ಕಾವೇರಿ ವಿವಾದ ಹಿನ್ನೆಲೆ ನದಿ ನೀರಿಗಾಗಿ ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸೋಮವಾರ (ಸೆಪ್ಟೆಂಬರ್ 4) ಮತ್ತಷ್ಟು ತೀವ್ರ ಸ್ವರೂಪ ಪಡೆದಿದೆ.
ರೈತರ ಪ್ರತಿಭಟನೆಯೊಂದಿಗೆ ರಾಜ್ಯದ ಕನ್ನಡಪರ ಸಂಘಟನೆಗಳು ಕೈಜೋಡಿಸಿದ್ದು, ಶ್ರೀರಂಗಪಟ್ಟಣದ ಹನುಮಂತನಗರದಲ್ಲಿ ವಿನೂತನ ರೀತಿಯಲ್ಲಿ ನಡೆಸಿದ್ದಾರೆ. ಮಿನರಲ್ ವಾಟರ್ನಲ್ಲಿ ಭತ್ತದ ಪೈರು ನಾಟಿ ಮಾಡಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
ಅಲ್ಲದೆ, ಕೆಲ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕಾವೇರಿ ನದಿಗಿಳಿದು, ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.
ಈ ನಡುವೆ ಮಂಡ್ಯದ ಕಾವೇರಿ ನೀರಾವರಿ ನಿಗಮದ ಕಚೇರಿ ಬಳಿ ಕನ್ನಡ ಪರ ಸಂಘಟನೆಯ ಕೆಲ ಕಾರ್ಯಕರ್ತರು ಕಾವೇರಿ ಮಾತೆಗೆ ಅಭಿಷೇಖ ಮಾಡಿ, ಪೂಜೆ ಸಲ್ಲಿಸಿ ಸರ್ಕಾರದ ವಿರುದ್ಧ ಕಿಡಿಕಾರಿದರು.