ನಿನ್ನೆಯಷ್ಟೇ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕರೋನಾ ಪಾಸಿಟಿವ್ ದೃಢಪಟ್ಟಿತ್ತು. ಇದೀಗ ಪ್ರಿಯಾಂಗಾ ಗಾಂಧಿ ವಾದ್ರಾ ಅವರಿಗೂ ಕೋವಿಡ್-19 ಪಾಸಿಟಿವ್ ಎಂಬುದು ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನನಗೂ ಸಣ್ಣ ಮಟ್ಟದ ಕೋವಿಡ್ ಲಕ್ಷಣಗಳಿದ್ದ ಕಾರಣ ಪರೀಕ್ಷೆಗೆ ಒಳಪಟ್ಟಿದ್ದೆ. ಅದರ ವರದಿ ಬಂದಿದ್ದು, ಕೋವಿಡ್-19 ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕಾರಣದಿಂದಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ಆಗಿ, ಚಿಕಿತ್ಸೆ ಪಡೆಯುತ್ತಿರೋದಾಗಿ ತಿಳಿಸಿದ್ದಾರೆ.
