• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪ್ರಧಾನಿಗೆ ಪ್ರಿಯಾಂಕಾ ಗಾಂಧಿ ಪತ್ರ: ಲಖಿಂಪುರ ಹಿಂಸಾಚಾರದ ಆರೋಪಿಯ ತಂದೆ ಸಚಿವ ಮಿಶ್ರಾ ವಜಾಗೊಳಿಸಲು ಮನವಿ

ಪ್ರತಿಧ್ವನಿ by ಪ್ರತಿಧ್ವನಿ
November 20, 2021
in ದೇಶ, ರಾಜಕೀಯ
0
ಪ್ರಧಾನಿಗೆ ಪ್ರಿಯಾಂಕಾ ಗಾಂಧಿ ಪತ್ರ: ಲಖಿಂಪುರ ಹಿಂಸಾಚಾರದ ಆರೋಪಿಯ ತಂದೆ ಸಚಿವ ಮಿಶ್ರಾ ವಜಾಗೊಳಿಸಲು ಮನವಿ
Share on WhatsAppShare on FacebookShare on Telegram

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂದು (ಶನಿವಾರ) ಲಖನೌನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಕೇಂದ್ರ ಸಚಿವ ಅಜಯ್ ಮಿಶ್ರಾ ‘ತೇನಿ’ ಅವರೊಂದಿಗೆ ವೇದಿಕೆ ಹಂಚಿಕೊಳ್ಳದಂತೆ ಒತ್ತಾಯಿಸಿದ್ದಾರೆ. ಮಿಶ್ರಾ ಅವರನ್ನು ವಜಾಗೊಳಿಸುವಂತೆಯೂ ಅವರು ಒತ್ತಾಯಿಸಿದ್ದಾರೆ. ಡಿಜಿಪಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಲಖನೌಗೆ ಬಂದಿದ್ದಾರೆ.

ADVERTISEMENT

ಲಖಿಂಪುರ ಖೇರಿಯಲ್ಲಿನ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಜಯ್ ಮಿಶ್ರಾ ಅವರ ಪುತ್ರನನ್ನು ಬಂಧಿಸಲಾಗಿದೆ. ಹೀಗಾಗಿ ಆರೋಪಿಯ ತಂದೆ ಜೊತೆ ವೇದಿಕೆ ಹಂಚಿಕೊಳ್ಳಬಾರದು ಮತ್ತು ಸಚಿವ ಅಜಯ್ ಮಿಶ್ರಾ ಅವರನ್ನು ವಜಾ ಮಾಡಬೇಕು ಎಂದು ಪ್ರಿಯಾಂಕಾ ಮನವಿ ಮಾಡಿದ್ದಾರೆ.

“ರೈತರ ಬಗ್ಗೆ ನಿಮ್ಮ ಉದ್ದೇಶಗಳು ಸ್ಪಷ್ಟವಾಗಿದ್ದರೆ, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರೊಂದಿಗೆ ವೇದಿಕೆಯನ್ನು ಹಂಚಿಕೊಳ್ಳಬೇಡಿ. ಅವರನ್ನು ವಜಾಗೊಳಿಸಿ,” ಎಂದು ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ಪ್ರಿಯಾಂಕಾ ಹೇಳಿದ್ದಾರೆ. ದೇಶದಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ತಮ್ಮ ಸರ್ಕಾರ ರದ್ದುಗೊಳಿಸುವುದಾಗಿ ಪ್ರಧಾನಿ ಮೋದಿ ಘೋಷಿಸಿದ ಒಂದು ದಿನದ ನಂತರ ಪ್ರಿಯಾಂಕಾ ಪತ್ರ ಬಂದಿದೆ.

ಅಕ್ಟೋಬರ್ 3 ರಂದು ಲಖಿಂಪುರದಲ್ಲಿ ಸಂಭವಿಸಿದ ಹಿಂಸಾಚಾರದಲ್ಲಿ ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದರು. ಸಾವಿಗೆ ಸಂಬಂಧಿಸಿದಂತೆ ಬಂಧಿತರಾದ 13 ಮಂದಿಯಲ್ಲಿ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಸೇರಿದ್ದಾರೆ. ಅಜಯ್ ಮಿಶ್ರಾ ಒಡೆತನದ ಮಹೀಂದ್ರಾ ಥಾರ್ ಎಸ್‌ಯುವಿ ಸೇರಿದಂತೆ ಮೂರು ವಾಹನಗಳ ಬೆಂಗಾವಲು ಪಡೆಯಿಂದ ಎಲ್ಲಾ ಸಂತ್ರಸ್ತರನ್ನು ಹೊಡೆದುರುಳಿಸಲಾಗಿದೆ. ಘಟನೆಯ ವೇಳೆ ಗುಂಡು ಹಾರಿಸಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಆದಾಗ್ಯೂ, ಶವಪರೀಕ್ಷೆಗಳು ಐವರಲ್ಲಿ ಯಾರಿಗೂ – ಅಥವಾ ಆ ದಿನದ ನಂತರದ ಹಿಂಸಾಚಾರದಲ್ಲಿ ಕೊಲ್ಲಲ್ಪಟ್ಟ ಇತರ ಮೂವರಿಗೆ – ಗುಂಡೇಟಿನಿಂದ ಗಾಯವಾಗಿಲ್ಲ ಎಂದು ದೃಢಪಡಿಸಿದೆ.

ಘಟನೆಯ ಕುರಿತು ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಪಡಿಸಿಕೊಂಡಿರುವ ಆರೋಪಿಗಳಿಗೆ ಸೇರಿದ ನಾಲ್ಕು ಶಸ್ತ್ರಾಸ್ತ್ರಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ಪರಿಶೀಲಿಸಿದೆ. ಇವುಗಳಲ್ಲಿ ಮೂರು ಆಯುಧಗಳು ಅಜಯ್ ಮಿಶ್ರಾ ಪುತ್ರ ಆಶೀಸ್ ಮತ್ತು ಇತರ ಬಿಜೆಪಿ ನಾಯಕರ ಸಂಬಂಧಿಗಳಿಗೆ ಸೇರಿವೆ ಎಂದು ಕಂಡುಬಂದಿದೆ.

ಎಫ್‌ಎಸ್‌ಎಲ್ ವರದಿಯಲ್ಲಿ ಬುಲೆಟ್‌ಗಳನ್ನು ಯಾವಾಗ ಹಾರಿಸಲಾಗಿದೆ ಎಂದು ಹೇಳಿಲ್ಲವಾದರೂ, ಆರೋಪಿಗಳು ಅಕ್ಟೋಬರ್ 3 ರಂದು ಶಸ್ತ್ರಾಸ್ತ್ರಗಳನ್ನು ಹಾರಿಸಿಲ್ಲ ಎಂಬುದಕ್ಕೆ ಈಗ ಪುರಾವೆಗಳನ್ನು ಒದಗಿಸಬೇಕು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಏತನ್ಮಧ್ಯೆ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ರಾಕೇಶ್ ಕುಮಾರ್ ಜೈನ್ ಅವರನ್ನು ತನಿಖೆಯ ಮೇಲ್ವಿಚಾರಣೆಗೆ ಸುಪ್ರೀಂ ಕೋರ್ಟ್ ನೇಮಿಸಿದೆ.

Tags: BJPCongress Partyಪ್ರಿಯಾಂಕಾ ಗಾಂಧಿಬಿಜೆಪಿಲಖಿಂಪುರ ಹಿಂಸಾಚಾರ
Previous Post

ಕೃಷಿ ಕಾನೂನುಗಳನ್ನು ಹಿಂಪಡೆದ ಮೋದಿ ಸರ್ಕಾರದ ಹಿಂದಿರುವ “ಮಾಸ್ಟರ್‌ ಪ್ಲಾನ್‌” ಏನು?

Next Post

ಕ್ಷಮೆಯಾಚಿಸಿದರು ಹಂಸಲೇಖರಿಗೆ ಕಿರುಕುಳ ನೀಡುತ್ತಿದ್ದಾರೆ, ನಾವು ಅವರ ಜೊತೆ ನಿಲ್ಲಬೇಕು – ನಟ ಚೇತನ್ ಅಹಿಂಸಾ

Related Posts

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..
Top Story

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ನಗರದ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ...

Read moreDetails
ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
ಕ್ಷಮೆಯಾಚಿಸಿದರು ಹಂಸಲೇಖರಿಗೆ ಕಿರುಕುಳ ನೀಡುತ್ತಿದ್ದಾರೆ, ನಾವು ಅವರ ಜೊತೆ ನಿಲ್ಲಬೇಕು – ನಟ ಚೇತನ್ ಅಹಿಂಸಾ

ಕ್ಷಮೆಯಾಚಿಸಿದರು ಹಂಸಲೇಖರಿಗೆ ಕಿರುಕುಳ ನೀಡುತ್ತಿದ್ದಾರೆ, ನಾವು ಅವರ ಜೊತೆ ನಿಲ್ಲಬೇಕು - ನಟ ಚೇತನ್ ಅಹಿಂಸಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada