ಬೈಕಿನಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ತ್ರಿಶೂರ್ ವಡಕಂಚೇರಿ ಶೇಕ್ ತನ್ಸಿರ್ (20) ಮತ್ತು ಕೋಝಿಕ್ಕೋಡ್ ಕಡಮೇರಿ ನಿವಾಸಿ ಸಾಯಿಕೃಷ್ಣ (19) ಬಂಧಿತ ಆರೋಪಿಗಳು ಪೊಲೀಸರು ಆರೋಪಿಗಳ ವಿಚಾರಣೆಯನ್ನ ಕೂಡ ನಡೆಸುತ್ತಿದ್ದಾರೆ.

ಇನ್ನು ಬಂಧಿತ ಆರೋಪಿಗಳಿಂದ ಸುಮಾರು 2.77 ಗ್ರಾಂ ತೂಕದ ನಿಷೇಧಿತ ಎಂಡಿಎಂಎ, ಎರಡು ಮೊಬೈಲ್ ಹಾಗೂ 50,000 ರೂಪಾಯಿ ಬೆಲೆಬಾಳುವ ಎಫ್ ಝಡ್ ಬೈಕನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದೆ.

ಕಳೆದ ಹಲವು ದಿನಗಳಿಂದ ದಕ್ಷಿಣ ಕನ್ನಡ ಸೇರಿದ ಹಾಗೆ ಹಲವು ಕಡೆಗಳಲ್ಲಿ ಮಾದಕ ವಸ್ತುಗಳ ಅಕ್ರಮ ಸಾಗಟದ ಬಗ್ಗೆ ಮಾತುಗಳು ಕೇಳಿ ಬರುತ್ತಿದ್ದು, ಇದರಿಂದ ಎಚ್ಚೆತ್ತುಕೊಂಡಿರುವ ಖಾಕಿ ಪಡೆ, ಶಂಕಿತರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗುತ್ತಿದೆ.