• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜನರು ಸಂಕಷ್ಟದಲ್ಲಿರುವಾಗ ಜನಪ್ರತಿನಿಧಿಗಳು ನಾಪತ್ತೆ: ಪೃಥ್ವಿ ರೆಡ್ಡಿ

ಪ್ರತಿಧ್ವನಿ by ಪ್ರತಿಧ್ವನಿ
July 16, 2022
in ಕರ್ನಾಟಕ, ರಾಜಕೀಯ
0
ಜನರು ಸಂಕಷ್ಟದಲ್ಲಿರುವಾಗ ಜನಪ್ರತಿನಿಧಿಗಳು ನಾಪತ್ತೆ: ಪೃಥ್ವಿ ರೆಡ್ಡಿ
Share on WhatsAppShare on FacebookShare on Telegram

ಅತಿವೃಷ್ಟಿ ಸೃಷ್ಟಿಸಿದ ಅವಾಂತರಗಳಿಂದ ರಾಜ್ಯದ ಜನತೆ ಚಿಂತೆಯಲ್ಲಿರುವಾಗ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳು ತಮ್ಮದೇ ಸ್ವಂತ ಕಾರ್ಯದಲ್ಲಿ ಮಗ್ನರಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು.

ADVERTISEMENT

ಮಾಧ್ಯಮಗಳೊಂದಿಗೆ ಮಾತನಾಡಿದ ಪೃಥ್ವಿ ರೆಡ್ಡಿ, “ಅತಿಯಾದ ಮಳೆಯಿಂದ ರಾಜ್ಯ ಹಲವೆಡೆ ಗುಡ್ಡಗಳು ಕುಸಿಯುತ್ತಿವೆ. ಮನೆಗಳಿಗೆ ನೀರು ನುಗ್ಗುತ್ತಿದೆ. ಸೇತುವೆಗಳು ಮುಳುಗಿ ಹಲವು ಊರುಗಳಿಗೆ ಸಂಪರ್ಕ ಕಡಿತಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ಜನರ ಜೊತೆಗಿದ್ದು ತ್ವರಿತವಾಗಿ ಸಮಸ್ಯೆಗಳು ಪರಿಹಾರವಾಗುವಂತೆ ಮಾಡುವುದು ಜನಪ್ರತಿನಿಧಿಗಳ ಕರ್ತವ್ಯ. ಆದರೆ ನಮ್ಮ ಶಾಸಕರುಗಳು ಈ ಬಗ್ಗೆ ಯೋಚಿಸದೇ ಬೇರೆಬೇರೆ ಅನಗತ್ಯ ಕಾರ್ಯಗಳಲ್ಲಿ ನಿರತರಾಗಿದ್ದಾರೆ” ಎಂದು ಬೇಸರ ವ್ಯಕ್ತ ಪಡಿಸಿದರು.

“ಬಿಜೆಪಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ, ಕೆ.ಎಂ.ನಾರಾಯಣ ಸ್ವಾಮಿ, ಎಸ್.ಎನ್.ಸುಬ್ಬಾರೆಡ್ಡಿ, ದತ್ತಾತ್ರೇಯ ಪಾಟೀಲ ರೇವೂರಾ, ಕೆ.ಶ್ರೀನಿವಾಸ್ ಮೂರ್ತಿ, ಮಹದೇವಪ್ಪ ಶಿವಲಿಂಗಪ್ಪ ಯದವಾಡ್, ಗಣೇಶ್ ಹುಕ್ಕೇರಿ, ಶ್ರೀಮಂತ ಪಾಟೀಲ, ಸೋಮನಗೌಡ ಪಾಟೀಲ, ಉದಯ ಬಿ ಗರುಡಾಚಾರ್, ಎಸ್.ರಾಮಪ್ಪ, ರವೀಂದ್ರ ಶ್ರೀಕಂಠಯ್ಯ, ಹರೀಶ್ ಪೂಂಜಾ, ವೆಂಕಟ್ ರೆಡ್ಡಿ ಮುದ್ನಾಳ್ರವರು ಕಾಶ್ಮೀರ ಸಮೀಪದ ಲಡಾಖ್‌ಗೆ ಪ್ರವಾಸ ಕೈಗೊಂಡಿದ್ದಾರೆ. ಅಧ್ಯಯನದ ನೆಪದಲ್ಲಿ ಜನರ ತೆರಿಗೆ ದುಡ್ಡಿನಲ್ಲಿ ಅಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ” ಎಂದು ಪೃಥ್ವಿ ರೆಡ್ಡಿ ಹೇಳಿದರು.

ರಾಷ್ಟ್ರಪತಿ ಚುನಾವಣೆಗಾಗಿ ಬಿಜೆಪಿಯು ತನ್ನ ಶಾಸಕರನ್ನು ಶಾಂಗ್ರಿಲಾ ಹೊಟೇಲ್‌ನಲ್ಲಿ ಬಂಧಿಸಿಟ್ಟಿದೆ. ಅಲ್ಲಿಂದ ಹೊರಹೋಗಲು ಸಾಧ್ಯವಾಗದಂತೆ ಶಾಸಕರಿಗೆ ಬಿಜೆಪಿ ದಿಗ್ಬಂಧನ ವಿಧಿಸಿದೆ. ವಿರೋಧ ಪಕ್ಷ ಕಾಂಗ್ರೆಸ್‌ ಶಾಸಕರಿಗೆ ಸಿದ್ದರಾಮೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸುವ ಚಿಂತೆಯಾಗಿದೆ. ಒಟ್ಟಿನಲ್ಲಿ ಜನರ ಸಮಸ್ಯೆಗಳು ಇವರ್ಯಾರಿಗೂ ಕಾಣಿಸುತ್ತಿಲ್ಲ. ಮಳೆಯಿಂದಾಗಿ ಮೀನುಗಾರರು ಆದಾಯವಿಲ್ಲದೇ ಸಂಷ್ಟದಲ್ಲಿದ್ದರೂ ಕರಾವಳಿ ಭಾಗದ ಶಾಸಕರು ಹಾಗೂ ರಾಜ್ಯ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ” ಎಂದು ಪೃಥ್ವಿ ರೆಡ್ಡಿ ಹೇಳಿದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಉತ್ತರ ಕರ್ನಾಟಕಕ್ಕೆ ಜನಪ್ರತಿನಿಧಿಗಳಿಂದ ಅನ್ಯಾಯವಾಗಿದೆಯೇ ಹೊರತು ದಕ್ಷಿಣ ಕರ್ನಾಟಕದವರಿಂದಲ್ಲ

Next Post

ವಿಪಕ್ಷ ಹಾಗೂ ಆಡಳಿತ ಪಕ್ಷಗಳ ನಡುವಿನ ಗೌರವ ಕಡಿಮೆಯಾಗುತ್ತಿದೆ : ಸಿಜೆಐ ರಮಣ

Related Posts

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ರಾಜಕೀಯ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

by ಪ್ರತಿಧ್ವನಿ
April 24, 2026
0

ಬೆಂಗಳೂರು: ಒಳ ಮೀಸಲಾತಿ ಹಂಚಿಕೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
Next Post
ವಿಪಕ್ಷ ಹಾಗೂ ಆಡಳಿತ ಪಕ್ಷಗಳ ನಡುವಿನ ಗೌರವ ಕಡಿಮೆಯಾಗುತ್ತಿದೆ : ಸಿಜೆಐ ರಮಣ

ವಿಪಕ್ಷ ಹಾಗೂ ಆಡಳಿತ ಪಕ್ಷಗಳ ನಡುವಿನ ಗೌರವ ಕಡಿಮೆಯಾಗುತ್ತಿದೆ : ಸಿಜೆಐ ರಮಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada