರ್ ಕೋಡ್ ಆಧಾರಿತ ʼಕಲಬುರಗಿ ಕನೆಕ್ಟ್ʼ ಸೇರಿದಂತೆ ಹಲವಾರು ಮಹತ್ವಯುತ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಕಲಬುರಗಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ್ದಾರೆ.

ಸರ್ಕಾರದ ಮಟ್ಟದಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ವಿವಿಧ ಇಲಾಖೆಯ ಸಚಿವರೊಂದಿಗೆ 13 ಸಭೆಗಳಲ್ಲಿ ಪಾಲ್ಗೊಂಡಿದ್ದ ಸಚಿವರು ಸ್ಥಳೀಯ ಮತ್ತು ವಿದೇಶಿ ಗಣ್ಯರು ಹಾಗೂ ನಿಯೋಗಗಳೊಂದಿಗೆ 33 ಸಭೆಗಳನ್ನು ನಡೆಸಿದ್ದು ಗ್ರಾಮೀಣಾಭಿವೃದ್ಧಿ ಹಾಗೂ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ 16 ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ 16 ಸೇರಿದಂತೆ ಒಟ್ಟು 33 ಸಭೆಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರು ನಡೆಸಿದ್ದಾರೆ. ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲಾಡಳಿತಕ್ಕೆ ಸಂಬಂಧಪಟ್ಟಂತೆ 23 ಸಭೆಗಳಲ್ಲಿ ಪಾಲ್ಗೊಂಡ ಸಚಿವರು ಜಿಲ್ಲಾಡಳಿತಕ್ಕೆ ಸೂಕ್ತ ಮಾರ್ಗದರ್ಶನ ನೀಡಿ ಹಲವು ಸಮಸ್ಯೆಗಳನ್ನು ಪರಿಹರಿಸಿದ್ದಾರೆ.

ತಮ್ಮ ಖಾತೆಗಳಿಗೆ ಸಂಬಂಧಿಸಿದ ಹಾಗೂ ಇನ್ನಿತರ 8 ಸಮಾವೇಶಗಳಲ್ಲಿ ಮತ್ತು ಪಕ್ಷದ ಚಟುವಟಿಕೆಗಳ ಕುರಿತಂತೆ ನಡೆದ 6 ಸಭೆಗಳಲ್ಲಿ ಸಚಿವರು ಭಾಗಿಯಾಗಿದ್ದಾರೆ. ಸಚಿವರು 4 ಬಾರಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 15 ಮಾಧ್ಯಮ ಸಂದರ್ಶನ ಹಾಗೂ ಸಂವಾದಗಳಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಪಾಲ್ಗೊಂಡಿದ್ದಾರೆ.

ಕೇಂದ್ರ ಸ್ಥಾನದಲ್ಲಿ ಹಾಗೂ ಕಲಬುರಗಿ ಮತ್ತು ಚಿತ್ತಾಪುರಕ್ಕೆ ಭೇಟಿ ನೀಡಿದ ಸಂದರ್ಭಗಳಲ್ಲಿ ಸ್ಥಳೀಯವಾಗಿ ಸಾರ್ವಜನಿಕರು, ಪಕ್ಷದ ಕಾರ್ಯಕರ್ತರು, ವಿವಿಧ ಸಂಘಟನೆಗಳು ಹಾಗೂ ಸರ್ಕಾರಿ ನೌಕರರಿಂದ ಅಹವಾಲು ಸ್ವೀಕಾರಿಸಿ, ನೇರ ಮಾತುಕತೆಯಲ್ಲಿ ಪಾಲ್ಗೊಂಡಿದ್ದಾರೆ. ಸಾರ್ವಜನಿಕರ ಬಹಳಷ್ಟು ಕುಂದುಕೊರತೆಗಳನ್ನು ಸ್ಥಳದಲ್ಲೇ ಪರಿಹರಿಸಿದ್ದಾರೆ.

2023ರ ಆಗಸ್ಟ್ ತಿಂಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಇಲಾಖಾ ವತಿಯಿಂದ ಕೈಗೊಂಡಿರುವ ಪ್ರಮುಖ ನಿರ್ಧಾರಗಳು

•ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಸಹಭಾಗಿತ್ವದಲ್ಲಿ ಕಕ ಭಾಗದಲ್ಲಿ ಹೆಚ್ಚು “ಅರಿವು ಕೇಂದ್ರ” ಹಾಗೂ ಮಹಿಳಾ ಸಮುದಾಯ ಶೌಚಾಲಯ ಸ್ಥಾಪನೆಗೆ ಕ್ರಮ.

•ಕಲಬುರಗಿ ಜಿಲ್ಲೆಯಲ್ಲಿ ಪೊಲೀಸ್ ವ್ಯವಸ್ಥೆಯನ್ನು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ QR ಕೋಡ್ ಆಧಾರಿತ “ಜನಸ್ನೇಹಿ” ಅಭಿಪ್ರಾಯ ಸಂಗ್ರಹ ಅಭಿಯಾನ ಜಾರಿ

•ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳನ್ನು ಸದೃಡಗೊಳಿಸಲು ಗ್ರಂಥಪಾಲಕರ ಸೇವಾ ಸಮಯ ಹೆಚ್ಚಿಸಿ, ರಾಜ್ಯದ ಎಲ್ಲಾ ಗ್ರಂಥಪಾಲಕರಿಗೆ ಕನಿಷ್ಠ ಮೂಲವೇತನ ನಿಗದಿಪಡಿಸಿ ಮಹತ್ವಾಕಾಂಕ್ಷಿ ಆದೇಶ

•ರಾಜ್ಯದಲ್ಲಿ ಎಲ್ಲಾ ನೀರಿನ ಮೂಲ ಪತ್ತೆ ಹಚ್ಚಿ ದಾಖಲಿಸಿಲು ವಾಟರ್ ಆಡಿಟ್ ಸಮಿತಿ ರಚನೆಗೆ ಕ್ರಮ

•ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪಂಚಾಯತಿ ಆಸ್ತಿಗಳನ್ನು ಸೂಕ್ತವಾಗಿ ದಾಖಲಿಸಲು ವಿಶೇಷ ʼಬುಕ್ ಬಿಲ್ಡಿಂಗ್ ಪ್ರಕ್ರಿಯೆʼ ಜಾರಿಗೆ ಕ್ರಮ

•ಗ್ರಾಮೀಣ ಆಡಳಿತದಲ್ಲಿ ಸುಧಾರಣೆ, ದಕ್ಷತೆ ಹಾಗೂ ಪಾರದರ್ಶಕತೆ ತರುವ ನಿಟ್ಟಿನಲ್ಲಿ ʼಪಂಚತಂತ್ರ-2ʼ ಜಾರಿಗೆ ಕ್ರಮ

*ಪಂಚಾಯತಿ ಮಟ್ಟದಲ್ಲಿ ವ್ಯವಸ್ಥಿತ ತೆರಿಗೆ ಸಂಗ್ರಹಣೆಗೆ ವಿಶೇಷ ರೂಪುರೇಷೆ

•ಗ್ರಾಮ ಪಂಚಾಯತಿ ತೆರಿಗೆ ಸಂಗ್ರಹಣೆ ಸುಲಭವಾಗಿಸಲು ವಿಶೇಷ ಶ್ರಮ, ಈ ನಿಟ್ಟಿನಲ್ಲಿ ಈಗಾಗಲೇ “Point of Sales” ಮಷೀನ್ಸ್ ಮೂಲಕವೇ 100 ಕೋಟಿ ರೂ. ತೆರಿಗೆ ಸಂಗ್ರಹಣೆ.

•ಸರ್ಕಾರಿ ಸೇವೆಗಳನ್ನು ಗ್ರಾಮೀಣ ಭಾಗದ ಜನರಿಗೆ ಮತ್ತಷ್ಟು ಹತ್ತಿರಗೊಳಿಸಲು ಬಾಪೂಜಿ ಸೇವಾ ಕೇಂದ್ರಗಳನ್ನ ಸದೃಡಗೊಳಿಸಲು ವಿಶೇಷ ಒತ್ತು

•ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರದಲ್ಲಿ ʼಮೋಜಿಣಿʼ ಸೇವೆಗಳ ಜಾರಿ

•ಬಾಪೂಜಿ ಸೇವಾ ಕೇಂದ್ರಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ 30 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಂದ ನೋಂದಣಿ

•ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಕೆ.ಆರ್.ಐ.ಡಿ.ಎಲ್ ಸಂಸ್ಥೆಯು ಟೆಂಡರ್ಗಳಲ್ಲಿ ಭಾಗಿಯಾಗಲು ವಿಶೇಷ ಸಮಿತಿ ರಚನೆ.

•4,000 ಕೋಟಿ ರೂ. ವೆಚ್ಚದಲ್ಲಿ ಮೈಸೂರಿನಲ್ಲಿ ಸೆಮಿಕಂಡಕ್ಟರ್ ತಯಾರಿಕಾ ಘಟಕ ಸ್ಥಾಪನೆಗಾಗಿ ಕೇನ್ಸ್ ಟೆಕ್ನಾಲಜೀಸ್ ಸಂಸ್ಥೆಯೊಂದಿಗೆ ಒಪ್ಪಂದ ಸಹಿ.

•ಕರ್ನಾಟಕ ರಾಜ್ಯವನ್ನು ಜಾಗತಿಕ ಗೇಮಿಂಗ್ ಹಬ್ ಆಗಿ ಪರಿವರ್ತಿಸಿ, ಬೆಳೆಸಲು ವಿಶೇಷ ಕಾರ್ಯಯೋಜನೆಗೆ ಕ್ರಮ

Tags: Priyank KhargeWork Reportಕಾರ್ಯ ವರದಿಪ್ರಿಯಾಂಕ್‌ ಖರ್ಗೆ
Previous Post

ಶಕ್ತಿ ಯೋಜನೆ ವಿರೋಧಿಸಿ ಖಾಸಗಿ ಸಾರಿಗೆ ಒಕ್ಕೂಟದಿಂದ ಸೆ.11ಕ್ಕೆ ಬೆಂಗಳೂರು ಸಾರಿಗೆ ಬಂದ್

Next Post

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ಖಡಕ್ ಎಚ್ಚರಿಕೆ

Related Posts

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
0

ಬೆಂಗಳೂರು: ಭಾರತದ ಕೃಷಿ ತಂತ್ರಯೋಜನೆ ಕೇವಲ ಉತ್ಪಾದನೆಯಿಂದ ಲಾಭದಾಯಕತೆಯತ್ತ ಮಾತ್ರವಲ್ಲದೆ ಇತ್ತೀಚೆಗೆ ಮಹತ್ವದ ಬದಲಾವಣೆಯನ್ನು ಕಂಡಿದ್ದು, ರೈತರನ್ನು ಉದ್ಯಮಿಗಳಾಗಿ ರೂಪಿಸುವ ಉದ್ದೇಶದಿಂದ ಮೌಲ್ಯವರ್ಧನೆ, ಬ್ರಾಂಡಿಂಗ್ ಮತ್ತು ಮಾರುಕಟ್ಟೆ...

Read moreDetails
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

February 2, 2026
Next Post
ಮಹೇಶ್‌ ಶೆಟ್ಟಿ ತಿಮರೋಡಿ

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ಖಡಕ್ ಎಚ್ಚರಿಕೆ

Please login to join discussion

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!