ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತದಲ್ಲಿ ನಡೆದಿದೆ.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದೇ ವೇಳೆ ವಿದ್ಯಾರ್ಥಿಗಳು ವಿಧಾನಸೌಧ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ವಿದ್ಯಾರ್ಥಿಗಳನ್ನು ತಡೆದಿದ್ದಾರೆ.

ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ಘರ್ಷಣೆ, ವಾಗ್ವಾದ ನಡೆದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಈ ಕುರಿತು ಕ್ಯಾಂಪಸ್ ಪ್ರೆಂಟ್ ಸಂಘಟನೆಯ ಮಾಧ್ಯಮ ಸಂಯೋಜಕ ಸವಾದ್ ಕಲ್ಲಪ್ಗೆ ಅವರೊಂದಿಗೆ ಮಾತನಾಡಿದ ಪ್ರತಿಧ್ವನಿ , ನಾವು ಪ್ರತಿಭಟನೆಗೆ ಅನುಮತಿ ಪಡೆದು ಪ್ರತಿಭಟನೆ ಮಾಡಿದ್ದೇವೆ. ವಿಧಾನ ಸೌದ ಮುತ್ತಿಗೆ ಹಾಕುವುದನ್ನು ತಡೆದಿದ್ದು ಸರಿ ಆದರೆ ಏಕಾಏಕಿ ವಿದ್ಯಾರ್ಥಿಗಳ ಮೇಲೆ ಪೋಲಿಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇದರಿಂದಾಗಿ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲವರಿಗೆ ಸಣ್ಣ ಪುಟ್ಟ ಗಾಯವಾಗಿದೆ. 300 ಕ್ಕು ಹೆಚ್ಚು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ ಇನ್ನೂ ಯಾರನ್ನು ಬಿಡುಗಡೆ ಮಾಡಿಲ್ಲವೆಂದು ತಿಳಿಸಿದ್ದಾರೆ.