ಮಠದ ವಸತಿ ನಿಲಯದಲ್ಲಿ ವಾಸವಿದ್ದ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿರುವ ಮುರುಘಾ ಶರಣರಿಗೆ ನ್ಯಾಯಾಲಯ ದೊಡ್ಡ ಶಾಕ್ ಒಂದನ್ನು ನೀಡಿದೆ.
ಲೈಂಗಿಕ ದೌರ್ಜನ್ಯದ ಪ್ರಕರಣ ಇತ್ಯರ್ಥವಾಗುವರೆಗೂ ಮುರುಘಾ ಮಠ ಹಾಗೂ SJM ವಿದ್ಯಾಪೀಠದಲ್ಲಿ ಶರಣರು ಹೊಂದಿದ್ದ ಆಧಿಕಾರವನ್ನ ನಿರ್ಬಂಧಿಸಿ ಜಿಲ್ಲಾ 2ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯ ಅಧಿಕಾರವನ್ನ ನಿರ್ಬಂಧಿಸಿ ಆದೇಶ ಹೊರಡಿಸಿದೆ.

ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ 1988ರ ಸೆಕ್ಷನ್ 8ರ ಅಡಿಯಲ್ಲಿ ಶರಣರ ಅಧಿಕಾರವನ್ನ ನಿರ್ಬಂಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಇನ್ನು ಮಠದ ನೂತನ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅಧಿಕಾರ ಸ್ವೀಕರಿಸಿದ್ದಾರೆ. ಮಾಜಿ ಸಚಿವ ಏಕಂತಯ್ಯ ಕೋರಿಕೆ ಮೇರೆಗೆ ರಾಜ್ಯ ಸರ್ಕಾರ ವಸ್ತ್ರದ್‌ರನ್ನು ನೇಮಿಸಿತ್ತು.












