ಪಿ ಎಸ್ ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂದಿಸಿದಂತೆ ಮತ್ತೊಬ್ಬ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಎನ್.ವಿ. ಸುನೀಲ್ ಕುಮಾರ್ ಬಂಧಿತ ಆರೋಪಿ ಕಲಬುರಗಿಯ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬ್ಲೂಟೂತ್ ಉಪಕರಣವನ್ನು ಬಳಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ ಎಂಬ ಆರೋಪ ಕೇಳಿ ಬಂದಿದೆ. ಹಗರಣದ ಕಿಂಗ್ಪಿನ್ ರುದ್ರಗೌಡ ಮುಖಂತರವೇ ಸುನೀಲ್ ಕುಮಾರ್ ಅಕ್ರಮವಾಗಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದಾನೆ ಎಂದು ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ.
ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಪರೀಕ್ಷೆಯಲ್ಲಿ ಪಾಸಾದವರ ದಾಖಲೆಗಳ ಮರುಪರಿಶೀಲನೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ನೋಟಿಸ್ ನಢೀಓದ್ದರು ಅದರಂತೆ ಸುನೀಲ್ ಕುಮಾರ್ ತನಿಖೆಗೆ ಹಾಜರಾಗಿದ್ದನ್ನು ದಾಖಲೆಗಳ ಪರಿಶೀಲನೆ ವೇಳೆ ಅಕ್ರಮ ಕಂಡು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸುಣಿಲ್ ಕುಮಾರ್ನನ್ನು ಸ್ಥಳದಲ್ಲೇ ಬಂಧಿಸಿದ್ದಾರೆ.