• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

DK Shivakumar: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 4, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಶಿಬು ಸೊರೇನ್ ನಿಧನಕ್ಕೆ ಮೂರು ದಿನಗಳ ಶೋಕಾಚರಣೆ ಹಿನ್ನೆಲೆಯಲ್ಲಿ ಹೋರಾಟ ಮುಂದಕ್ಕೆ..

ADVERTISEMENT

“ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನಕ್ಕೆ ಮೂರು ದಿನಗಳ ಶೋಕಾಚರಣೆ ಹಿನ್ನೆಲೆಯಲ್ಲಿ ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ ಪ್ರತಿಭಟನಾ ಸಭೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಸೋಮವಾರ ಮಾತನಾಡಿದ ಶಿವಕುಮಾರ್ ಅವರು ಈ ವಿಚಾರ ತಿಳಿಸಿದರು.

“ಶಿಬು ಸೊರೇನ್ ಬುಡಕಟ್ಟು ಸಮುದಾಯದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷದ ಬಹುಕಾಲದ ಮೈತ್ರಿ ನಾಯಕರು. ಅವರಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಶಿಬು ಸೊರೇನ್ ಅವರಿಗೆ ಗೌರವ ಸಲ್ಲಿಸಬೇಕು. ಅವರ ಅಂತ್ಯಕ್ರಿಯೆ ಮಂಗಳವಾರ (ನಾಳೆ) ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಆತುರದಲ್ಲಿ ಮಾಡುವುದು ಬೇಡ ಎಂಬ ಕಾರಣಕ್ಕೆ ಈ ತೀರ್ಮಾನಕ್ಕೆ ಬರಲಾಗಿದೆ. ಶೋಕಾಚರಣೆ ಆಚರಿಸುವ ದಿನ ದೇಶಕ್ಕೆ ಒಂದು ಸಂದೇಶ ನೀಡುವ ಕಾರ್ಯಕ್ರಮ ಬೇಡ ಎಂದು ನಿರ್ಧರಿಸಿದ್ದೇವೆ. ಈ ವಿಚಾರವಾಗಿ ನಮ್ಮ ನಾಯಕರ ಜೊತೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ” ಎಂದರು.

“ಮಂಗಳವಾರದ ಕಾರ್ಯಕ್ರಮಕ್ಕೆ ಮಾಡಿಕೊಂಡಿರುವ ಸಿದ್ಧತೆ ಹಾಗೇ ಮುಂದುವರಿಸಿಕೊಂಡು ಹೋಗಬೇಕು ಎಂದು ಪಕ್ಷದ ನಾಯಕರು, ಶಾಸಕರು, ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ. 8ರಂದು ಅದೇ ಸ್ಥಳದಲ್ಲಿ, ಅದೇ ಸಮಯಕ್ಕೆ ನಡೆಯಲಿದೆ. ನಮ್ಮ ಕಾರ್ಯಕರ್ತರು, ಮುಖಂಡರು ಹಾಗೂ ಮತದಾರರು ಈ ಹೋರಾಟದಲ್ಲಿ ಭಾಗವಹಿಸಲು ಬಹಳ ಉತ್ಸುಕರಾಗಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ನಿಗದಿಯಾಗಿದ್ದ ರಾಹುಲ್ ಗಾಂಧಿ ಅವರ ಮಾಧ್ಯಮಗೋಷ್ಠಿಯನ್ನು ಕೂಡ ಮುಂದೂಡಲಾಗಿದ್ದು, ನಾಳೆ ಅಂತ್ಯಕ್ರಿಯೆ ನಂತರ ಇದರ ಬಗ್ಗೆ ಚರ್ಚಿಸಿ ಮಾಹಿತಿಯನ್ನು ಅವರು ತಿಳಿಸಲಿದ್ದಾರೆ” ಎಂದು ತಿಳಿಸಿದರು.

ನಮ್ಮ ಮತ – ನಮ್ಮ ಹಕ್ಕು!

ಮತದಾರರ ಹಕ್ಕು, ಸಂವಿಧಾನದ ರಕ್ಷಣೆ, ಪ್ರಜಾಪ್ರಭುತ್ವದ ಉಳಿವಿಗಾಗಿ ನಮ್ಮ ರಾಷ್ಟ್ರೀಯ ನಾಯಕರು ಹಾಗೂ ಲೋಕಸಭಾ ವಿರೋಧ ಪಕ್ಷದ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರು ಹಾಗೂ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಮತ ಕಳ್ಳತನದ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಹೋರಾಟ… pic.twitter.com/xK4sV9Tiy4

— DK Shivakumar (@DKShivakumar) August 4, 2025

“ಶಿಬು ಸೊರೇನ್ ಅವರು ಕಷ್ಟ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ನಿಂತಿದ್ದಾರೆ. ನರಸಿಂಹ ರಾವ್ ಅವರ ಕಾಲ ಸೇರಿದಂತೆ ಎಲ್ಲಾ ಸಮಯದಲ್ಲೂ ಕಾಂಗ್ರೆಸ್ ಪಕ್ಷದ ಪರ ಬಂಡೆಯಂತೆ ನಿಂತದ್ದರು. ಪಕ್ಷದ ಸಿದ್ಧಾಂತದ ಜೊತೆ ನಿಂತು ನಮ್ಮ ಸರ್ಕಾರಕ್ಕೆ ಅವರು, ಅವರ ಸರ್ಕಾರಕ್ಕೆ ನಾವು ಬೆಂಬಲವಾಗಿ ನಿಂತಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾವು ಪ್ರಾರ್ಥಿಸುತ್ತೇವೆ” ಎಂದರು.

“ಆಗಸ್ಟ್ 8ರಂದು ವರಮಹಾಲಕ್ಷ್ಮಿ ಹಬ್ಬವಿದ್ದರೂ ಪಕ್ಷದ ಕೆಲಸಕ್ಕೆ ಆದ್ಯತೆ ನೀಡುತ್ತಿದ್ದೇವೆ. ಹಬ್ಬದ ಪ್ರಯುಕ್ತ ಪೂಜೆ ಮಾಡಲು ಹಾಗೂ ಪ್ರಾರ್ಥನೆ ಮಾಡಲು ನಾವು ಯಾರಿಗೂ ಅಡ್ಡಿಪಡಿಸುವುದಿಲ್ಲ. ಪಕ್ಷದ ಹೋರಾಟಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಮುಖಂಡರು, ಕಾರ್ಯಕರ್ತರಲ್ಲಿ ಮಾಧ್ಯಮಗಳ ಮೂಲಕ ಮನವಿ ಮಾಡಿಕೊಳ್ಳುತ್ತೇನೆ. ಮತ್ತೊಮ್ಮೆ ಶಾಸಕಾಂಗ ಪಕ್ಷದ ಸಭೆ ಕರೆಯಲು ನಮ್ಮ ನಾಯಕರು ಮಾರ್ಗದರ್ಶನ ನೀಡಿದ್ದು, ಸಿಎಂ ಜೊತೆ ಚರ್ಚೆ ಮಾಡುತ್ತೇವೆ” ಎಂದು ಹೇಳಿದರು.

ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿಯವರು ಚುನಾವಣಾ ಆಯೋಗದ ಪರವಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟಿಸುವವರು, ಟೀಕಿಸುವವರನ್ನು ಸ್ವಾಗತಿಸುತ್ತೇವೆ. ಅವರು ಏನು ಹೇಳಬೇಕೋ ಹೇಳಲಿ. ನೀವುಗಳು ಹೇಳಿದಂತೆ ಅವರು ಚುನಾವಣಾ ಆಯೋಗವನ್ನು ಸಮರ್ಥಿಸಿಕೊಂಡು ಪ್ರತಿಭಟಿಸುತ್ತಿದ್ದಾರೆ. ಚುನಾವಣಾ ಆಯೋಗ ಸರಕಾರದ ಭಾಗವಾಗಿದೆ. ಹೀಗಾಗಿ ಇದನ್ನು ಮಾಡುತ್ತಿದ್ದಾರೆ. ಚುನಾವಣಾ ಆಯೋಗ ನಿಷ್ಪಕ್ಷಪಾತ ಹಾಗೂ ನ್ಯಾಯಪೀಠ ಸ್ಥಾನದಲ್ಲಿ ಇರಬೇಕು. ನ್ಯಾಯಪೀಠದಿಂದ ಅನ್ಯಾಯ ಆಗಬಾರದು. ಎಲ್ಲರಿಗೂ ನ್ಯಾಯ ಸಿಗಬೇಕು ಎಂಬುದು ನಮ್ಮ ಆಶಯ. ವಿಧಾನಸಭೆ ಚುನಾವಣೆ ಸಮಯದಲ್ಲೇ ಮಹದೇವಪುರ ಕ್ಷೇತ್ರದ ನಮ್ಮ ಅಭ್ಯರ್ಥಿ ಸೂಕ್ತ ದಾಖಲೆಯೊಂದಿಗೆ ದೂರು ನೀಡಿದ್ದರು. ಅವರ ದೂರಿಗೆ ಸರಿಯಾದ ಸ್ಪಂದನೆ ಸಿಕ್ಕಿಲ್ಲ. ಈ ವಿಚಾರವಾಗಿ ಅಧ್ಯಯನ ನಡೆಸಿದ ನಂತರ ಮತ್ತಷ್ಟು ಅಂಶಗಳು ಬೆಳಕಿಗೆ ಬಂದಿವೆ. ಈ ವಿಚಾರ ತಡವಾಗಿ ಬಹಿರಂಗವಾಗುತ್ತಿರಬಹುದು, ಹಾಗೆಂದು ನಾವು ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ. ನಮ್ಮ ಅಧ್ಯಯನದ ಅಂಶಗಳನ್ನು ಸಾರ್ವಜನಿಕರ ಮುಂದೆ ಇಡುತ್ತೇವೆ. ನಂತರ ಯಾರು ಸರಿ, ಯಾರು ತಪ್ಪು ಎಂಬುದನ್ನು ಜನ ತೀರ್ಮಾನ ಮಾಡಲಿ” ಎಂದು ತಿಳಿಸಿದರು.

ಶಾಸಕಾಂಗ ಸಭೆ ಬಗ್ಗೆ ಕೇಳಿದಾಗ, “ಈ ಕಾರ್ಯಕ್ರಮದ ಉದ್ದೇಶಕ್ಕೆ ಬೆಂಗಳೂರಿಗೆ ಆಗಮಿಸುತ್ತಿರುವ ಶಾಸಕರ ಜೊತೆ ಚರ್ಚೆ ಮಾಡಲು ನಮ್ಮ ನಾಯಕರು ಹೇಳಿದ್ದಾರೆ” ಎಂದು ಸ್ಪಷಪಡಿಸಿದರು.

Tags: Congress leaderDK ShivakumarDKSelection strategiesIndian political historyIndian politiciansIndira Gandhikarnataka elections 2023Karnataka PoliticsMallikarjun Khargepolitical controversiespolitical leadershipPriyanka GandhiRahul GandhiSiddaramaiaihSoniya Gandhi
Previous Post

Santhosh Lad: ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಲೋಕಾರ್ಪಣೆ ನೆರವೇರಿಸಿದ ಸಚಿವ ಸಂತೋಷ್‌ ಲಾಡ್‌..!!

Next Post

CM Siddaramaiah: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ನಡೆಸಿದ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ..

Related Posts

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
0

ಬೆಂಗಳೂರು: ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಗೆ ಸಂಸದ ತೇಜಸ್ವಿ ಸೂರ್ಯ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಗೃಹ ಸಚಿವ ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಪರಮೇಶ್ವರ್, ಅನೇಕ ವಿಚಾರಗಳು ಸಂಸದ...

Read moreDetails
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

November 18, 2025
ಶ್ವಾಸಕೋಶದಲ್ಲಿ ಸೋಂಕು: ಸಿಎಂ ಪತ್ನಿ ಆಸ್ಪತ್ರೆಗೆ ದಾಖಲು

ಶ್ವಾಸಕೋಶದಲ್ಲಿ ಸೋಂಕು: ಸಿಎಂ ಪತ್ನಿ ಆಸ್ಪತ್ರೆಗೆ ದಾಖಲು

November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

November 18, 2025
Next Post

CM Siddaramaiah: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ನಡೆಸಿದ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ..

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada