• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಾಂಗ್ಲಾದ ದೌರ್ಜನ್ಯ ಖಂಡಿಸಿ ನಾಸಿಕ್‌ನಲ್ಲಿ ಪ್ರತಿಭಟನೆ; ಘರ್ಷಣೆ, ಕಲ್ಲು ತೂರಾಟ

ಕೃಷ್ಣ ಮಣಿ by ಕೃಷ್ಣ ಮಣಿ
August 17, 2024
in Top Story, ಇತರೆ / Others, ದೇಶ
0
Share on WhatsAppShare on FacebookShare on Telegram

ಮಹಾರಾಷ್ಟ್ರ(ನಾಸಿಕ್‌:)ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯದವರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಹಿಂದೂ ಸಂಘಟನೆಯು ಆಯೋಜಿಸಿದ್ದ ಪ್ರತಿಭಟನೆ ವೇಳೆ ಗುಂಪು ಘರ್ಷಣೆ ಮತ್ತು ಕಲ್ಲು ತೂರಾಟ ನಡೆದಿದ್ದು, ಮಹಾರಾಷ್ಟ್ರದ ಜಲಗಾಂವ್ ಮತ್ತು ನಾಸಿಕ್ ನಗರಗಳಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ನಾಸಿಕ್‌ನಲ್ಲಿ ನೆರೆಯ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯದವರ ಮೇಲಿನ ದೌರ್ಜನ್ಯವನ್ನು ಪ್ರತಿಭಟಿಸಿ ಸಕಲ ಹಿಂದೂ ಸಮಾಜವು ಬಂದ್‌ಗೆ ಕರೆ ನೀಡಿತ್ತು. ಆದರೆ, ಭದ್ರಕಾಳಿ ಪ್ರದೇಶದಲ್ಲಿ ಎರಡು ಗುಂಪುಗಳು ನಡುವೆ ಘರ್ಷಣೆ ನಡೆದಿದ್ದು, ಉದ್ವಿಗ್ನತೆಗೆ ಕಾರಣವಾಯಿತು ಎಂದು ಅಧಿಕಾರಿಗಳು ವಿವರಿಸಿದ್ದಾರೆ.

‘ಹಿಂದೂ ಸಮಾಜದ ಸದಸ್ಯರು ಮೋಟಾರು ಬೈಕ್ ರ‍್ಯಾಲಿಯೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು. ಇದೇ ವೇಳೆ ಬಂದ್ ವಿರೋಧಿಸಿ ಕೆಲವರು ಅಂಗಡಿಗಳನ್ನು ತೆರೆದಿದ್ದರು. ಅಂಗಡಿಗಳನ್ನು ಮುಚ್ಚುವಂತೆ ಪ್ರತಿಭಟನಾಕಾರರು ಒತ್ತಾಯಿಸಿದಾಗ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಳಿಕ ಇದು ಘರ್ಷಣೆಗೆ ತಿರುಗಿ ಕಲ್ಲು ತೂರಾಟ ನಡೆದಿದೆ ಎಂದು ವರದಿಯಾಗಿದೆ.

#WATCH | Maharashtra: Violence broke out in Nashik, earlier today, during the protest march over the Bangladesh issue. pic.twitter.com/oFJSu4WOKw

— ANI (@ANI) August 16, 2024

‘ಜಲಗಾಂವ್ ಮತ್ತು ನಾಸಿಕ್‌ನಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಆದರೆ, ನಿಯಂತ್ರಣದಲ್ಲಿದೆ. ಗುಂಪನ್ನು ಚದುರಿಸಲು ಆರು ಅಶ್ರುವಾಯು ಶೆಲ್‌ ಮತ್ತು ಒಂದು ರಬ್ಬರ್ ಬುಲೆಟ್ ಅನ್ನು ಹಾರಿಸಲಾಯಿತು. ಘಟನೆಯಲ್ಲಿ ಆರು ಪೊಲೀಸರು ಗಾಯಗೊಂಡಿದ್ದಾರೆ. ರಾಜ್ಯ ಮೀಸಲು ಪೊಲೀಸ್ ಪಡೆ (ಎಸ್‌ಆರ್‌ಪಿಎಫ್) ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದು ನಾಸಿಕ್ ಪೊಲೀಸ್ ಕಮಿಷನರ್ ಸಂದೀಪ್ ಕಾರ್ಣಿಕ್ ಹೇಳಿದ್ದಾರೆ.

ಭದ್ರಕಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಂಜಾನೆ ಎರಡು ಗುಂಪುಗಳ ನಡುವೆ ಘರ್ಷಣೆ ವರದಿಯಾಗಿದೆ. ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ನಾಗರಿಕರು ವದಂತಿಗಳಿಗೆ ಕಿವಿಕೊಡಬಾರದು. ಶಾಂತಿ ಕಾಪಾಡಿಕೊಳ್ಳಬೇಕು ಎಲ್ಲರೂ ಸಹಕರಿಸಬೇಕು ಎಂದು ನಾಸಿಕ್ ಪೊಲೀಸರು ಮನವಿ ಮಾಡಿದ್ದಾರೆ.

Tags: BangladeshMaharashtra Chief Minister Devendra FadnavisMinistry of Home Affairs
Previous Post

ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಸುದ್ದಿಗೋಷ್ಠಿ..

Next Post

ಭೀಮ ಸಿನಿಮಾ ಹಾಡಿ ಹೊಗಳಿದ ಸಿಎಂ ಸಿದ್ದರಾಮಯ್ಯ..!

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post

ಭೀಮ ಸಿನಿಮಾ ಹಾಡಿ ಹೊಗಳಿದ ಸಿಎಂ ಸಿದ್ದರಾಮಯ್ಯ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada