ಕಲಬುರಗಿ : ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೇನೋ ಬಂದಿದೆ. ಆದರೆ ರಾಜ್ಯದ ಮುಂದಿನ ಸಿಎಂ ಯಾರು ಎಂಬ ಪ್ರಶ್ನೆಗೆ ಉತ್ತರ ಹುಡುಕುವುದೇ ವರಿಷ್ಠರಿಗೆ ದೊಡ್ಡ ತಲೆನೋವಾಗಿದೆ. ಸಿಎಂ ರೇಸ್ನಲ್ಲಿ ಈಗಾಗಲೇ ಸಿದ್ದರಾಮಯ್ಯ ಹಾಗೂ ಡಿಕೆಶಿ ಹೆಸರು ಮುಂಚೂಣಿಯಲ್ಲಿರುವ ನಡುವೆಯೇ ಇದೀಗ ಪ್ರಿಯಾಂಕ್ ಖರ್ಗೆ ಹೆಸರು ಕೂಡ ಮುನ್ನಲೆಗೆ ಬಂದಿದೆ.

ಚಿತ್ತಾರಪುರ ವಿಧಾನಸಭಾ ಕ್ಷೇತ್ರದ ಗೆಲ್ಲುವ ಕುದುರೆ ಎನಿಸಿರುವ ಪ್ರಿಯಾಂಕ್ ಖರ್ಗೆ ಈ ಬಾರಿ ಹ್ಯಾಟ್ರಿಕ್ ಗೆಲುವಿನ ಸಂಭ್ರಮದಲ್ಲಿದ್ದಾರೆ. ಅಪ್ಪನ ಕನಸಲ್ಲೇ ಕೋಟ್ಯಂತರ ಕನಸು ಎಂಬ ಪೋಸ್ಟ್ಗಳು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗ್ತಿದೆ.
ಟ್ವಿಟರ್, ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನಗಳು ಆರಂಭಗೊಂಡಿದ್ದು ಈ ಬಾರಿ ಪ್ರಿಯಾಂಕ್ ಖರ್ಗೆಗೆ ಸಿಎಂ ಸ್ಥಾನ ನೀಡಬೇಕು ಎಂಬ ಕೂಗು ಜೋರಾಗಿ ಕೇಳಿ ಬಂದಿದೆ.