ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪರೀಕ್ಷೆಯಲ್ಲಿ ಅಕ್ರಮಗಳು ನಡೆದು ಕೋರ್ಟ್ ಮೆಟ್ಟಿಲೇರಿತ್ತು. ಆ ಬಳಿಕ ಹೈಕೋರ್ಟ್ ಮೆಟ್ಟಿಲೇರಿದ ಬಳಿಕ ಕೋರ್ಟ್ ಸೂಚನೆಯಂತೆ ರಾಜ್ಯ ಸರ್ಕಾರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮರು ಪರೀಕ್ಷೆಗೆ ಅವಕಾಶ ನೀಡಿತ್ತು. ಡಿಸೆಂಬರ್ 23ರಂದು ಪಿಎಸ್ಐ ಮರುಪರೀಕ್ಷೆ ನಿಗದಿಯಾದ ಮೇಲೆ ಓದುವುದಕ್ಕೆ ಅವಕಾಶ ಬೇಕು ಅನ್ನೋ ಕೂಗು ಎದ್ದಿತ್ತು. ಆ ಬಳಿಕ ಜನವರಿ 23ರಂದು ಪರೀಕ್ಷೆ ನಡೆಸುವ ಘೋಷಣೆ ಮಾಡಿತ್ತು. ಇದೀಗ ಪರೀಕ್ಷೆಗೆ ಪ್ರವೇಶ ಪತ್ರ ಪಡೆದುಕೊಳ್ಳುವ ಅವಕಾಶ ಕಲ್ಪಿಸಲಾಗಿದೆ.
ಪ್ರವೇಶಪತ್ರ ಡೌನ್ಲೋಡ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅವಕಾಶ ಕಲ್ಪಿಸಲಾಗಿದೆ. ಜನವರಿ 23ರಂದು 545 ಪಿಎಸ್ಐ ನೇಮಕಾತಿಗೆ ಮರುಪರೀಕ್ಷೆ ನಡೆಯುತ್ತಿದೆ. ಅರ್ಹ ಅಭ್ಯರ್ಥಿಗಳು ಜನವರಿ 17ರಂದು ಬೆಳಗ್ಗೆ 11 ಗಂಟೆಯಿಂದ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಪರೀಕ್ಷಾ ಅಭ್ಯರ್ಥಿಗಳು ಪ್ರಾಧಿಕಾರದ ಜಾಲತಾಣ http://kea.kar.nic.in ಗೆ ಭೇಟಿ ನೀಡಿ Hall Ticket ಪಡೆದುಕೊಳ್ಳಬಹುದು.
kea website ನ ವೆಬ್್ಸೈಟ್ ಓಪನ್ ಮಾಡಿ ನಿಗದಿತ ಲಿಂಕ್ ಆಯ್ಕೆ ಮಾಡಿಕೊಳ್ಳಬೇಕು. ಬಳಿಕ ಆಧಾರ್ ಸಂಖ್ಯೆ ಮತ್ತು ಹೆಸರನ್ನು ನಮೂದಿಸಿ, ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಪಿಎಸ್ಐ ಪರೀಕ್ಷೆಯು ಜನವರಿ 23ರಂದು ನಿಗದಿತ ಕೇಂದ್ರಗಳಲ್ಲಿ ನಡೆಯಲಿದೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ವಸ್ತ್ರಸಂಹಿತೆ ಸೇರಿದಂತೆ ಪ್ರತಿಯೊಂದು ಸೂಚನೆಯನ್ನೂ ಕಡ್ಡಾಯವಾಗಿ ಪಾಲಿಸಲು ಪ್ರಾಧಿಕಾರ ಸೂಚನೆ ನೀಡಿದೆ.
ಪಿಎಸ್ಐ ಪರೀಕ್ಷಾ ಅಕ್ರಮಗಳ ಬಳಿಕ ಎಚ್ಚೆತ್ತುಕೊಂಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಿದ್ದು, ಅಭ್ಯರ್ಥಿಗಳು ವಸ್ತ್ರಸಂಹಿತೆ ಸೇರಿದಂತೆ ಪ್ರತಿಯೊಂದು ಸೂಚನೆಯನ್ನೂ ಕಡ್ಡಾಯವಾಗಿ ಪಾಲಿಸುವಂತೆ ಪರೀಕ್ಷಾರ್ಥಿಗಳಿಗೆ ಎಚ್ಚರಿಕೆ ನೀಡಿದೆ. ಪ್ರಾಧಿಕಾರದ ಸೂಚನೆ ಮೀರಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಪಡೆಯಲು ಯತ್ನಿಸಿದ್ರೆ ಬಂಧನ ಮಾಡಲಾಗುತ್ತದೆ. ಇನ್ನು ಪರೀಕ್ಷೆ ಈ ಬಾರಿ ಕಟ್ಟುನಿಟ್ಟಾಗಿ ನಡೆಯಲಿದ್ದು, ಯಾವುದೇ ರೀತಿಯ ನಕಲು ಯತ್ನಕ್ಕೆ ಪ್ರಯತ್ನ ಮಾಡಿದರೆ ಕಠಿಣ ಕಾನೂನು ಬಳಕೆಗೂ ನಿರ್ಧಾರ ಮಾಡಲಾಗಿದೆ. ಪರೀಕ್ಷೆ ಬರೆಯುತ್ತಿರುವ ಎಲ್ಲಾ ಪರೀಕ್ಷಾರ್ಥಿಗಳಿಗೂ Prathidvani News ಕಡೆಯಿಂದ ಶುಭಾಶಯಗಳು.