• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, July 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಿ.ಮೂರ್ತಿ ನಿರ್ಮಾಣ ಹಾಗೂ ಒರಟ ಶ್ರೀ ನಿರ್ದೇಶನದ ಈ ಚಿತ್ರ ಫೆಬ್ರವರಿ 7 ರಂದು ತೆರೆಗೆ

ಪ್ರತಿಧ್ವನಿ by ಪ್ರತಿಧ್ವನಿ
January 8, 2025
in Top Story, ಇತರೆ / Others, ಕರ್ನಾಟಕ
0
ಪಿ.ಮೂರ್ತಿ ನಿರ್ಮಾಣ ಹಾಗೂ ಒರಟ ಶ್ರೀ ನಿರ್ದೇಶನದ ಈ ಚಿತ್ರ ಫೆಬ್ರವರಿ 7 ರಂದು ತೆರೆಗೆ
Share on WhatsAppShare on FacebookShare on Telegram

ರತ್ನಮ್ಮ‌ ಮೂವೀಸ್ ಲಾಂಛನದಲ್ಲಿ ಪಿ.ಮೂರ್ತಿ ನಿರ್ಮಿಸಿರುವ, ಒರಟ ಶ್ರೀ ನಿರ್ದೇಶನದ ಹಾಗೂ ರಿಯಾಲಿಟಿ ಶೋ ಮೂಲಕ ನಾಡಿನ ಜನರ ಗಮನ ಸೆಳೆದಿದ್ದ ಸುನಾಮಿ ಕಿಟ್ಟಿ ನಾಯಕನಾಗಿ ನಟಿಸಿರುವ “ಕೋರ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಫೆಬ್ರವರಿ 7 ರಂದು ಪ್ಯಾನ್ ಇಂಡಿಯಾ ಚಿತ್ರವಾಗಿ ತೆರೆ ಕಾಣುತ್ತಿರುವ ಈ ಚಿತ್ರದ ಕನ್ನಡ ಟ್ರೇಲರ್ ಅನ್ನು ಮಹರ್ಷಿ ಆನಂದ ಗುರೂಜಿ ಹಾಗೂ ಪಾಲನಹಳ್ಳಿ ಗುರೂಜಿ ಅವರು ಬಿಡುಗಡೆ ಮಾಡಿದರು.

ADVERTISEMENT

ತಮಿಳು ಟ್ರೇಲರ್, ನಿರ್ದೇಶಕರಾದ ಆರ್ ಚಂದ್ರು ಹಾಗೂ ಬಹದ್ದೂರ್ ಚೇತನ್ ಕುಮಾರ್ ಅವರಿಂದ ಅನಾವರಣವಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ ಅಧ್ಯಕ್ಷ ಉಮೇಶ್ ಬಣಕಾರ್‌, ನಟ ಕಾಕ್ರೋಜ್ ಸುಧೀ, ಒರಟ ಪ್ರಶಾಂತ್, ನಿರ್ಮಾಪಕ ಸಂಜಯ್ ಗೌಡ, ತುಕಾಲಿ ಸಂತೋಷ್ ಸೇರಿದಂತೆ ಸಾಕಷ್ಟು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಕೊರಗಜ್ಜನ ಆಶೀರ್ವಾದದಿಂದ ಆರಂಭವಾದ ಚಿತ್ರ “ಕೋರ” ಎಂದು ಮಾತನಾಡಿದ ನಿರ್ಮಾಪಕ ಪಿ.ಮೂರ್ತಿ, ಇದೊಂದು ನಮ್ಮ ನೆಲದ ಕಥೆ.‌ ಆದಿವಾಸಿ ಬುಡಕಟ್ಟು ಜನಾಂಗ ಹಾಗೂ ರಾಕ್ಷಸನೊಬ್ಬನ‌ ಕುರಿತಾದ ಕಥೆಯೂ ಹೌದು. ಹೆಚ್ಚಿನ ಭಾಗದ ಚಿತ್ರೀಕರಣ ಕಾಡಿನಲ್ಲೇ ನಡೆದಿದೆ.‌ ಸಕಲೇಶಪುರ, ಶೃಂಗೇರಿ, ಉಡುಪಿ, ಮಂಗಳೂರು ಮುಂತಾದ ಕಡೆ ಚಿತ್ರೀಕರಣವಾಗಿದೆ. ನಿರ್ದೇಶಕ ಒರಟ ಶ್ರೀ ಒಂದೊಳ್ಳೆ ಕಥೆ ಮಾಡಿದ್ದಾರೆ. ಸುನಾಮಿ ಕಿಟ್ಟಿ ಚೆನ್ನಾಗಿ ನಟಿಸಿದ್ದಾರೆ.‌ ನಾನು ಕೂಡ ಕಠೋರ ಎಂಬ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಎಲ್ಲಾ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರದಿಂದ ಉತ್ತಮ‌ವಾಗಿ ಮೂಡಿಬಂದಿರುವ ಈ ಚಿತ್ರ ಫೆಬ್ರವರಿ 7 ರಂದು ಕನ್ನಡ,‌ ತಮಿಳು ಹಾಗೂ ತೆಲುಗಿನಲ್ಲಿ ಬಿಡುಗಡೆಯಾಗಲಿದೆ.‌ ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

ಈ ಚಿತ್ರವನ್ನು ನಿರ್ದೇಶಿಸಲು ಅವಕಾಶ ಮಾಡಿಕೊಟ್ಟ ನಿರ್ಮಾಪಕರಿಗೆ, ತಂದೆ, ತಾಯಿಗೆ ಹಾಗೂ ಚಿತ್ರಕ್ಕೆ‌ ಸಹಕಾರ ನೀಡಿದ ಇಡೀ ತಂಡಕ್ಕೆ ಧನ್ಯವಾದ ತಿಳಿಸಿ ಮಾತನಾಡಿದ ನಿರ್ದೇಶಕ ಶ್ರೀ, “ಕೋರ” ನಲವತ್ತು ವರ್ಷಗಳ ಹಿಂದಿನ ಕಥೆ. ಆ ಕಾಲದಲ್ಲಿ ಪ್ರಕೃತಿಯನ್ನು ದೇವರ ತರಹ ಆರಾಧಿಸುತ್ತಿದ್ದರು.‌ ಈಗ ಒಂದು ಅಡಿ ಜಾಗಕ್ಕೂ ಹೊಡೆದಾಟ. ಈ ರೀತಿಯ ವಿಭಿನ್ನ ಕಂಟೆಂಟ್ ಹೊಂದಿರುವ ಕಮರ್ಷಿಯಲ್ ಚಿತ್ರವಿದು. ಇದು ಪ್ಯಾನ್ ಇಂಡಿಯಾ ಚಿತ್ರ ಅಂತ ಮಾಡಿಲ್ಲ.‌ ಕನ್ನಡ ಚತ್ರವಿದು. ಈ ಚಿತ್ರ ನೋಡಿದ ಕೆಲವರು ಇದು ಎಲ್ಲಾ ಭಾಷೆಗಳಿಗೂ ಹೊಂದುವ ಕಥೆ. ಹಾಗಾಗಿ ಎಲ್ಲಾ ಭಾಷೆಗಳಲ್ಲೂ ಬಿಡುಗಡೆ ಮಾಡಿ ಎಂದು ಹೇಳಿದರು ಎಂದರು.

ನನ್ನನ್ನು ನಾಯಕನನ್ನಾಗಿ ಮಾಡಿದ ಪಿ.ಮೂರ್ತಿ ಅವರಿಗೆ ಹಾಗೂ ನನಗೆ ಅಭಿನಯ ಹೇಳಿಕೊಟ್ಟು ಚಿತ್ರದಲ್ಲಿ ನಟಿಸಲು ಸಿದ್ದತೆ ಮಾಡಿಸಿದ ನಿರ್ದೇಶಕರಾಗಿ ಶ್ರೀ ಅವರಿಗೆ ಧನ್ಯವಾದ. ನಮ್ಮ ತಂಡದ ಶ್ರಮದಿಂದ “ಕೋರ” ಒಂದೊಳ್ಳೆ ಚಿತ್ರವಾಗಿ ನಿಮ್ಮ ಮುಂದೆ ಬರುತ್ತಿದೆ ನೋಡಿ ಹಾರೈಸಿ ಎಂದು ನಾಯಕ ಸುನಾಮಿ‌ ಕಿಟ್ಟಿ ಹೇಳಿದರು.

Tags: Actors MK MathActress SoujanyaCinematographer SelvamEditor K.Girish Kumar and Tamil Distributor Shaan and Telugu Distributor Balaji "Kora".film "Kora"film on 7th FebruaryHeroine CharismaLyricist Revanna NayakMuniMusic Director Hemanth KumarNeenasam Aswathproduced by P. Murthy.Producer CheluvarajuSandal wood movieYathiraj
Previous Post

ಮಂಡ್ಯದಲ್ಲಿ ಮತ್ತೆ ಶುರು ಕ್ರೆಡಿಟ್ ಪಾಲಿಟಿಕ್ಸ್ – ಒಂದೇ ಕಾಮಗಾರಿಗೆ ಎರಡು ಬಾರಿ ಪೂಜೆ ! HDK V/S ಚೆಲುವರಾಯ ಸ್ವಾಮಿ ಕ್ರೆಡಿಟ್ ವಾರ್ 

Next Post

ಡಿಸಿಎಂ ಡಿ.ಕೆ. ಶಿವಕುಮಾರ್ ಸಹನೆ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ:ಬಸವರಾಜ ಬೊಮ್ಮಾಯಿ

Related Posts

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ
Top Story

ಜಮೀರ್ ಪ್ರಕರಣದಲ್ಲಿ ರಾಜ್ಯಪಾಲರ ಮಹತ್ವದ ನಡೆ; ತಾಂತ್ರಿಕ ಲೋಪ ಉಲ್ಲೇಖಿಸಿ ಕಡತ ವಾಪಸ್

by ಪ್ರತಿಧ್ವನಿ
July 14, 2026
0

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ತನಿಖೆ ಮುಂದುವರಿಸಲು ಹಾಗೂ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ...

Read moreDetails
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

LPG ಗ್ರಾಹಕರಿಗೆ ಹೊಸ ನಿಯಮಗಳು ಜಾರಿ: ಸಿಲಿಂಡರ್ ಬುಕ್ಕಿಂಗ್‌ನಿಂದ ಕನೆಕ್ಷನ್ ರದ್ದತಿವರೆಗೆ ಮಹತ್ವದ ಬದಲಾವಣೆ

July 14, 2026
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ನಾಡಗೀತೆಯಲ್ಲಿ ಮಹತ್ವದ ಬದಲಾವಣೆ?ಕುವೆಂಪು ನಾಡಗೀತೆಗೆ ಹೊಸ ರೂಪ? 

July 14, 2026
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

July 14, 2026
AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

July 14, 2026
Next Post
ಡಿಸಿಎಂ ಡಿ.ಕೆ. ಶಿವಕುಮಾರ್ ಸಹನೆ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ:ಬಸವರಾಜ ಬೊಮ್ಮಾಯಿ

ಡಿಸಿಎಂ ಡಿ.ಕೆ. ಶಿವಕುಮಾರ್ ಸಹನೆ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ:ಬಸವರಾಜ ಬೊಮ್ಮಾಯಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada