• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Priyanka Kharge: ಗ್ರಾಪಂ ಮಟ್ಟದಲ್ಲಿ ಇ-ಸ್ವತ್ತು ಸಜ್ಜುಗೊಳಿಸಲು ಪ್ರಿಯಾಂಕ್‌ ಖರ್ಗೆ ಸೂಚನೆ..!!

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ಸುಮಾರು ಒಂದು ಕೋಟಿ ಆಸ್ತಿಗಳನ್ನು ಇ-ಸ್ವತ್ತು ತೆಕ್ಕೆಗೆ ತರುವ ಮೂಲಕ ಮನೆ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದರು.

ಪ್ರತಿಧ್ವನಿ by ಪ್ರತಿಧ್ವನಿ
November 4, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ADVERTISEMENT

ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇ-ಸ್ವತ್ತು ಸಮರ್ಪಕ ಅನುಷ್ಠಾನ ಹಾಗೂ ಇನ್ನಿತರ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಈ ಸಂಬಂಧ ಹೊಸದಾಗಿ ಬಿಡುಗಡೆ ಮಾಡಿರುವ ನಿಯಮಾವಳಿಗಳನ್ನು ಗ್ರಾಮ ಪಂಚಾಯತಿ ಮಟ್ಟದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮನನ ಮಾಡಿಸಲು ಜಿಲ್ಲಾ ಮಟ್ಟದಲ್ಲಿ ವಿಶೇಷ ತರಬೇತಿ ವ್ಯವಸ್ಥೆ ಮಾಡಲು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ರಾಜ್ಯದ ಲಕ್ಷಾಂತರ ಮಂದಿ ಈ ಯೋಜನೆಯ ಲಾಭ ಹೊಂದಲು ತವಕದಿಂದ ಕಾಯುತ್ತಿದ್ದು, ಸಾರ್ವಜನಿಕರಿಗೆ ಸುಲಲಿತವಾಗಿ ಹಾಗೂ ಪಾರದರ್ಶಕವಾಗಿ ಇ–ಸ್ವತ್ತು ಪ್ರಯೋಜನ ದೊರೆಯುವಂತೆ ಸಿಬ್ಬಂದಿಯನ್ನು ಸಜ್ಜು ಮಾಡಬೇಕೆಂದು ಸಚಿವರು ಹೇಳಿದರಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ನೆರವನ್ನು ಪಡೆದು –ಸ್ವತ್ತು ಆಂದೋಲನವನ್ನು ಯಶಸ್ವಿಗೊಳಿಸಬೇಕೆಂದು ಸೂಚನೆ ನೀಡಿದರು.

ಗ್ರಾಮ ಪಂಚಾಯತಿಗಳ ಸಂಪನ್ಮೂಲವನ್ನು ವೃದ್ಧಿಸುವ ಮೂಲಕ ಸ್ಥಳೀಯ ಸರ್ಕಾರಗಳ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೂತನವಾಗಿ ಅನುಷ್ಠಾನಕ್ಕೆ ತಂದಿರುವ ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮ (ಲೀಪ್)‌ ಅಡಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಲಭ್ಯವಿರುವ ಆಸ್ತಿಗಳನ್ನು ಪತ್ತೆ ಮಾಡಿ, ಅಂತಹ ಸ್ಥಳದಲ್ಲಿ ಪಂಚಾಯತಿಗಳಿಗೆ ಶಾಶ್ವತ ಆದಾಯ ತಂದು ಕೊಡುವ ಕಟ್ಟಡಗಳನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ ಸಚಿವರು, ಪ್ರವಾಸಿ ತಾಣಗಳು ಹಾಗೂ ಯಾತ್ರಾಸ್ಥಳಗಳ ಸಮೀಪ ಲಭ್ಯವಿರುವ ಗ್ರಾಮ ಪಂಚಾಯತಿ ಆಸ್ತಿಗಳಲ್ಲಿ ಸಂಪನ್ಮೂಲ ಹೆಚ್ಚಿಸುವ ಯೋಜನೆಗಳನ್ನು ರೂಪಿಸಿದ್ದಲ್ಲಿ ಸರ್ಕಾರ ಅನುದಾನ ನೀಡಲಿದೆ ಎಂದು ಪ್ರಕಟಿಸಿದರು.

ಕೆಲವು ಜಿಲ್ಲೆಗಳಲ್ಲಿ ಆಸ್ತಿತೆರಿಗೆಯನ್ನು ಸಂಗ್ರಹಿಸುವಲ್ಲಿ ಪ್ರಗತಿ ಕುಂಠಿತವಾಗಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಸಚಿವ ಪ್ರಿಯಾಂಕ್‌ ಖರ್ಗೆ ತೆರಿಗೆ ವಸೂಲಾತಿಗೆ ಆದ್ಯತೆ ನೀಡಲು ಗ್ರಾಮ ಪಂಚಾಯತಿ ಸಿಬ್ಬಂದಿಗೆ ಸೂಚನೆ ನೀಡಲು ಹಾಗೂ ಸಭೆ, ವಿಮರ್ಶೆ, ಸ್ಥಳ ಪರೀಕ್ಷೆ ಮೂಲಕ ಆದ್ಯ ಗಮನ ಹರಿಸಲು ತಾಲ್ಲೂಕು ಪಂಚಾಯತಿ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸಚಿವರು ಸೂಚನೆ ನೀಡಿದರು. ಈಚೆಗೆ ವಿಡಿಯೊ ಸಂವಾದ ಸಭೆಯಲ್ಲಿ ಸೂಚನೆ ನೀಡಿರುವಂತೆ ಕಾಯಕಗ್ರಾಮ ಯಶಸ್ಸಿಗೆ ಕ್ರಮ ಕೈಗೊಂಡು, ಗ್ರಾಮ ಪಂಚಾಯತಿಗಳನ್ನು ದತ್ತು ತೆಗೆದುಕೊಂಡು ಅವುಗಳ ಸರ್ವತೋಮುಖ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಬೇಕೆಂದು ಸಚಿವರು ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಿದರು.

ಸಾರ್ವಜನಿಕರು ನೀಡುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ಅವುಗಳ ನಿವಾರಣೆಗೆ ಕ್ರಮ ತೆಗೆದುಕೊಳ್ಳಲು ಸೂಚಿಸಿದ ಗ್ರಾಮೀಣಾಭಿವೃದ್ಧಿ ಸಚಿವರು ಮೇಜಿನಿಂದ ಮೇಜಿಗೆ ಪತ್ರ ರವಾನೆ ಆದ ಮಾತ್ರಕ್ಕೆ ಸಾರ್ವಜನಿಕರ ಸಮಸ್ಯೆ ಬಗೆಹರಿಯುವದಿಲ್ಲ, ಅವರ ಸಮಸ್ಯೆಗೆ ಪ್ರಾಮಾಣಿಕ ಪ್ರಯತ್ನ ಮಾಡಿ, ಕೆಳ ಹಂತದ ಅಧಿಕಾರಿಗಳಿಗೆ ಕಳುಹಿಸಿದ ದೂರುಗಳ ಸ್ಥಿತಿ ಗತಿಗಳ ಬಗ್ಗೆ ವಿವರಗಳನ್ನು ಪಡೆದು, ಸಮಸ್ಯೆ ಬಗೆಹರಿದ ನಂತರ ದೂರುದಾರರಿಗೆ ಉತ್ತರ ನೀಡುವ ಪರಿಪಾಠ ಬೆಳೆಸಿಕೊಳ್ಳಿ ಎಂದು ಸಲಹೆ ಮಾಡಿದರು.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಕಾರ್ಯದರ್ಶಿ ಸಮೀರ್‌ ಶುಕ್ಲಾ, ಪಂಚಾಯತ್‌ ರಾಜ್‌ ಇಲಾಖೆ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್‌ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.

Tags: bjp vs priyank khargePriyank Khargepriyank kharge |priyank kharge criticismpriyank kharge latest newspriyank kharge letterpriyank kharge letter to cmpriyank kharge letter to cm.priyank kharge newspriyank kharge on bjppriyank kharge on protestspriyank kharge on rsspriyank kharge press meetpriyank kharge puc failpriyank kharge remarkspriyank kharge rsspriyank kharge rss letterpriyank kharge speechpriyank kharge statementpriyank kharge statementsrss ban priyank kharge
Previous Post

ಬಿಹಾರದ ಮತದಾರರಿಗೆ ವೇತನ ಸಹಿತ ರಜೆ: ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದೇನು..?

Next Post

ಮೋದಿ ಬಳಿ ಇರೋದು‌ ನಕಲಿ ಪ್ರಮಾಣ ಪತ್ರ- ರಾಹುಲ್ ಆರೋಪ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ಮೋದಿ ಬಳಿ ಇರೋದು‌ ನಕಲಿ ಪ್ರಮಾಣ ಪತ್ರ- ರಾಹುಲ್ ಆರೋಪ

ಮೋದಿ ಬಳಿ ಇರೋದು‌ ನಕಲಿ ಪ್ರಮಾಣ ಪತ್ರ- ರಾಹುಲ್ ಆರೋಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada