ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಎರಡು ತಿಂಗಳಲ್ಲಿ ೨ನೇ ಬಾರಿ ಕೊರೊನಾ ಸೋಂಕು ಮತ್ತೆ ದೃಢಪಟ್ಟಿದೆ. ಸೋದರ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನಾರೋಗ್ಯಕ್ಕೆ ಒಳಗಾಗಿದ್ದು, ಅಲ್ವಾರ್ ಪ್ರವಾಸ ರದ್ದುಗೊಳಿಸಿದ್ದಾರೆ.
ಬುಧವಾರ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ನನಗೆ ಇಂದು ಮತ್ತೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ಮನೆಯಲ್ಲೇ ಐಸೋಲೇಷನ್ಗೆ ಒಳಗಾಗಿದ್ದೇನೆ. ಯಾರೆಲ್ಲ ನನ್ನ ಸಂಪರ್ಕ ಮಾಡಿದ್ದೀರಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಿ ಎಂದಿದ್ದಾರೆ.
ಕಳೆದ ತಿಂಗಳು ಕೊರೊನಾ ಸೋಂಕು ಕಾಣಿಸಿಕೊಂಡಿದ್ದರೂ ಕೆಲವೇ ದಿನಗಳಲ್ಲಿ ಪಿಯಾಂಕಾ ಗಾಂಧಿಗೆ ಗುಣಮುಖರಾಗಿದ್ದರು. ಇದೀಗ ಮತ್ತೆ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಎರಡು ತಿಂಗಳ ಅಂತರದಲ್ಲಿ ಎರಡನೇ ಬಾರಿ ಕೊರೊನಾ ಪಾಸಿಟಿವ್ ದೃಢಪಟ್ಟಂತಾಗಿದೆ.
ಜೂನ್ನಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು ಕಾಣಿಸಿಕೊಂಡು ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದರು. ಆ ಬಳಿಕ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.