• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಖಂಡತೆಯಿಂದ ಮಾತ್ರ ಲಿಂಗಾಯತರ ಏಳ್ಗೆ: ಎಂ ಬಿ ಪಾಟೀಲ

ಪ್ರತಿಧ್ವನಿ by ಪ್ರತಿಧ್ವನಿ
January 17, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ಮೈಸೂರು: ಲಿಂಗಾಯತ ಸಮುದಾಯವು ತನ್ನಲ್ಲಿರುವ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಮತ್ತು ಮಧ್ಯ ಕರ್ನಾಟಕ ಎಂಬ ತಾರತಮ್ಯಗಳನ್ನು ಮರೆತು ಒಗ್ಗೂಡಿದರೆ ಮಾತ್ರ ಏಳಿಗೆ ಸಾಧ್ಯವಾಗಲಿದೆ. ಇದರ ಜೊತೆಗೆ ಸಮುದಾಯದ ಸದಸ್ಯರು ಉದ್ಯಮಶೀಲತೆ ಬೆಳೆಸಿಕೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಹೇಳಿದ್ದಾರೆ.

ADVERTISEMENT

ಇಂಟರ್ನ್ಯಾಷನಲ್ ಲಿಂಗಾಯತ ಯೂತ್ ಫೋರಂ ಇಲ್ಲಿ ಏರ್ಪಡಿಸಿರುವ 13ನೇ ವರ್ಷದ ಉದ್ಯಮ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಶುಕ್ರವಾರ ಅವರು ಮಾತನಾಡಿದರು.

ಲಿಂಗಾಯತ ಸಮುದಾಯ ರಾಜ್ಯದ ಉದ್ದಕ್ಕೂ ಇದೆ. ಆದರೆ ನಮ್ಮಲ್ಲಿ ಅಖಂಡತೆಯ ಪ್ರಜ್ಞೆ ಇಲ್ಲ. ಇದು ದೊಡ್ಡ ಸಮಸ್ಯೆಯಾಗಿದೆ. ಸಮುದಾಯದ ಸದಸ್ಯರ ನಡುವೆ ಪರಸ್ಪರ ಸಂಪರ್ಕವನ್ನು ಬೆಳೆಸಬೇಕಾದ್ದು ಈಗಿನ ಜರೂರಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಲಿಂಗಾಯತ ಸಮುದಾಯವು ನಾಡಿನಲ್ಲಿ ಶೈಕ್ಷಣಿಕ ಕ್ರಾಂತಿಗೆ ಕಾರಣವಾಗಿದೆ. ನಾವು ಈ ಸಮಾಜಕ್ಕೆ ಕೊಡುತ್ತ ಬಂದಿರುವವರೇ ವಿನಾ ಬೇಡಿದವರಲ್ಲ. ಸಮುದಾಯದ ಮಠಮಾನ್ಯಗಳಲ್ಲಿ ಲಕ್ಷಾಂತರ ಜನರಿಗೆ ಊಟ ಮತ್ತು ವಸತಿಯ ದಾಸೋಹವನ್ನು ನಡೆಸಿಕೊಂಡು ಬರುತ್ತಿದ್ದೇವೆ. ಈಗ ಹೊರಳು ಹಾದಿಯಲ್ಲಿ ಇದ್ದೇವೆ ಎಂದು ಅವರು ನುಡಿದಿದ್ದಾರೆ.

ಸರ್ಕಾರವು ಹತ್ತಾರು ಉಪಯುಕ್ತ ಉಪಕ್ರಮಗಳಿರುವ ಕೈಗಾರಿಕಾ ನೀತಿಯನ್ನು ಹೊಂದಿದೆ. ರಾಜ್ಯದ ಪ್ರತಿಯೊಂದು ಭಾಗದಲ್ಲೂ ಬಗೆಬಗೆಯ ಉದ್ದಿಮೆಗಳು ನೆಲೆಯೂರಬೇಕು ಎಂಬ ಸದಾಶಯದಿಂದ ಹಲವು ಪ್ರೋತ್ಸಾಹಕ ಕ್ರಮಗಳನ್ನು ಅಳವಡಿಸಿ ಕೊಂಡಿದ್ದೇವೆ. ಲಿಂಗಾಯತ ಸಮುದಾಯ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಅವರು ಕರೆ ಕೊಟ್ಟಿದ್ದಾರೆ.

ಹಳೆ ಮೈಸೂರು ಭಾಗದಲ್ಲಿ ಸುತ್ತೂರು ಮತ್ತು ಸಿದ್ಧಗಂಗಾ ಮಠಗಳು ಅಪಾರ ಕೆಲಸ ಮಾಡಿವೆ. ಉದ್ಯಮಶೀಲತೆಯ ಬೆಳವಣಿಗೆಗೂ ಈ ಮಠಗಳ ಶ್ರೀಗಳು ಮಾರ್ಗದರ್ಶನ ಮಾಡಬೇಕು ಎಂದು ಪಾಟೀಲ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ರಾಜ್ಯ ಶಾಸಕ ಗಣೇಶ್ ಪ್ರಸಾದ್, ನಿತೀಶ್ ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು.

Tags: BJPBY VijayendraInternational Lingayath youth formMB PatilMinister karnatakaMysoreShivarathri Deshikendra SwamijiSiddaganga Muttಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಕೋಟೆಕರ್ ಉಲ್ಲಾಳ ಬ್ಯಾಂಕ್ ದರೋಡೆ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ತುರ್ತು ಸಭೆ

Next Post

ಪ. ಮಲ್ಲೇಶ್‌ ನೆನಪಿಲ್ಲೊಂದು ದಿನ.

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

ಪ. ಮಲ್ಲೇಶ್‌ ನೆನಪಿಲ್ಲೊಂದು ದಿನ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada