ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧಿಸಿದಂತೆ ಪ್ರಮುಖ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಸಿಐಡಿ ತಂಡ ಬಂಧಿಸಿದೆ.
ದಿವ್ಯಾ ಹಾಗರಗಿ ಒಡೆತನಕ್ಕೆ ಸೇರಿದ ಜ್ಞಾನ ಜ್ಯೋತಿ ಶಾಲೆಯ ಪರೀಕ್ಷೆ ಕೇಂದ್ರದಲ್ಲಿ OMR ಶೀಟ್ ತಿದ್ದುಪಡಿ ಹಾಗೂ ಬ್ಲೂಟೂತ್ ಮೂಲಕ ಅಕ್ರಮ ಎಸಗಿದ ಹಿನ್ನೆಲೆಯಲ್ಲಿ ಕಳೆದ ಏ.9 ರಂದು FIR ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದ ದಿವ್ಯಾಳನ್ನು ಇಂದು ಬಂಧಿಸಲಾಗಿದೆ.

ದಿವ್ಯಾಗೆ ಆಶ್ರಯ ನೀಡಿದ್ದ ಸೊಲ್ಲಾಪುರ ಉದ್ಯಮಿ ಸುರೇಶ ಸೇರಿ ಆರು ಜನರನ್ನು ಬಂಧಿಸಲಾಗಿದೆ. ಗುರುವಾರದವರೆಗೂ 17 ಆರೋಪಿಗಳನ್ನು ಬಂಧಿಸಲಾಗಿತ್ತು ಈಗ ಆರು ಆರೋಪಿಗಳನ್ಬು ಬಂಧಿಸುವುದರ ಮೂಲಕ ಸಂಖ್ಯೆ 23ಕ್ಕೆ ಏರಿದಂತಾಗಿದೆ.






