ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿದ್ದು ಇದೀಗ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಮುಂದಾಗಿದೆ. ಈಗಾಗಲೇ ಸ್ಥಿರಾಸ್ತಿಗಳ ಮುಟ್ಟುಗೋಲಿಗೆ ಜಾರಿ ನಿರ್ದೇಶನಾಲಯ ನೋಟೀಸ್ ನೀಡಿದೆ.

ಈ ಮೂಲಕ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿಗೆ ದೊಡ್ಡ ಶಾಕ್ ಎದುರಾಗಿದೆ. ಏಕೆಂದರೆ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಸೇರಿದ ನೂರಾರು ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲು ED ಮುಂದಾಗಿದೆ.
ಈ ಪ್ರಕಾರವಾಗಿ ಈಗಾಗಲೇ ಜಾರಿ ನಿರ್ದೇಶನಾಲಯ AJL ಗೆ ಕೂಡ ನೋಟೀಸ್ ನೀಡಿದ್ದು, ಇದರ ಆಸ್ತಿಗಳನ್ನು ಯಂಗ್ ಇಂಡಿಯಾ ಲಿಮಿಟೆಡ್ ಗೆ ಅಕ್ರಮವಾಗಿ ವರ್ಗಾಯಿಸಲಾಗಿದೆ ಎಂದು ತಿಳಿಸಿದೆ. ಹೀಗೆ ಮುಂಬೈ, ಲಕ್ನೋ ಹಾಗೂ ಪುಣೆಯಲ್ಲಿರುವ ಒಟ್ಟು 661 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲು ಜಾರಿ ನಿರ್ದೇಶನಾಲಯ ಮುಂದಾಗಿದೆ.

ಈ ಕುರಿತು ಇದುವರೆಗೆ ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಜಾರಿ ನಿರ್ದೇಶನಾಲಯದ ಈ ಕ್ರಮವನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋಗುವ ಸಾಧ್ಯತೆಯಿದೆ.


