• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

FACT CHECK: ಮಹಾಕುಂಭ ಮೇಳದಲ್ಲಿ ಪ್ರಿಯಾಂಕಾ ಗಾಂಧಿ ಪುಣ್ಯಸ್ನಾನ ಎಂದು 2021ರ ವೀಡಿಯೊ ವೈರಲ್

ಪ್ರತಿಧ್ವನಿ by ಪ್ರತಿಧ್ವನಿ
February 4, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಮಹಾಕುಂಭದಲ್ಲಿ ಪವಿತ್ರಸ್ನಾನ ಮಾಡಿದ್ದಾರೆ ಎಂಬ ಹೇಳಿಕೆಯೊಂದಿಗೆ ಫೋಟೋ ವೈರಲ್ ಆಗುತ್ತಿದೆ.

ADVERTISEMENT

ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಜನವರಿ 13 ರಂದು ಆರಂಭವಾದ ಮಹಾ ಕುಂಭಮೇಳದಲ್ಲಿ ಭಾಗವಹಿಸಲು ದೇಶದ ವಿವಿಧ ಭಾಗಗಳಿಂದ ಆಕಾಂಕ್ಷಿಗಳು ಬರುತ್ತಿದ್ದಾರೆ. ವಿದೇಶಿಗರು ಸೇರಿದಂತೆ ನಿತ್ಯ ಲಕ್ಷಾಂತರ ಜನರು ಆಗಮಿಸುತ್ತಾರೆ. ರಾಜಕಾರಣಿಗಳು, ಅನೇಕ ವಿಐಪಿಗಳು ಕೂಡ ಪುಣ್ಯಸ್ನಾನ ಮಾಡುತ್ತಿದ್ದಾರೆ. ಇದೀಗ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಮಹಾಕುಂಭದಲ್ಲಿ ಪವಿತ್ರಸ್ನಾನ ಮಾಡಿದ್ದಾರೆ ಎಂಬ ಹೇಳಿಕೆಯೊಂದಿಗೆ ಫೋಟೋ ವೈರಲ್ ಆಗುತ್ತಿದೆ.

ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಮ್‌ನಲ್ಲಿ ಜನವರಿ 30, 2025 ರಂದು “ಮಹಾಕುಂಭ ಮೇಳದಲ್ಲಿ ಪ್ರಿಯಾಂಕಾ ಗಾಂಧಿ ಪುಣ್ಯಸ್ನಾನ. ಕಾಂಗ್ರೆಸ್ ಅಧ್ಯಕ್ಷರೇ ನಿಮ್ಮ ಮಾತನ್ನು ನಿಮ್ಮ ಪಕ್ಷದ ಆದಾರ ಸ್ತಂಬಗಳೇ ಕೇಳುತ್ತಾ ಇಲ್ಲವಲ್ಲಾ” ಎಂದು ಅನೇಕ ಬಳಕೆದಾರರು ಬರೆಡು ಈ ಫೋಟೋವನ್ನು ಪೋಸ್ಟ್ ಮಾಡುತ್ತಿದ್ದಾರೆ.

ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ನೀವು ಇಲ್ಲಿ ಇಲ್ಲಿ ನೋಡಬಹುದು.

Watch: Priyanka Gandhi takes holy dip in Sangam, performs puja on Mauni Amavasya

Fact Check: ಈ ಪೋಸ್ಟ್‌ನ ಸತ್ಯಾಸತ್ಯತೆಯನ್ನು ನ್ಯೂಸ್ ಮೀಟರ್ ಪರಿಶೋದಿಸಿದಾಗ ಇದು ಸುಳ್ಳು. ಸುದ್ದಿ ಎಂಬುದು ಕಂಡುಬಂದಿದೆ. ಪ್ರಿಯಾಂಕಾ ಗಾಂಧಿ ಅವರು ಮಹಾಕುಂಭ 2025 ಕ್ಕೆ ತೆರಳಿಲ್ಲ, ಪವಿತ್ರಸ್ನಾನ ಮಾಡಿಲ್ಲ. ಇದು 2021ರಲ್ಲಿ ಮೌನಿ ಅಮಾವಾಸ್ಯೆಯಂದು ಪ್ರಯಾಗರಾಜ್‌ನ ಸಂಗಮದಲ್ಲಿ ಪ್ರಿಯಾಂಕಾ ಗಾಂಧಿ ಗಂಗೆಯಲ್ಲಿ ಪುಣ್ಯಸ್ನಾನ ಮಾಡಿದ ಫೋಟೋ ಆಗಿದೆ.

ನಿಜಾಂಶವನ್ನು ತಿಳಿಯಲು ನಾವು ವೈರಲ್ ಫೋಟೋವನ್ನು ಗೂಗಲ್ ಲೆನ್ಸ್ ಸಹಾಯದಿಂದ ಸರ್ಚ್ ಮಾಡಿದ್ದೇವೆ. ಆಗ ಇದೇ ವೈರಲ್ ಫೋಟೋವನ್ನು ಹಂಚಿಕೊಂಡು ಅನೇಕ ಮಾಧ್ಯಮಗಳು 2021ರ ಫೆಬ್ರವರಿಯಲ್ಲಿ ಸುದ್ದಿ ಪ್ರಕಟಿಸಿರುವುದು ಕಂಡುಬಂದಿದೆ. ‘ಮೌನಿ ಅಮಾವಾಸ್ಯೆಯಂದು ಪ್ರಯಾಗರಾಜ್ ಸಂಗಮದಲ್ಲಿ ಮಿಂದೆದ್ದ ಪ್ರಿಯಾಂಕಾ ಗಾಂಧಿ’ ಎಂದು ಟಿವಿ9 ಕನ್ನಡ ಫೆಬ್ರವರಿ 11, 2021 ರಂದು ಸುದ್ದಿ ಪ್ರಕಟಿಸಿದೆ.

“ಮೌನಿ ಅಮಾವಾಸ್ಯೆಯಾದ ಇಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಗಂಗೆಯಲ್ಲಿ ಪುಣ್ಯಸ್ನಾನ ಮಾಡಿದರು. ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಬಳಿ ಇರುವ ಸಂಗಮದಲ್ಲಿ ಪ್ರಿಯಾಂಕಾ ಗಾಂಧಿ ಮಿಂದೆದ್ದರು. ಪ್ರಯಾಗರಾಜ್‌ನ ಸಂಗಮದಲ್ಲಿ ಇಂದು ಮೌನಿ ಅಮಾವಾಸ್ಯೆಯಾದ ಕಾರಣ ಪ್ರಿಯಾಂಕಾ ಗಾಂಧಿ ತಮ್ಮ ಪುತ್ರಿ ಜೊತೆ ಪವಿತ್ರ ಸ್ನಾನ ನೆರವೇರಿಸಿದರು. ಪುಣ್ಯಸ್ನಾನದ ಬಳಿಕ ಪ್ರಿಯಾಂಕಾ ಗಾಂಧಿ ಜಗದ್ಗುರು ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರನ್ನು ಭೇಟಿಯಾದರು. ಶ್ರೀಗಳ ಜೊತೆ ಚರ್ಚೆ ನಡೆಸಿದ ಕಾಂಗ್ರೆಸ್ ನಾಯಕಿ ನಂತರ ಅವರ ಆಶೀರ್ವಾದ ಪಡೆದರು” ಎಂದು ವರದಿಯಲ್ಲಿದೆ.

Hindustan Times ಕೂಡ ಫೆಬ್ರವರಿ 11, 2021 ರಂದು, “ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮೌನಿ ಅಮವಾಸ್ಯೆಯಂದು ಅಲಹಾಬಾದ್‌ನ ಸಂಗಮದಲ್ಲಿ ಗುರುವಾರ ಪವಿತ್ರ ಸ್ನಾನ ಮಾಡಿ ಪೂಜೆ ಸಲ್ಲಿಸಿದರು. ಬೆಳಗ್ಗೆ ಇಲ್ಲಿಗೆ ಆಗಮಿಸಿ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ಕೃತಿ ನದಿಗಳ ಸಂಗಮಕ್ಕೆ ಆಗಮಿಸಿ ಪುಣ್ಯಸ್ನಾನ ಮಾಡಿ ಪೂಜೆಯಲ್ಲಿ ಪಾಲ್ಗೊಂಡರು” ಎಂದು ವೀಡಿಯೊ ಸುದ್ದಿ ಪ್ರಕಟಿಸಿದೆ. ಈ ವೀಡಿಯೊದ 1 ನಿಮಿಷ 21 ಸೆಕೆಂಡ್‌ನಲ್ಲಿ ವೈರಲ್ ಫೋಟೋವನ್ನು ನೋಡಬಹುದು.

ಪ್ರಿಯಾಂಕಾ ಗಾಂಧಿ ಅವರು 2021ರಲ್ಲಿ ಮೌನಿ ಅಮಾವಾಸ್ಯೆಯಂದು ಪ್ರಯಾಗರಾಜ್‌ನ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು ಎಂದು ವೈರಲ್ ಫೋಟೋದೊಂದಿಗೆ ಸುದ್ದಿ ಪ್ರಕಟ ಆಗಿರುವುದನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು.

ಇನ್ನು ಪ್ರಿಯಾಂಕಾ ಗಾಂಧಿ ಅವರು ಮಹಾಕುಂಭ 2025 ರಲ್ಲಿ ಪಾಲ್ಗೊಂಡಿದ್ದಾರ ಎಂಬ ಕುರಿತು ಹುಡುಕಿದ್ದೇವೆ. ಆದರೆ, ಈ ಕುರಿತು ಯಾವುದೇ ಸುದ್ದಿ ಮಾಧ್ಯಮ ವರದಿ ಮಾಡಿಲ್ಲ, ಪ್ರಿಯಾಂಕಾ ಅವರ ಸಾಮಾಜಿಕ ಜಾಲತಾಣಗಳಲ್ಲಿ ಕೂಡ ಅವರು ಮಹಾಕುಂಭಕ್ಕೆ ಹೋದ ಬಗ್ಗೆ ಎಲ್ಲೂ ಅಪೇಟ್ ಇಲ್ಲ. ಹೀಗಾಗಿ ಈ ಎಲ್ಲ ಮಾಹಿತಿಯ ಆಧಾರದ ಮೇಲೆ, ಪ್ರಿಯಾಂಕಾ ಗಾಂಧಿ ಮಹಾಕುಂಭದಲ್ಲಿ ಪವಿತ್ರಸ್ನಾನ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಫೋಟೋ 2021 ರದ್ದು ಎಂದು ನಾವು ಖಚಿತವಾಗಿ ಹೇಳುತ್ತೇವೆ.

ಈ Fact Check  ಅನ್ನು ನ್ಯೂಸ್‌ ಮೀಟರ್‌ ರವರು ಪ್ರಕಟಿಸಿದ್ದಾರೆ ಮತ್ತು ಶಕ್ತಿ ಕಲೆಕ್ಟೀವ್ ನ ಭಾಗವಾಗಿ ನ್ಯೂಸ್‌ ಮೀಟರ್‌ ರವರಿಂದ ಮರುಪ್ರಕಟಿಸಲಾಗಿದೆ.

Tags: Congress PartyFact checkKumbamelaMaha KumbamelaMallikarjun KhargeNews MeterPratidhvaniPriyanka GandhiRahul Gandhi
Previous Post

ಹಸಿ ಮೊಟ್ಟೆ ಸೇವನೆ ಆರೋಗ್ಯಕ್ಕೆ ಒಳ್ಳೆಯದ ಅಥವಾ ಸಮಸ್ಯೆಗಳೇ ಹೆಚ್ಚ?

Next Post

ಲೋಕಸಭೆಯಲ್ಲಿ ಪ್ರಧಾನಿ ಮೋದಿ ಮಹತ್ವದ ಭಾಷಣ..!

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post

ಲೋಕಸಭೆಯಲ್ಲಿ ಪ್ರಧಾನಿ ಮೋದಿ ಮಹತ್ವದ ಭಾಷಣ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada