ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಲು ಮುಂದಾಗಿದ್ದರೆ. ಕೈ ನಾಯಕರ ಈ ಪ್ರತಿಭಟನೆಗೆ ಟಾಂಗ್ ನೀಡಲು ಸಜ್ಜಾಗಿರುವ ಬಿಜೆಪಿ ನಾಯಕರು ಇಂದು ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ತಯಾರಿ ಮಾಡಿಕೊಂಡಿದ್ದಾರೆ.

ಅತ್ತ ಕೈ ನಾಯಕರು ʻನನ್ನ ತೆರಿಗೆ ನನ್ನ ಹಕ್ಕುʼ ಎಂಬ ಘೋಷಣೆಯೊಂದಿಗೆ ಕೇಂದ್ರ ಸರ್ಕಾರದಿಂದ ಕರ್ನಾಟಕದ ಮೇಲೆ ನಡೆಯುತ್ತಿರುವ ಆರ್ಥಿಕ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಲು ದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿ ಸತ್ಯಾಗ್ರಹ ನಡೆಸಲಿದ್ದರೆ. ಇದಕ್ಕುತ್ತರವಾಗಿ ಬಿಜೆಪಿ ನಾಯಕರು ರಾಜ್ಯದಲ್ಲಿ ಎದುರಾಗಿರುವ ಬರಪರಿಸ್ಥಿತಿ ನಿರ್ವಹಣೆ ವಿಚಾರದಲ್ಲಿ ʻರಾಜ್ಯದ ಕಾಂಗ್ರೆಸ್ ಸರ್ಕಾರ ಸ್ವತಃ 222ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಗಾಲ ಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದ್ದರೂ, ಈವರೆವಿಗೂ ಕುಡಿಯುವ ನೀರಿನ ಸಮಸ್ಯೆಯೂ ಸೇರಿದಂತೆ ಬರ ಪರಿಹಾರದ ಯಾವುದೇ ಕ್ರಮ ಕೈಗೊಳ್ಳದಿರುವ ಕುರಿತು ಪ್ರತಿಭಟನೆ ನಡೆಸುತ್ತಿದೆ.

ಇಂದು ಬೆಳಗ್ಗೆ 11 ಗಂಟೆಗೆ, ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದು, ಈ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ.
#BJPKarnataka #BYVijayendra #BJPProtest #INCKarnataka #Bangalore






