ಚಿಕ್ಕಮಗಳೂರು: ಇತ್ತೀಚೆಗಷ್ಟೇ ವಿಧಾನಸೌಧದಲ್ಲಿ ʻಪಾಕಿಸ್ತಾನ ಜಿಂದಾಬಾದ್ʼ ಘೋಷಣೆ (Pak Slogan) ಕೂಗಿದ್ದು, ದೇಶದಲ್ಲಿ ಭಾರೀ ಸದ್ದು ಮಾಡಿತ್ತು. ತೀವ್ರ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಈಗ ಇಂತಹುದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಜಿಲ್ಲೆಯ ಕೊಪ್ಪ ಪಟ್ಟಣದ (Koppa City) ಅಸ್ಗರ್ ಎಂಬ ವ್ಯಕ್ತಿ ತನ್ನ ಫೇಸ್‌ಬುಕ್ ನಲ್ಲಿ ʻಪಾಕಿಸ್ತಾನ್ ಜಿಂದಾಬಾದ್ʼ ಎಂದು ಬರೆದುಕೊಂಡಿದ್ದಾನೆ. ಅಲ್ಲದೇ ಪ್ರಧಾನಿ ಮೋದಿ ವಿರುದ್ಧ ಹಾಗೂ ಬಜರಂಗದಳದ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾನೆ. ಆನಂತರ ಡಿಲೀಟ್ ಮಾಡಿದ್ದಾನೆ.
ಸಂಗ್ರಹಿತ ಪೋಸ್ಟ್ ಆಧಿರಿಸಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿರುವ ಕೊಪ್ಪ ಪೊಲೀಸರು ಅಸ್ಗರ್ ಗಾಗಿ ಬಲೆ ಬೀಸಿದ್ದಾರೆ. ಇದಕ್ಕೆ ಹಿಂದೂ ಸಂಘಟನೆಗಳು ಆಕ್ರೋಶ ಹೊರಹಾಕಿವೆ.