• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, September 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Priyanka Upendra: ಪ್ರಿಯಾಂಕಾ ಉಪೇಂದ್ರ ಮೊಬೈಲ್​ ಹ್ಯಾಕ್; ಹಣಕ್ಕೆ ಬೇಡಿಕೆ ಇಟ್ಟ ಹ್ಯಾಕರ್..!!

ಪ್ರತಿಧ್ವನಿ by ಪ್ರತಿಧ್ವನಿ
September 15, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಸೈಬರ್ ವಂಚಕರ ಜಾಲಕ್ಕೆ ನಟ ಉಪೇಂದ್ರ ಮತ್ತು ಅವರ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರು ಸಿಕ್ಕಿಕೊಂಡಿದ್ದಾರೆ. ಮೊಬೈಲ್ ನಂಬರ್ ಹ್ಯಾಕ್ ಮಾಡುವ ಮೂಲಕ ಹಲವರಿಗೆ ಮೆಸೇಜ್ ಕಳಿಸಿ ಹಣಕ್ಕಾಗಿ ಮನವಿ ಮಾಡಲಾಗಿದೆ. ಕೂಡಲೇ ಉಪೇಂದ್ರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ADVERTISEMENT

ಉಪೇಂದ್ರ ಮತ್ತು ಅವರ ಪತ್ನಿ ಪ್ರಿಯಾಂಕಾಗೆ (Priyanka Upendra)  ಸೈಬರ್ ಖದೀಮರು ಶಾಕ್ ನೀಡಿದ್ದಾರೆ. ಇಬ್ಬರ ಮೊಬೈಲ್ ಹ್ಯಾಕ್ (Mobile Hack) ಮಾಡಲಾಗಿದೆ. ಬಳಿಕ ಪರಿಚಯದವರಿಗೆ ವಾಟ್ಸಪ್ ಮೂಲಕ ಸಂದೇಶ ಕಳಿಸಿ ಹಣ ಕೊಡುವಂತೆ ಮನವಿ ಮಾಡಿದ್ದಾರೆ. ಹ್ಯಾಕರ್​​ಗಳ ಈ ಜಾಲಕ್ಕೆ ಕೆಲವರು ಹಣ ಕಳೆದುಕೊಂಡಿದ್ದಾರೆ. ಸ್ವತಃ ಉಪೇಂದ್ರ ಅವರ ಮಗ ಆಯುಷ್ ಕೂಡ 55 ಸಾವಿರ ರೂಪಾಯಿ ಕಳೆದುಕೊಂಡಿದ್ದಾರೆ. ಈ ಘಟನೆ ಹೇಗೆ ನಡೆಯಿತು ಎಂಬುದನ್ನು ಉಪೇಂದ್ರ ಅವರು ವಿವರಿಸಿದ್ದಾರೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಬಳಿಕ ಉಪೇಂದ್ರ (Upendra) ಅವರು ಈ ಬಗ್ಗೆ ಮಾಹಿತಿ ನೀಡಿದರು.

‘ಯಾರಿಗೂ ಈ ರೀತಿ ಆಗಬಾರದು. ಯಾವುದೋ ಒಂದು ನಂಬರ್​​ನಿಂದ ಪ್ರಿಯಾಂಕಾ ಅವರಿಗೆ ಕರೆ ಬಂತು. ನೀವು ಏನೋ ಐಟಂ ಆರ್ಡರ್ ಮಾಡಿದ್ದೀರಿ, ಅದಕ್ಕೆ ನಿಮ್ಮ ಅಡ್ರೆಸ್ ಹುಡುಕುತ್ತಿದ್ದಾರೆ, ಸ್ಟಾರ್ ಹಾಗೂ ಹ್ಯಾಶ್ ಇರುವ ಒಂದು ನಂಬರ್​​ಗೆ ಕರೆ ಮಾಡಿ ಎಂದು ಹ್ಯಾಕರ್​​ಗಳು ಹೇಳಿದರು. ಪ್ರಿಯಾಂಕಾ ಫೋನ್​​ನಿಂದ ಆಗಲಿಲ್ಲ. ಬಳಿಕ ನನ್ನ ಫೋನ್ ಹಾಗೂ ಮ್ಯಾನೇಜರ್ ಮಾದೇವ ಅವರ ಫೋನ್​​ನಿಂದ ಪ್ರಯತ್ನಿಸಿದೆವು. ಮೂವರ ಮೊಬೈಲ್ ಕೂಡ ಹ್ಯಾಕ್ ಆಯಿತು’ ಎಂದು ಉಪೇಂದ್ರ ಹೇಳಿದ್ದಾರೆ.

‘ಹ್ಯಾಕ್ ಆದ ಬಳಿಕ ನಮ್ಮ ಫೋನಿಂದ ಬೇರೆಯವರಿಗೆ ಮೆಸೇಜ್ ಹೋಗುತ್ತಿದೆ. ಅರ್ಜೆಂಟಾಗಿ 55 ಸಾವಿರ ರೂಪಾಯಿ ಕಳಿಸಿ ಅಂತ ಎಲ್ಲರಿಗೂ ಕೇಳುತ್ತಿದ್ದಾರೆ. ಖಚಿತಪಡಿಸಿಕೊಳ್ಳಲು ಫೋನ್ ಮಾಡಿದರೆ ರೀಚ್ ಆಗುವುದಿಲ್ಲ. ಏನೋ ಎಮರ್ಜೆನ್ಸಿ ಇರಬಹುದು ಎಂದು ನಮಗೆ ಗೊತ್ತಿರುವ ಕೆಲವರು ದುಡ್ಡು ಕಳಿಸಿದ್ದಾರೆ. ಕೂಡಲೇ ನಾವು ಇಲ್ಲಿ ಬಂದು ದೂರು ನೀಡಿದ್ದೇನೆ. ಇಂಥ ಮೆಸೇಜ್ ಬಂದರೆ ದಯವಿಟ್ಟು ಯಾರೂ ಕೂಡ ದುಡ್ಡು ಕಳಿಸಬೇಡಿ’ ಎಂದು ಉಪೇಂದ್ರ ಅವರು ಎಚ್ಚರಿಕೆ ನೀಡಿದ್ದಾರೆ.

‘ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ. ನನ್ನ ಮಗನಿಗೂ ಹಾಗೆಯೇ ಆಗಿದೆ. ನಿಜ ಇರಬಹುದು ಎಂದುಕೊಂಡು ಅವರು ದುಡ್ಡು ಹಾಕಿದ್ದಾನೆ. ಕೆಲವು ಸ್ನೇಹಿತರದ್ದೂ ಸೇರಿ ಲಕ್ಷಾಂತರ ರೂಪಾಯಿ ಹೋಗಿದೆ. ಇನ್ನೂ ಯಾರೆಲ್ಲ ಮಾಡಿದ್ದಾರೋ ಗೊತ್ತಿಲ್ಲ. ಅದನ್ನೆಲ್ಲ ಚೆಕ್ ಮಾಡಬೇಕು’ ಎಂದಿದ್ದಾರೆ ಉಪೇಂದ್ರ. ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದು ಅವರು ತಿಳಿಸಿದ್ದಾರೆ.

Tags: priyanka upendrapriyanka upendra all moviespriyanka upendra familypriyanka upendra homepriyanka upendra housepriyanka upendra interviewpriyanka upendra love storypriyanka upendra moviespriyanka upendra new housepriyanka upendra new moviepriyanka upendra newspriyanka upendra shortspriyanka upendra songspriyanka upendra songs hotpriyanka upendra statusupendra priyanka upendraupendra wife priyanka
Previous Post

DK Shivakumar: ಪ್ರಜಾಪ್ರಭುತ್ವವನ್ನು ಪ್ರತಿಯೊಬ್ಬರೂ ಉಳಿಸಿ ಬೆಳೆಸಬೇಕಿದೆ..

Next Post

CM Siddaramaiah: ಮತಗಳ್ಳತನಕ್ಕೆ ಅವಕಾಶ ನೀಡಬೇಡಿ-ರಾಜ್ಯದ ಜನರಿಗೆ ಸಿಎಂ ಕರೆ

Related Posts

ಮೈಸೂರು ದಸರಾ ಉದ್ಘಾಟಕರ ಹೆಸರು ಘೋಷಣೆ: ಯಾರಿಂದ ಉದ್ಘಾಟನೆ ?
ಕರ್ನಾಟಕ

ಮೈಸೂರು ದಸರಾ ಉದ್ಘಾಟಕರ ಹೆಸರು ಘೋಷಣೆ: ಯಾರಿಂದ ಉದ್ಘಾಟನೆ ?

by ಪ್ರತಿಧ್ವನಿ
September 24, 2026
0

ಈ ಬಾರಿಯ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಕೊಪ್ಪಳ ಗವಿಮಠದ 18ನೇ ಪೀಠಾಧಿಪತಿ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ನೆರವೇರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.ನಾಡಹಬ್ಬ...

Read moreDetails
ಎಸ್‌ಐಆರ್ ರದ್ದುಪಡಿಸಿ ಹೊಸದಾಗಿ ಮತದಾರರ ಪಟ್ಟಿ ಸಿದ್ಧಪಡಿಸಿ: ಸಿಇಸಿ ರಾಜೀನಾಮೆಗೆ ಡಿಕೆಶಿ ಆಗ್ರಹ

ಎಸ್‌ಐಆರ್ ರದ್ದುಪಡಿಸಿ ಹೊಸದಾಗಿ ಮತದಾರರ ಪಟ್ಟಿ ಸಿದ್ಧಪಡಿಸಿ: ಸಿಇಸಿ ರಾಜೀನಾಮೆಗೆ ಡಿಕೆಶಿ ಆಗ್ರಹ

September 24, 2026
ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್  ಅಂಕ ಪತನ; ಕಾರಣವೇನು‌?

ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್  ಅಂಕ ಪತನ; ಕಾರಣವೇನು‌?

September 24, 2026
‘ಭಾರತದಲ್ಲಿ ಎಲ್ಲಾ ಚುನಾವಣೆಗಳೂ ಅಕ್ರಮದಿಂದ ಕೂಡಿವೆ’: ರಾಹುಲ್ ಗಾಂಧಿ ಗಂಭೀರ ಆರೋಪ

‘ಭಾರತದಲ್ಲಿ ಎಲ್ಲಾ ಚುನಾವಣೆಗಳೂ ಅಕ್ರಮದಿಂದ ಕೂಡಿವೆ’: ರಾಹುಲ್ ಗಾಂಧಿ ಗಂಭೀರ ಆರೋಪ

September 24, 2026
ಅಧಿಕ ಉಪ್ಪು, ಸಕ್ಕರೆ, ಕೊಬ್ಬು ಹೊಂದಿರುವ ಪ್ಯಾಕ್ಡ್ ಆಹಾರಗಳಿಗೆ ಕೆಂಪು ಎಚ್ಚರಿಕೆ ಲೇಬಲ್: FSSAI ಮಹತ್ವದ ಪ್ರಸ್ತಾವನೆ

ಅಧಿಕ ಉಪ್ಪು, ಸಕ್ಕರೆ, ಕೊಬ್ಬು ಹೊಂದಿರುವ ಪ್ಯಾಕ್ಡ್ ಆಹಾರಗಳಿಗೆ ಕೆಂಪು ಎಚ್ಚರಿಕೆ ಲೇಬಲ್: FSSAI ಮಹತ್ವದ ಪ್ರಸ್ತಾವನೆ

September 24, 2026
Next Post

CM Siddaramaiah: ಮತಗಳ್ಳತನಕ್ಕೆ ಅವಕಾಶ ನೀಡಬೇಡಿ-ರಾಜ್ಯದ ಜನರಿಗೆ ಸಿಎಂ ಕರೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada