• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಹಿಳೆಯರ ರಕ್ಷಣೆ ನಮ್ಮ ಮೊದಲ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
March 4, 2023
in ಕರ್ನಾಟಕ
0
ಮಹಿಳೆಯರ ರಕ್ಷಣೆ ನಮ್ಮ ಮೊದಲ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಬೆಂಗಳೂರು ಸುರಕ್ಷಿತ ನಗರ ಯೋಜನೆಯ ಉದ್ಘಾಟನೆ

ADVERTISEMENT


ಬೆಂಗಳೂರು: ಮಹಿಳೆಯರ ರಕ್ಷಣೆ ನಮ್ಮ ಮೊದಲ ಆದ್ಯತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರು ಸುರಕ್ಷಿತ ನಗರ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಪಾಲ್ಗೊಂಡು ಮಾತನಾಡಿದರು

ರಾಜ್ಯದಲ್ಲಿ ಅಪರಾಧ ಪ್ರಮಾಣ ಕಡಿಮೆಯಾಗಿದೆ. ಹೆಣ್ಣು ಮಕ್ಕಳು ನಿರ್ಭಯವಾಗಿ ಓಡಾಡುವ ಪರಿಸ್ಥಿತಿ ಇರಬೇಕು. ನಮ್ಮ ಪೊಲಿಸರ ಮೇಲಿನ ನಂಬಿಕೆಯಿಂದ ಮಹಿಳೆಯರಿಗೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗದೆ. ಮಹಿಳೆಯರು ಪುರುಷರು ಸಮಾನವಾಗಿ ಕೆಲಸ ಮಾಡುವ ವ್ಯವಸ್ಥೆಯಾಗಬೇಕು ಎನ್ನುವ ಕಾರಣಕ್ಕೆ ಮಹಿಳೆಯರಿಗೆ ರಾತ್ರಿ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ದೌರ್ಜನ್ಯ ತಡೆಯಲು ಕ್ರಮ
ದೇಶದ 130 ಕೋಟಿ ಜನ ಸಂಖ್ಯೆಯಲ್ಲಿ ಅರ್ಧದಷ್ಟು ಮಹಿಳೆಯರಿದ್ದಾರೆ. ಎಲ್ಲರಿಗೂ ಬದುಕಿನಲ್ಲಿ ಮುಂದುಬರೆಬೇಕೆನ್ನುವ ಉತ್ಸಾಹವಿದ್ದು, ಮಹಿಳೆಯರಲ್ಲಿ ಇದು ದೊಡ್ಡ ಪ್ರಮಾಣದಲ್ಲಿ ಇದೆ.
ಅವರೂ ಶಾಲೆಗೆ ಹಾಗೂ ಉದ್ಯೋಗಕ್ಕೆ ಹೋಗಬೇಕು. ಆದರೆ ಹಲವಾರು ಸಂದರ್ಭಗಳಲ್ಲಿ ಅವರ ಮೇಲೆ ದೌರ್ಜನ್ಯ ಆಗುತ್ತಿದೆ. ಇದನ್ನು ತಡೆಯಲು ಹಲವಾರು ಉಪಾಯಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೈಗೊಂಡಿದೆ ನಿರ್ಭಯ ಪ್ರಕರಣದ ನಂತರ ಕಾನೂನು ತರಲಾಗಿದೆ. ಕಾನೂನಿಗೆ ಬಳ ತುಂಬಲು ಕಾನೂನಿನ ವ್ಯವಸ್ಥೆ ಯ ನಿರ್ವಹಣೆ ಅಗತ್ಯ. ವ್ಯಾಪಕವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಪೊಲೀಸ್ ಒದಗಿಸುವುದು ಸವಾಲು. ಅಂಥಹುದರಲ್ಲಿ ಮಹಿಳೆಯರ ಸುರಕ್ಷತೆ ಒದಗಿಸುವ ಮಹತ್ವದ ಕೆಲಸವಿದ್ದರೂ, ತಂತ್ರಜ್ಞಾನದ ಬಳಕೆ ಇಲ್ಲದೆ ಅದು ಅಸಾಧ್ಯ ಎಂದು ಮನಗಂಡು ಕೇಂದ್ರ ಸರ್ಕಾರ 668 ಕೋಟಿ ರೂ ವೆಚ್ಚದಲ್ಲಿ ಈ ಯೋಜನೆ ಜಾರಿಗೆ ತಂದಿದೆ. ಯೋಜನೆ ರೂಪಿಸಲು ಸ್ವಲ್ಪ ಸಮಯ ಹಿಡಿಯಿತಾದರೂ ಸವಾಲಿನ ಕೆಲಸವನ್ನು ಕೈಗೆತ್ತಿಕೊಂಡು
ಈ ಯೋಜನೆ ಯಾವ ರೀತಿ ಅನುಷ್ಠಾನಗೊಳಿಸಬೇಕು ಎನ್ನುವ ಕುರಿತು ಸಾಕಷ್ಟು ಸಂಶೋಧನೆ ಮಾಡಲಾಯಿತು. ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ಕೃತಕ ಬುದ್ಧಿಮತ್ತೆ ಬಳಸಿ ಕ್ಯಾಮರಾಗಳನ್ನು ಅಳವಡಿಸಿ ಈಗ ಎಲ್ಲೆಡೆ ಸಂಖ್ಯೆ ಯನ್ನು ಕ್ಯಾಮೆರಾ ಹೆಚ್ಚಿಸಲಾಗಿದೆ. ಈಗಾಗಲೇ 4 ಸಾವಿರ ಕ್ಯಾಮರಾ ಅಳವಡಿಸಲಾಗಿದೆ. ಡಾರ್ಕ್ ಸ್ಪಾಟ್ ಗಳಲ್ಲಿ ಆದ್ಯತೆ ಮೇರೆಗೆ ಕ್ಯಾಮರಾ ಅಳವಡಿಸಬೇಕು ಎಂದು ಸಲಹೆ ನೀಡಿದರು.

6 ಮಹಿಳಾ ಪೊಲೀಸ್ ಠಾಣೆ
ಈ ಯೋಜನೆಯಡಿ 112 ದ್ವಿಚಕ್ರ ವಾಹನಗಳನ್ನು ಇದಕ್ಕೆ ಜೋಡಿಸಿರುವುದು ಶ್ಲಾಘನೀಯ. ಅತ್ಯಾಧುನಿಕ ಕ್ಯಾಮರಾಗಳ ಸದ್ಬಳಕೆ ಯಾಗಬೇಕು. ಕಮಾಂಡ್ ಸೆಂಟರ್ ಹೆಚ್ಚು ಪ್ರಬಲವಾಗಿರಬೇಕು. ಕಡಿಮೆ ಸಮಯದಲ್ಲಿ ಘಟನಾ ಸ್ಥಳಕ್ಕೆ ತಲುಪುವುದು ಪೊಲೀಸರ ದಕ್ಷತೆಯನ್ನು ಬಿಂಬಿಸುತ್ತದೆ. 8 ಸಿಇ ಎನ್ ಪೊಲೀಸ್ ಠಾಣೆಗಳಿವೆ. ಸಂಚಾರ ದಟ್ಟಣೆ ಕಡಿಮೆ ಮಾಡಲು 4 ಹೊಸ ಪೊಲೀಸ್ ಠಾಣೆ ನೀಡಿದ್ದು, ಈ ಬಾರಿಯ ಬಜೆಟ್ ನಲ್ಲಿ 9 ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆ, 5 ಸಂಚಾರ ಪೋಲಿಸ್ ಠಾಣೆ ಮತ್ತು 6 ಮಹಿಳಾ ಪೊಲೀಸ್ ಠಾಣೆ ಮಂಜೂರು ಮಾಡಲಾಗಿದೆ ಎಂದರು.

ಗೃಹ ಸಚಿವರ ಬೆಂಬಲ
ಇವೆಲ್ಲವೂ ಕೇಂದ್ರ ಗೃಹ ಸಚಿವರ ಬೆಂಬಲದಿಂದ ಸಾಧ್ಯವಾಗಿದೆ. ಗುಜರಾತಿನ ನಂತರ ಎಫ್.ಎಸ್.ಎಲ್ ವಿಶ್ವವಿದ್ಯಾಲಯವನ್ನು ಕರ್ನಾಕಕ್ಕೆ ನೀಡಿದ್ದಾರೆ. ಎಫ್.ಎಸ್.ಎಲ್ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಪರಾಧ ನಿಯಂತ್ರಣ, ಪಿ.ಎಫ್.ಐ ರದ್ದತಿ, ಭಯೋತ್ಪಾದನೆ ಚಟುವಟಿಕೆ ಯನ್ನು ನಿರ್ಮೂಲನೆ ಮಾಡುವ ಸಲುವಾಗಿ ಅವರು ಸಹಾಯ ಮಾಡುತ್ತಿದ್ದಾರೆ. ಮಾದಕ ವಸ್ತು ಗಳ ನಿಯಂತ್ರಣಕ್ಕೆ ಕಠಿಣ ಕ್ರಮ ವಹಿಸಿದೆ. ಅವರು ಕರ್ನಾಟಕದ ಬೆಳವಣಿಗೆಯನ್ನು ಹತ್ತಿರದಿಂದ ಗಮನಿಸುತ್ತಿದ್ದಾರೆ ಎಂದರು.

Tags: ಅಮಿತ್ ಶಾಬಸವರಾಜ ಬೊಮ್ಮಾಯಿಬಿಜೆಪಿಬೆಂಗಳೂರು
Previous Post

BJP ನಾಯಕರು ಜನರನ್ನು ಮೂರ್ಖರನ್ನಾಗಿ ಮಾಡ್ತಿರೋದು ಏಕೆ..?

Next Post

ವಿಜಯಪುರ: ಕೃಷ್ಣಾ ನದಿ ಸೇತುವೆ ಮೇಲೆ ಬಾಯಿಗೆ ಹಗ್ಗ ಕಟ್ಟಿದ ಸ್ಥಿತಿಯಲ್ಲಿ ಮೊಸಳೆ ಪತ್ತೆ

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ವಿಜಯಪುರ: ಕೃಷ್ಣಾ ನದಿ ಸೇತುವೆ ಮೇಲೆ ಬಾಯಿಗೆ ಹಗ್ಗ ಕಟ್ಟಿದ ಸ್ಥಿತಿಯಲ್ಲಿ ಮೊಸಳೆ ಪತ್ತೆ

ವಿಜಯಪುರ: ಕೃಷ್ಣಾ ನದಿ ಸೇತುವೆ ಮೇಲೆ ಬಾಯಿಗೆ ಹಗ್ಗ ಕಟ್ಟಿದ ಸ್ಥಿತಿಯಲ್ಲಿ ಮೊಸಳೆ ಪತ್ತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada