• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೇಸಿಗೆ ನಿರ್ವಹಣೆಗೆ ವಿಶೇಷ ನೆರವು ಕೋರಿ ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ: ಸಚಿವ ಕೆ.ಜೆ.ಜಾರ್ಜ್

ಪ್ರತಿಧ್ವನಿ by ಪ್ರತಿಧ್ವನಿ
March 11, 2025
in ಕರ್ನಾಟಕ, ರಾಜಕೀಯ, ವಿಶೇಷ
0
ಬೇಸಿಗೆ ನಿರ್ವಹಣೆಗೆ ವಿಶೇಷ ನೆರವು ಕೋರಿ ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ: ಸಚಿವ ಕೆ.ಜೆ.ಜಾರ್ಜ್
Share on WhatsAppShare on FacebookShare on Telegram
ADVERTISEMENT

  • ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಉದ್ಭವಿಸಬಹುದಾದ ಪರಿಸ್ಥಿತಿ, ಕೈಗೊಳ್ಳಬಹುದಾದದ ಕ್ರಮಗಳ ಕುರಿತು ಜನಪ್ರತಿನಿಧಿಗಳೊಂದಿಗೆ ಸಭೆ
  • ಹೆಚ್ಚುವರಿ ನೆರವು ಕೋರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ಮನವಿ ಸಲ್ಲಿಸಲು ನಿರ್ಧಾರ

: ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಉದ್ಭವಿಸಬಹುದಾದ ಸಮಸ್ಯೆಗಳನ್ನು ಬಗೆಹರಿಸಲು ವಿಶೇಷ ನೆರವು ಕೋರಿ ಮುಖ್ಯಮಂತ್ರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಉದ್ಭವಿಸಬಹುದಾದ ಪರಿಸ್ಥಿತಿ ಕುರಿತು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಸಚಿವ ಕೆ.ಜೆ.ಜಾರ್ಜ್‌, ಬೇಸಿಗೆಯನ್ನು ನಿಭಾಯಿಸಲು ಕೈಗೊಳ್ಳಬೇಕಾದ ಕಾರ್ಯಕ್ರಮಗಳು ಮತ್ತು ಅದಕ್ಕೆ ಬೇಕಾದ ಅನುದಾನದ ಬಗ್ಗೆ ಪ್ರಸ್ತಾವನೆ ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

“ಈ ಪ್ರಸ್ತಾವನೆಯೊಂದಿಗೆ ಮುಖ್ಯಮಂತ್ರಿಯವರನ್ನು ಭೇಟಿಯಾಗಿ, ಹೆಚ್ಚುವರಿ ಅನುದಾನ ಕೋರಿ ಮನವಿ ಸಲ್ಲಿಸಲಾಗುವುದು. ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಕಳೆದ ವರ್ಷದ ಬೇಸಿಗೆಯಲ್ಲಿ ಕೈಗೊಂಡ ಕಾಮಗಾರಿಗಳಿಗೆ 3.60ಕೋಟಿ ರೂ. ಅನುದಾನ ಬಿಡುಗಡೆಯಾಗಬೇಕಿದೆ. ಅದೇ ರೀತಿ ಈ ಬಾರಿಯ ನಿರ್ವಹಣೆಗೆ ಅನುದಾನ ಬೇಕಾಗಿದೆ. ಈ ಎರಡೂ ವಿಚಾರಗಳನ್ನು ಮುಂದಿಟ್ಟುಕೊಂಡು ಇಲಾಖೆ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗುವುದು,” ಎಂದು ಸಚಿವ ಜಾರ್ಜ್ ತಿಳಿಸಿದರು.

“ಕಳೆದ ವರ್ಷ ತೀವ್ರ ಬರಗಾಲವಿದ್ದರೂ ಜಿಲ್ಲೆಯಲ್ಲಿ ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ಯಶಸ್ವಿಯಾಗಿದ್ದೇವೆ. ಅದೇ ರೀತಿ ಈ ವರ್ಷವೂ ಬೇಸಿಗೆಯಲ್ಲಿ ಜನರಿಗೆ ಹೆಚ್ಚು ಸಮಸ್ಯೆಯಾಗದಂತೆ ನೋಡಿಕೊಳ್ಳಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ನೀರು, ವಿದ್ಯುತ್ ಸೇರಿದಂತೆ ಯಾವುದೇ ರೀತಿಯ ಸಮಸ್ಯೆ ಬಂದರೂ ಅದನ್ನು ಬಗೆಹರಿಸಲು ಈಗಲೇ ಯೋಜನೆ ಸಿದ್ಧಪಡಿಸಬೇಕು,” ಎಂದು ಸೂಚಿಸಿದರು.

“ಪ್ರಸ್ತುತ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 6.23 ಕೋಟಿ ರೂ. ಲಭ್ಯವಿದೆ. ತುರ್ತು ಸಂದರ್ಭದಲ್ಲಿ ಈ ಹಣ ಬಳಸಿಕೊಂಡು ಸಮಸ್ಯೆಗೆ ಸ್ಪಂದಿಸಬೇಕು. ಕೆರೆಗಳ ಹೂಳೆತ್ತುವ ಕಾರ್ಯವನ್ನು ವೈಜ್ಞಾನಿಕವಾಗಿ ಕೈಗೊಂಡು ಕೆರೆಗಳನ್ನು ಸಂರಕ್ಷಿಸಿಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಗಮನ ಹರಿಸಬೇಕು,” ಎಂದು ಹೇಳಿದರು.

ಜಿಲ್ಲೆಯ ಪರಿಸ್ಥಿತಿ ಕುರಿತು ವಿವರ ನೀಡಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್, “ಪಸಕ್ತ ಸಾಲಿನಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲಿ ತೀವ್ರತರ ಸಮಸ್ಯೆಗಳು ಉದ್ಭವಿಸಿಲ್ಲ. 4 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಕ್ರಮ ವಹಿಸಲಾಗಿದೆ. ಕಳೆದ ಬಾರಿ ಹೆಚ್ಚು ಮಳೆಯಾಗಿದ್ದರಿಂದ ಬಯಲುಸೀಮೆ ಭಾಗಗಳಲ್ಲಿ ಅಂತರ್ಜಲ ಪ್ರಮಾಣ ಏರಿಕೆಯಾಗಿದೆ. ಕೆರೆಗಳನ್ನು ತುಂಬಿಸುವ ಕಾರ್ಯವನ್ನೂ ಕೈಗೊಳ್ಳಲಾಗಿದ್ದು, ತರೀಕೆರೆ ತಾಲೂಕಿನಲ್ಲಿ ಏತ ನೀರಾವರಿ ಯೋಜನೆ ಮೂಲಕ 79 ಕೆರೆಗಳನ್ನು ತುಂಬಿಸಲಾಗಿದೆ. ಭದ್ರಾ ಜಲಾಶಯ ಭಾಗದಲ್ಲಿ 73 ಕೆರೆಗಳನ್ನು ಭರ್ತಿ ಮಾಡಲಾಗಿದೆ. ಆರೋಗ್ಯ ಸಮಸ್ಯೆ ಉದ್ಭವವಾಗದಂತೆ ಮತ್ತು ಅರಣ್ಯದಲ್ಲಿ ಬೆಂಕಿ ದುರಂತ ಸಂಭವಿಸುವುದನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗುತ್ತಿದೆ,” ಎಂದು ಮಾಹಿತಿ ನೀಡಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಟಾಸ್ಕ್ ಫೋರ್ಸ್ ಮೂಲಕ ಕಳೆದ ವರ್ಷ ಕೈಗೊಂಡ ಪರಿಹಾರ ಕಾರ್ಯಕ್ರಮಗಳಿಗೆ 3.6 ಕೋಟಿ ರೂ. ಬಿಡುಗಡೆಯಾಬೇಕಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದಾಗ, ಜಿಲ್ಲೆಯ ಶಾಸಕರ ಜತೆಗೆ ಈ ಬಗ್ಗೆ ಇಲಾಖೆ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗುವುದು ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ಲಿಂಕ್ ಲೈನ್ ಮೂಲಕ ವಿದ್ಯುತ್ ಸಮಸ್ಯೆಗೆ ಪರಿಹಾರ

“ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಹೀಗಾಗಿ ಜಿಲ್ಲೆಗೆ ಅಗತ್ಯ ವಿದ್ಯುತ್ ನೀಡಲು ಯಾವುದೇ ತೊಂದರೆ ಆಗುವುದಿಲ್ಲ. ಆದರೆ, ಸರಬರಾಜು ವ್ಯವಸ್ಥೆಯಲ್ಲಿ ಸಮಸ್ಯೆ ಇರುವುದರಿಂದ ಮತ್ತು ಅಕ್ರಮ ಪಂಪ್ ಸೆಟ್ ಗಳನ್ನು ಬಳಸುತ್ತಿರುವುದರಿಂದ ಒತ್ತಡ ತಡೆದುಕೊಳ್ಳಲು ಸಾಧ್ಯವಾಗದೆ ಟ್ರಾನ್ಸ್ ಫಾರ್ಮರ್ ಗಳು ಹಾನಿಗೊಳಗಾಗುತ್ತವೆ. ಈ ರೀತಿಯ ತಾಂತ್ರಿಕ ಸಮಸ್ಯೆ ಉದ್ಭವಿಸದಂತೆ ಲಿಂಕ್ ಲೈನ್ ಮೂಲಕ ಅಗತ್ಯ ವಿದ್ಯುತ್ ಪೂರೈಸಲು ಕ್ರಮ ವಹಿಸಲಾಗುವುದು,” ಎಂದರು.

“ರೈತರಿಗೆ ವಿದ್ಯುತ್ ಸಮಸ್ಯೆ ಉದ್ಭವವಾಗಬಾರದು ಎಂಬ ಕಾರಣಕ್ಕೆ ಕುಸುಮ್-ಬಿ ಯೋಜನೆಯಡಿ ರೈತರಿಗೆ ಸೋಲಾರ್ ಪಂಪ್ ಸೆಟ್ ಗಳನ್ನು ಒದಗಿಸಲಾಗುತ್ತದೆ. ಕುಸುಮ-ಸಿ ಯೋಜನೆಯಡಿ ಫೀಡರ್ ಸೋಲರೈಸೇಷನ್ ಮೂಲಕ ಆಯಾ ಫೀಡರ್‌ಗಳ ವ್ಯಾಪ್ತಿಯಲ್ಲೇ ವಿದ್ಯುತ್ ಉತ್ಪಾದಿಸಿ ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಪೂರೈಸಲಾಗುತ್ತಿದೆ. ಜಿಲ್ಲೆಯ ಜನಪ್ರತಿನಿಧಿಗಳು ಈ ಬಗ್ಗೆ ಆಸಕ್ತಿ ವಹಿಸಿ ರೈತರು ಸೋಲಾರ್ ಪಂಪ್ ಸೆಟ್ ಗಳನ್ನು ಅಳವಡಿಸಿಕೊಳ್ಳುವಂತೆ ನೋಡಿಕೊಳ್ಳಬೇಕು. ಅದೇ ರೀತಿ ಕುಸುಮ್-ಸಿ ಯೋಜನಯಡಿ ಫೀಡರ್ ಸೋಲರೈಸೇನ್ ಗೆ ಅಗತ್ಯ ಭೂಮಿ ಒದಗಿಸಲು ಕ್ರಮ ಕೈಗೊಳ್ಳಬೇಕು,” ಎಂದು ಮನವಿ ಮಾಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್, ಶಾಸಕ ಮತ್ತು ಕ್ರೆಡಲ್ ಅಧ್ಯಕ್ಷ ಟಿ. ಡಿ ರಾಜೇಗೌಡ, ಶಾಸಕರಾದ ಜಿ.ಎಚ್.ಶ್ರೀನಿವಾಸ್,ಎಚ್.ಡಿ. ತಮ್ಮಯ್ಯ, ಕೆ.ಎಸ್.ಆನಂದ್, ನಯನ ಮೋಟಮ್ಮ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಎಸ್‌.ಎಲ್‌. ಭೋಜೇಗೌಡ, ಡಾ.ಧನಂಜಯ ಸರ್ಜಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಟಾರಿಯಾ ಮತ್ತಿತರರು ಇದ್ದರು.

Assembly Session: ತೋಟದ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕಕ್ಕೆ ಚರ್ಚೆ.! #pratidhvani
Tags: clat 2024 crash courseclat 2024 last-minute prepclat free classesclat preparationcurrent affairs november 2023current affairs october 2023dk shivakumar accepted load sheddingFarmers protestfarmers protest over load sheddingfree clat books download pdfclat preparationhow to prepare for clat 2024important current afkarnataka latest newsload-shedding in karnatakathe hindu current affairsthe hindu editorialsthe hindu news
Previous Post

ಬಜೆಟ್ ಕದನ ವಿಧಾನಸಭೆ ಅಧಿವೇಶನ ನೇರಪ್ರಸಾರ..!

Next Post

PWD ಮಿನಿಸ್ಟರ್​ ವಿರುದ್ಧ ಮಂಡ್ಯ ಶಾಸಕರ ಗುಟುರು..

Related Posts

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?
Top Story

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

by ಪ್ರತಿಧ್ವನಿ
November 3, 2025
0

ದೇಶದಾದ್ಯಂತ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣಾ ಕಣ ಕಾವೇರುತ್ತಿದೆ. ನವೆಂಬರ್‌ 6ರಿಂದ ನವೆಂಬರ್‌ 11ವರೆಗೆ ಎರಡು ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು,...

Read moreDetails

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

November 3, 2025

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

November 3, 2025

N Cheluva Narayanaswamy: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರಗಳನ್ನು ನೀಡಿದ ಸಚಿವ ಎನ್ ಚೆಲುವರಾಯಸ್ವಾಮಿ..!!

November 3, 2025
ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

November 3, 2025
Next Post
PWD ಮಿನಿಸ್ಟರ್​ ವಿರುದ್ಧ ಮಂಡ್ಯ ಶಾಸಕರ ಗುಟುರು..

PWD ಮಿನಿಸ್ಟರ್​ ವಿರುದ್ಧ ಮಂಡ್ಯ ಶಾಸಕರ ಗುಟುರು..

Recent News

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?
Top Story

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

by ಪ್ರತಿಧ್ವನಿ
November 3, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ
Top Story

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

by ಪ್ರತಿಧ್ವನಿ
November 3, 2025
Top Story

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

by ಪ್ರತಿಧ್ವನಿ
November 3, 2025
Top Story

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

by ಪ್ರತಿಧ್ವನಿ
November 3, 2025
ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ
Top Story

ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

November 3, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada