PSI ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧಿ ಮುಖ್ಯ ಆರೋಪಿ ದಿವ್ಯಾ ಹಾಗರಿಗಿಯನ್ನು ಇಂದು ಜೈಲಿಗೆ ಸ್ಥಳಾಂತರ ಮಾಡಲಾಗಿದೆ.
PSI ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ದಿವ್ಯಾ ಹಾಗರಿಗೆಯನ್ನು ಸಿಐಡಿ ಪೊಲೀಸರು 11 ದಿನಗಳ ಕಾಲ ವಶಕ್ಕೆ ಪಡೆದಿದ್ದರು. ಇಂದಿಗೆ ಸಿಐಡಿ ಕಸ್ಟಡಿಯ ಕಾಲಾವಕಾಶ ಮುಕ್ತಾಯವಾದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮುಂದೆ ದಿವ್ಯಾ ಹಾಗರಗಿಯನ್ನು ಹಾಜರುಪಡಿಸಿ ನಂತರ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

11 ದಿನ ಸುದೀರ್ಘ ವಿಚಾರಣೆ ನಡೆಸಿದ ಸಿಐಡಿ ತಂಡ ಅನೇಕ ಮಾಹಿತಿ ಕಲೆ ಹಾಕಿದ್ದಾರೆ. ನಿನ್ನೆ ದಿವ್ಯಾ ಹಾಗರಗಿ ಒಡೆತನದ ಜ್ಞಾನಜ್ಯೋತಿ ಶಾಲೆ, ಹಳೆ ಜೇವರ್ಗಿ ರಸ್ತೆಯಲ್ಲಿರುವ ಮನೆ ಸ್ಥಳ ಮಹಜರ್ ಮಾಡಿದ್ದಾರೆ. ಶಾಲೆಯಲ್ಲಿ ಜೆರಾಕ್ಸ್ ಮಶೀನ್ ಸೇರಿದಂತೆ ಕೆಲ ಎಲೆಕ್ಟ್ರಾನಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.