2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ(karnataka assembly election 2023) ಇನ್ನು ಮೂರೇ ಮುರು ದಿನಗಳಷ್ಟೇ ಬಾಕಿ ಇದೆ. ಇದೇ ಮೇ 10ರಂದು ಚುನಾವಣೆ(election) ನಡೆಯಲಿದೆ. ಈಗಾಗಲೇ ಬಿಜೆಪಿ,(BJP) ಕಾಂಗ್ರೆಸ್,(CONGRESS) ಜೆಡಿಎಸ್(JDS) ಪಕ್ಷದ ನಾಯಕರು ರಾಜ್ಯದ ಮೂಲೆ ಮೂಲೆಗೂ ತಿರುಗಿ ಭರ್ಜರಿ ಮತ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಇಂದು ಮೂಡಬಿದರಿಯಲ್ಲಿ ಮತಯಾಚನೆ ಮಾಡಿದ್ದಾರೆ. ಇದೇ ವೇಳೆ ಸಾರ್ವಜನಿಕರ ಸಮಾವೇಶದಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ʻಪ್ರಧಾನಿ ನರೇಂದ್ರ ಮೋದಿ ಅವರು ನಿರುದ್ಯೋಗದ ಬಗ್ಗೆ ಮಾತನಾಡಲಿಲ್ಲ, ಬೆಲೆ ಏರಿಕೆ ಬಗ್ಗೆ ಮಾತನಾಡಲಿಲ್ಲ. ಕಾರಣ ಇವರ ಆಡಳಿತದಲ್ಲೇ ಈ ಸಮಸ್ಯೆಗಳು ಹೆಚ್ಚಾಗಿದ್ದು, ಇವುಗಳಿಗೆ ಪರಿಹಾರ ನೀಡಲು ಬಿಜೆಪಿ ಸರ್ಕಾರ(bjp government) ವಿಫಲವಾಗಿದೆ ಅಂತ ಟೀಕಿಸಿದ್ರು. ಇವರ ಆಡಳಿತದಲ್ಲಿ ಅಡುಗೆ ಅನಿಲ, ಬೇಳೆ ಕಾಳುಗಳು, ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ. ಖರೀದಿ ಮಾಡುವುದು ಕಷ್ಟವಾಗಿದೆ. ಹೀಗಾಗಿ ಅವರು ಭಯೋತ್ಪಾದನೆ ಹಾಗೂ ಸುರಕ್ಷತೆ ಬಗ್ಗೆ ಮಾತನಾಡುತ್ತಿದ್ದಾರೆ. ರಾಜ್ಯದಲ್ಲಿ ಪ್ರತಿನಿತ್ಯ 5 ಮಂದಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇಲ್ಲಿ ಜನರಿಗೆ ಭಯವಿರುವುದು ನಿರುದ್ಯೋಗ, ಬೆಲೆ ಏರಿಕೆಯಿಂದಾಗಿ ಅಂತ ಪ್ರಿಯಾಂಕಾ ಗಾಂಧಿ(priyanka gandhi) ಹೇಳಿದ್ರು.
6400 ರೈತರು ನಾಲ್ಕು ವರ್ಷಗಳಲ್ಲಿ ಆತ್ಮಹತ್ಯೆ ಮಾಡಿಕೊಂಡರೆ, 500ಕ್ಕೂ ಹೆಚ್ಚು ಜನ ಬಡತನದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿರುದ್ಯೋಗದಿಂದ 1,600 ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಧಾನಮಂತ್ರಿಗಳೇ ಕರ್ನಾಟಕದಲ್ಲಿ(karnataka) ಭಯೋತ್ಪಾದನೆ ಆಗಿದ್ದರೆ ಅದು ನಿಮ್ಮದೇ ಸರ್ಕಾರದ 40 ಪರ್ಸೆಂಟ್ ಕಮಿಷನ್ ನಿಂದಾಗಿ. ಜನರನ್ನು ಲೂಟಿ ಮಾಡುತ್ತಿರುವ ನಿಮ್ಮದೇ ನಾಯಕರಿಂದ ಜನ ಭಯಗೊಂಡಿದ್ದಾರೆ. ರಾಜ್ಯದಲ್ಲಿ ಆತಂಕವಿದ್ದರೆ ಈ ವಿಚಾರಗಳಿಂದಾಗಿ ಆತಂಕವಿದೆ ಅಂತ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ(bjp) ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ(priyanka gandhi) ಗುಡುಗಿದರು.