• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಳೆ ಫ್ರೀಡಂ ಪಾರ್ಕಿನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶ: ಪೊಲೀಸ್​ ಅಧಿಕಾರಿ ಬಿ ದಯಾನಂದ

Any Mind by Any Mind
September 28, 2023
in Top Story, ಕರ್ನಾಟಕ
0
ನಾಳೆ ಫ್ರೀಡಂ ಪಾರ್ಕಿನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶ: ಪೊಲೀಸ್​ ಅಧಿಕಾರಿ ಬಿ ದಯಾನಂದ
Share on WhatsAppShare on FacebookShare on Telegram

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನ ಖಂಡಿಸಿ ವಿವಿಧ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್​ಗೆ ಕರೆ ನೀಡಿದ್ದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರ ಪೊಲೀಸರು ಬಿಗಿ ಪೊಲೀಸ್ ಭದ್ರತೆ ಕೈಗೊಂಡಿದ್ದರು. ತಮಿಳು ಭಾಷಿಕರು ವಾಸವಿರುವ ಪ್ರದೇಶ, ಚಿತ್ರಮಂದಿರ ಸೇರಿದಂತೆ ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಸೂಕ್ತ ಭದ್ರತೆ ಕಲ್ಪಿಸಿದ್ದರು. ನಾಳೆ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್​ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಬಿ‌ ದಯಾನಂದ ಆದೇಶ ಹೊರಡಿಸಿದ್ದಾರೆ.

ADVERTISEMENT

ಕರ್ನಾಟಕ ಬಂದ್​ ಹಿನ್ನೆಲೆ ಮುಂಜಾಗ್ರತ ಕ್ರಮಗಳ ಬಗ್ಗೆ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಪೊಲೀಸ್​ ಹಿರಿಯ ಅಧಿಕಾರಿ ಬಿ ದಯಾನಂದ, ನಾಳೆ ಕರ್ನಾಟಕ ಬಂದ್ ಕರೆ ನೀಡಿರುವ ಹಿನ್ನೆಲೆ ಬೆಂಗಳೂರಲ್ಲಿ ಬಂದೋಬಸ್ತ್ ಕಲ್ಪಿಸಲಾಗಿದೆ. ಪ್ರತಿಭಟನಾ ಮೆರವಣಿಗೆ, ರ‍್ಯಾಲಿಗಳಿಗೆ ಅವಕಾಶವಿರುವುದಿಲ್ಲ. ಬೆಂಗಳೂರಿನಲ್ಲಿ ಇಂದು ರಾತ್ರಿ 12 ರಿಂದ ನಾಳೆ ರಾತ್ರಿ 12ರವರೆಗೂ 144 ಸೆಕ್ಷನ್ ಜಾರಿಯಿರಲಿದೆ. ಫ್ರೀಡಂ ಪಾರ್ಕಿನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶವಿರಲಿದೆ. ಸಂಘಟನೆಗಳ ಕಡೆಯವರಿಗೂ ಈ ಕುರಿತು ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.

OLYMPUS DIGITAL CAMERA

ಬಂದ್ ಕರೆಗಳ ಕುರಿತು ಸುಪ್ರಿಂ ಕೋರ್ಟ್ ಸ್ಪಷ್ಟ ಸೂಚನೆ ನೀಡಿದೆ. ಬಂದ್ ಸಮಯದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾದರೆ ಆಯೋಜಕರೆ ಹೊಣೆ ಆಗಿರುತ್ತಾರೆ. ಸ್ವಯಂಪ್ರೇರಿತವಾಗಿ ಬಂದ್​ಗೆ ಅಡ್ಡಿಯಿಲ್ಲ. ಆದ್ರೆ ಬಲವಂತದ ಬಂದ್ ಮಾಡಿಸುವಂತಿಲ್ಲ. ನಗರದಲ್ಲಿ ಸಂಪೂರ್ಣವಾಗಿ ಎಲ್ಲಾ ಅಧಿಕಾರಿಗಳು ಬಂದೋಬಸ್ತ್​ನಲ್ಲಿರುತ್ತಾರೆ. ಇದಲ್ಲದೇ ಸೂಕ್ಷ್ಮ ಪ್ರದೇಶಗಳಲ್ಲಿ ಕೆಎಸ್‌ಆರ್​ಪಿ, ಸಿಎಆರ್, ಗೃಹರಕ್ಷಕದಳದ ಸಿಬ್ಬಂದಿಯನ್ನೂ ನಿಯೋಜಿಸಲಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅಪರಾಧ ಹಿನ್ನೆಲೆಯುಳ್ಳವರನ್ನ ವಶಕ್ಕೆ ಪಡೆದುಕೊಳ್ಳಲಿದ್ದೇವೆ. ಯಾವುದೇ ಸಿನಿಮಾ ಸ್ಟಾರ್ ನಟರ ಭಾಗಿಯಾಗುವ ಕುರಿತು ಇದುವರೆಗೂ ಮಾಹಿತಿಯಿಲ್ಲ ಎಂದು ಹೇಳಿದರು.

Tags: b dayanandaBangloreFreedom parkprotest
Previous Post

ರೈತರ ಹಿತ ಕಾಪಾಡಲು ಸಾಧ್ಯವಾಗದ ಕಾಂಗ್ರೆಸ್‌ನವರಿಗೆ ನಾಚಿಕೆಯಾಗಬೇಕು: ಡಾ.ಸಿ.ಎನ್. ಅಶ್ವತ್ಥನಾರಾಯಣ

Next Post

ನಾಳೆ ಬಂದ್‌ಗೆ ಅವಕಾಶವಿಲ್ಲ, ಪ್ರತಿಭಟನೆಗೆ ಅಡ್ಡಿಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ
ಕರ್ನಾಟಕ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿರುವ ಹಿನ್ನೆಲೆ, ಸಂಚಾರ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ಹಿತದೃಷ್ಟಿಯಿಂದ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್...

Read moreDetails
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
Next Post
ನಾಳೆ ಬಂದ್‌ಗೆ ಅವಕಾಶವಿಲ್ಲ, ಪ್ರತಿಭಟನೆಗೆ ಅಡ್ಡಿಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ನಾಳೆ ಬಂದ್‌ಗೆ ಅವಕಾಶವಿಲ್ಲ, ಪ್ರತಿಭಟನೆಗೆ ಅಡ್ಡಿಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada