• Home
  • About Us
  • ಕರ್ನಾಟಕ
Wednesday, October 1, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಂವಿಧಾನ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ..!

ಪ್ರತಿಧ್ವನಿ by ಪ್ರತಿಧ್ವನಿ
May 3, 2025
in Top Story, ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಜಾತಿ ವ್ಯವಸ್ಥೆ ನಿಂತ ನೀರಿನಂತೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ADVERTISEMENT

ಬೆಂಗಳೂರು, ಮೇ 3: ಸಂವಿಧಾನ ರಕ್ಷಣೆ ಆದರೆ ನಮ್ಮ ಹಕ್ಕುಗಳೂ ರಕ್ಷಣೆಯಾಗುತ್ತವೆ. ಸಂವಿಧಾನ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಸಂವಿಧಾನಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಯಲಹಂಕದಲ್ಲಿ 14 ಅಡಿಗಳ ಬಾಬಾ ಸಾಹೇಬ್ ಅಂಬೇಡ್ಕರ್ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ನಮ್ಮ ದೇಶ, ನಮ್ಮ ಸಮಾಜಕ್ಕೆ ಅವಶ್ಯವಾಗಿದ್ದಂತಹ ಅತ್ಯುತ್ತಮ ಸಂವಿಧಾನವನ್ನು ನೀಡಿದವರು ಬಾಬಾ ಸಾಹೇಬ್ ಅಂಬೇಡ್ಕರ್. ಈ ದೇಶದ ಸಾಮಾಜಿಕ ಪರಿಸ್ಥಿತಿ, ಜಾತಿ ವ್ಯವಸ್ಥೆ ಅಂಬೇಡ್ಕರ್ ಅವರಿಗೆ ಅರ್ಥ ಆದಷ್ಟು ಬೇರೆಯವರಿಗೆ ಆಗಿರಲಿಲ್ಲವೆಂದರೆ ಅದು ಅತಿಶಯೋಕ್ತಿಯಲ್ಲ.
ಜಾತಿ ವ್ಯವಸ್ಥೆ ಇದ್ದಷ್ಟೂ ಕಾಲ ಮೀಸಲಾತಿ ಇರಲೇಬೇಕು ಎಂಬುದನ್ನು ಅವರು ಬಲವಾಗಿ ನಂಬಿದ್ದರು ಎಂದರು.

ಜಾತಿ ವ್ಯವಸ್ಥೆಗೆ ಚಲನೆ ಇಲ್ಲ

ನಮ್ಮ ದೇಶದ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಆದರೆ ವರ್ಗಕ್ಕೆ ಚಲನೆಯಿದೆ. ನಮ್ಮ ಸಮಾಜದಲ್ಲಿ ಶ್ರೀಮಂತ ಬಡವನಾದರೂ, ಬಡವ ಶ್ರೀಮಂತನಾದರೂ ಕಡೆಯವರೆಗೂ ಉಳಿದು ಕೊಳ್ಳುವುದು ಹುಟ್ಟಿದ ಜಾತಿಯಲ್ಲಿ ಮಾತ್ರ. ಆದ್ದರಿಂದ ಈ ಜಾತಿ ವ್ಯವಸ್ಥೆ ನಿಂತ ನೀರಿನಂತೆ.
ಇದನ್ನು ಮನಗಂಡಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸ್ವಾತಂತ್ರ್ಯ ಯಶಸ್ಸನ್ನು ಕಾಣಬೇಕಾದರೆ ಈ ದೇಶದ ಅವಕಾಶ ವಂಚಿತರು, ಶೋಷಿತರು, ದೌರ್ಜನ್ಯಕ್ಕೆ ಒಳಗಾದವರಿಗೆಲ್ಲರಿಗೂ ಸಮಾನ ಅವಕಾಶಗಳು ದೊರೆತು ಅವರೆಲ್ಲರೂ
ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರಾದಾಗ ಮಾತ್ರ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಸಿಗುತ್ತದೆ ಎಂದು ಹೇಳಿದ್ದರು ಎಂದರು.

ಸ್ವಾತಂತ್ರ್ಯಾನಂತರ ಒಬ್ಬ ವ್ಯಕ್ತಿ , ಒಂದು ಮತ ಜಾರಿಗೆ ಬಂದಿದೆ . ಇದು ಈ ದೇಶದ ರಾಷ್ಟ್ರಪತಿಗಳಿಗೂ ಒಂದೇ. ಒಬ್ಬ ಪೌರಕಾರ್ಮಿಕನಿಗೂ ಒಂದೇ. ಬಸವಣ್ಣನವರು ಹೇಳಿದ್ದು ಇದನ್ನೇ. ಅಂಬೇಡ್ಕರ್ ಅವರು ಕೂಡಾ ಬಸವಣ್ಣನವರ ವಚನಗಳನ್ನು ಓದಿದ್ದರು ಎಂಬುದು ಅವರ ಬರಹಗಳಿಂದ ತಿಳಿದು ಬರುತ್ತದೆ. ಸಮಾಜದಲ್ಲಿ ಯಾವ ಕೆಲಸವೂ ಮೇಲೂ ಅಲ್ಲ, ಕೀಳೂ ಅಲ್ಲ. ಎಲ್ಲವೂ ಸಮಾನ ಎಂದೇ ಪ್ರತಿಪಾದಿಸಿದರು ಎಂದರು.

ನಮಗೆ ರಾಜಕೀಯ ಸ್ವಾತಂತ್ರ್ಯ ಸಿಕ್ಕಿದೆ ಆದರೆ ಸಾಮಾಜಿಕ ಆರ್ಥಿಕ ಸಿಕ್ಕಿಲ್ಲ. ಎಲ್ಲಿವರೆಗೂ ಇದು ಸಿಗುವುದಿಲ್ಲ ಅಲ್ಲಿಯವರೆಗೆ ಸಮಾಜದಲ್ಲಿ ಸಮಾನತೆ ಕಾಣಲು ಸಾಧ್ಯವಿಲ್ಲ. ನಮ್ಮ ಸರ್ಕಾರವು ಇದನ್ನೇ ನಂಬಿದ್ದು, ನಾವು ರೂಪಿಸುತ್ತಿರುವ ಕಾರ್ಯಕ್ರಮಳೂ ಇದೇ ಹಿನ್ನೆಲೆಯಿಂದ ಮೂಡಿಬಂದಿವೆ ಎಂದರು.

ಜನರನ್ನು ಮುಂದಕ್ಕೆ ಎಳೆಯಲು ಪ್ರಯತ್ನ ಮಾಡಬೇಕು
ಜನರನ್ನು ಹಿಂದಕ್ಕೆ ಮಾತ್ರ ತಳ್ಳಬೇಡಿ. ಮುಂದಕ್ಕೆ ಎಳೆಯಲು ಪ್ರಯತ್ನ ಮಾಡಬೇಕು. ಮುಂದಕ್ಕೆ ಎಳೆಯಲು ಸಾಧ್ಯವಾಗದಿದ್ದರೆ ಅಲ್ಲೇ ಬಿಡಿ. ಆದರೆ ಹಿಂದಕ್ಕೆ ಮಾತ್ರ ತಳ್ಳಬೇಡಿ ಎಂದ ಮುಖ್ಯಮಂತ್ರಿಗಳು ಅಂಬೇಡ್ಕರ್ ಅವರು ತಾವು ಓದಿಕೊಂಡಿರುವುದು ಸ್ವಾರ್ಥಕ್ಕಾಗಿ ಅಲ್ಲ, ಅಸಮಾನತೆಯನ್ನು ಹೋಗಲಾಡಿಸಲು ಎಂದು ತಿಳಿಸಿದ್ದರು. ನಾವು ಸಾಧ್ಯವಾದಷ್ಟರ ಮಟ್ಟಿಗೆ ಅವರ ತತ್ವಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಅಕ್ಷರ ಸಂಸ್ಕೃತಿಯಿಂದ ವಂಚಿತರಾದವರು ಶಿಕ್ಷಣವನ್ನು ಪಡೆದುಕೊಳ್ಳಲೇ ಬೇಕು
ನಮ್ಮ ಸರ್ಕಾರ ಆರ್ಥಿಕವಾಗಿ, ಸಾಮಾಜಿಕವಾಗಿ ಜನರಲ್ಲಿ ಶಕ್ತಿ ತುಂಬಲು ಪಂಚ ಗ್ಯಾರಂಟಿಗಳನ್ನು ಜಾರಿ ಮಾಡಿದೆ. ಆರ್ಥಿಕವಾಗಿ ಶಕ್ತಿ ತುಂಬದಿದ್ದರೆ ಅಸಮಾನತೆ ಹೋಗಲಾಡಿಸಲು ಸಾಧ್ಯವಿಲ್ಲ. ಎಲ್ಲರನ್ನೂ ಮುಖ್ಯವಾಹಿನಿಗೆ ತರುವ ಪ್ರಯತ್ನ ಮಾಡಬೇಕು. ಒಂದೇ ಬಾರಿಗೆ ಎಲ್ಲರನ್ನೂ ಮುಖ್ಯವಾಹಿನಿಗೆ ತರಲು ಸಾಧ್ಯವಾಗದಿದ್ದರೂ ಕ್ರಮೇಣವಾಗಿ ಮಾಡಲು ಪ್ರಯತ್ನ ಮಾಡಬೇಕು. ನಮ್ಮ ಹೋರಾಟ ನಿರಂತರವಾಗಿರಬೇಕು. ಅದಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಶಿಕ್ಷಣ, ಸಂಘಟನೆ ಹಾಗೂ ಹೋರಾಟ ಎಂಬ ಮೂರು ಮಂತ್ರಗಳನ್ನು ಬಿಟ್ಟು ಹೋಗಿದ್ದಾರೆ. ಅಕ್ಷರ ಸಂಸ್ಕೃತಿಯಿಂದ ವಂಚಿತರಾದವರು ಶಿಕ್ಷಣವನ್ನು ಪಡೆದುಕೊಳ್ಳಲೇ ಬೇಕು. ಆಗ ಮಾತ್ರ ಸ್ವಾಭಿಮಾನ, ಜ್ಷಾನ ಬರಲು, ಸಂಘಟಿತರಾಗಲು ಸಾಧ್ಯವಾಗುತ್ತದೆ. ಅಂಬೇಡ್ಕರ್ ಅವರು ಅಂದಿನ ಕಾಲದಲ್ಲಿಯೇ ಎಷ್ಟೇ ಕಷ್ಟವಾದರೂ, ಮಾನಸಿಕ ತೊಂದರೆಯಾದರೂ ಶಿಕ್ಷಣವನ್ನು ಬಿಡಲಿಲ್ಲ ಎಂದರು. ಅಂಬೇಡ್ಕರ್ ಅವರೊಬ್ಬ ದೂರದೃಷ್ಟಿಯಿದ್ದ ನಾಯಕರು. ಅಂಥವರಿಗೆ ಮಾತ್ರ ನೂರು ವರ್ಷಗಳಲ್ಲಿ ಸಮಾಜದಲ್ಲಿ ಏನಾಗಬಹುದು ಎಂದು ಊಹಿಸಲು ಸಾಧ್ಯವಾಗುತ್ತದೆ ಎಂದರು.

ಬೇಡಿಕೆ ಪರಿಗಣಿಸಲಾಗುವುದು
ವಿಶ್ವನಾಥ್ ಅವರು ಯಲಹಂಕದಲ್ಲಿ ಪಕ್ಷಾತೀತವಾಗಿ ಕೆಲಸ ಮಾಡುವುದಾಗಿ ಹೇಳಿರುವುದನ್ನು ಸ್ವಾಗತಿಸಿದ ಮುಖ್ಯಮಂತ್ರಿಗಳು, ಯಲಹಂಕದಲ್ಲಿ ದಲಿತರು ಹಿಂದುಳಿದವರೇ ಹೆಚ್ಚಿದ್ದು, ಎಲ್ಲರಿಗೂ ನ್ಯಾಯ ದೊರಕಿಸುವ ಕೆಲಸವನ್ನು ವಿಶ್ವನಾಥ್ ಮಾಡುತ್ತಿದ್ದಾರೆ ಎಂದರು. ವಿಶ್ವನಾಥ್ ಅವರ ಕ್ಷೇತ್ರಕ್ಕೆ ಅನುದಾನದ ಬೇಡಿಕೆಯನ್ನು ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಅಂಬೇಡ್ಕರ್ ಅವರ ವಿಚಾರಗಳು ಇನ್ನಷ್ಟು ಪಸರಿಸಲಿ
ಸಮಗ್ರ ಸಾಮಾಜಿಕ ವ್ಯವಸ್ಥೆ ಬದಲಾಗಬೇಕು. ಅಂಬೇಡ್ಕರ್ ದಲಿತರಾಗಿ ಹುಟ್ಟಿದರೂ ಎಲ್ಲರ ನಾಯಕರಾಗಿದ್ದರು. ಸಾಮಾಜಿಕ ನ್ಯಾಯದಿಂದ ವಂಚಿತರಾದವರೆಲ್ಲರ ನಾಯಕರಾಗಿದ್ದರು. ಈ ದೇಶದಲ್ಲಿ ಅವರು ಹುಟ್ಟಿರವುದೇ ನಮಗೆ ಹೆಮ್ಮೆಯ ಸಂಗತಿ ಎಂದರು. ಅಂಬೇಡ್ಕರ್ ವಿಚಾರಗಳು ಇಂದಿಗೂ ಪ್ರಸ್ತುತವಾಗಿವೆ ಪ್ರತಿಮೆಗಳು ಸಂಕೇತಗಳಾದರೂ, ಇವುಗಳಿಂದ ಅಂಬೇಡ್ಕರ್ ಅವರ ವಿಚಾರಗಳು ಇನ್ನಷ್ಟು ಪಸರಿಸಲಿ ಎಂದರು.

Tags: bill of rightsConstitutionconstitution factsconstitution importanceconstitution is trashconstitution preservationfreedom of expressionhistory of the constitutionof thepower of the peopleseparation of powersthe constitutionthe constitution for kidsthe heritage foundationu s constitutionu.s. constitutionunderstanding constitutionus constitution
Previous Post

“ದಾದಾ ಸಾಹೇಬ್ ಫಾಲ್ಕೆ” ಚಲನಚಿತ್ರೋತ್ಸವದಲ್ಲಿ “ಈ ಪಾದ ಪುಣ್ಯ ಪಾದ” ಚಿತ್ರಕ್ಕೆ ಪ್ರಶಸ್ತಿ

Next Post

ನಾವು ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಾಸ್ ಬರುವುದು ಕೇವಲ 60 ಸಾವಿರ ಕೋಟಿ ಮಾತ್ರ: ಸಿ.ಎಂ

Related Posts

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !
ಇತರೆ / Others

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

by ಪ್ರತಿಧ್ವನಿ
September 30, 2025
0

ಇಂದು ನಗರದಲ್ಲಿನ ಚಂದ್ರ ಲೇಔಟ್‌ನಲ್ಲಿ Sunya IAS ನೂತನ ಸೆಂಟರ್‌ ಉದ್ಘಾಟನೆಗೊಂಡಿತು. ಚಂದ್ರ ಬಡಾವಣೆಯಲ್ಲಿ Civil Services Training Institutions ಗಳಿಗೆ ಹೆಸರುವಾಸಿಯಾಗಿದೆ. ರಾಜ್ಯ ಬೇರೆ ಬೇರೆ...

Read moreDetails
NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

September 30, 2025
UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

September 30, 2025
ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

September 30, 2025
ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ,  ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

September 30, 2025
Next Post

ನಾವು ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಾಸ್ ಬರುವುದು ಕೇವಲ 60 ಸಾವಿರ ಕೋಟಿ ಮಾತ್ರ: ಸಿ.ಎಂ

Recent News

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !
Top Story

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

by ಪ್ರತಿಧ್ವನಿ
September 30, 2025
ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ,  ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !
Top Story

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

by ಪ್ರತಿಧ್ವನಿ
September 30, 2025
ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!
Top Story

ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!

by ಪ್ರತಿಧ್ವನಿ
September 29, 2025
ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ
Top Story

ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

by ಪ್ರತಿಧ್ವನಿ
September 28, 2025
ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ
Top Story

ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ

by ಪ್ರತಿಧ್ವನಿ
September 29, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

September 30, 2025
NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

September 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada