• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರವಾಸಕ್ಕೆ ಮಡಿಕೇರಿಗೆ ಬಂದಿದ್ದ ಪಿಯು ವಿದ್ಯಾರ್ಥಿನಿಯರಿಗೆ ಬಿಯರ್‌ ಕುಡಿದು ಡ್ಯಾನ್ಸ್‌ ಮಾಡುವಂತೆ ಒತ್ತಾಯ;ಮಕ್ಕಳ ಆಯೋಗದಲ್ಲಿ ದೂರು ದಾಖಲು

ಪ್ರತಿಧ್ವನಿ by ಪ್ರತಿಧ್ವನಿ
October 19, 2024
in Top Story, ಇತರೆ / Others
0
Share on WhatsAppShare on FacebookShare on Telegram

ರಾಮನಗರ; ಶೈಕ್ಷಣಿಕ ಪ್ರವಾಸ ಬಂದಿದ್ದ ಪಿಯು ಕಾಲೇಜಿನ ವಿದ್ಯಾರ್ಥಿನಿಯರಿಗೆ ಬಿಯರ್ ಕುಡಿಯುವಂತೆ ಒತ್ತಾಯಿಸಿ , ಡ್ಯಾನ್ಸ್ ಮಾಡುವಂತೆ ಕಿರುಕುಳ ನೀಡಿದ ಆರೋಪದ ಮೇಲೆ ಕನಕಪುರ ಪಟ್ಟಣದ ರೂರಲ್‌ ಪದವಿ ಪೂರ್ವ ಕಾಲೇಜಿನ ಮೂವರು ಉಪನ್ಯಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಆದೇಶಿಸಿದೆ.

ADVERTISEMENT

ಈ ಘಟನೆಯು ಅಕ್ಟೋಬರ್ 9 ರಂದು ಮಡಿಕೇರಿಯಲ್ಲಿ ವಿದ್ಯಾರ್ಥಿನಿಯರು ಉಳಿದುಕೊಂಡಿದ್ದಾಗ ನಡೆದಿದೆ. ಉಪನ್ಯಾಸಕರಾದ ವಿಶ್ವನಾಥ್, ಲಕ್ಷ್ಮೀಶ್, ನಾಗೇಶ್ ವಿರುದ್ಧ ರಾಜ್ಯ ಮಕ್ಕಳ ಆಯೋಗ ದೂರು ದಾಖಲಿಸಿಕೊಂಡಿದ್ದು ರಾಮನಗರ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ತನಿಖೆ ನಡೆಸಿ ಕೂಡಲೇ ವರದಿ ನೀಡುವಂತೆ ಆಧೇಶಿಸಲಾಗಿದೆ ಎಂದು ಮಕ್ಕಳ ಆಯೋಗದ ಸದಸ್ಯ ಶೇಖರ್‌ ಗೌಡ ರಾಮತ್ನಾಳ್‌ ತಿಳಿಸಿದರು.

ಕನಕಪುರ ಪಟ್ಟಣದ ರೂರಲ್‌ ಪದವಿ ಪೂರ್ವ ಕಾಲೇಜಿನಿಂದ ಅಕ್ಟೋಬರ್ 5 ರಿಂದ 10ರವರೆಗೆ ಮೈಸೂರು ಮತ್ತು ಕೊಡಗು ಜಿಲ್ಲಾ ಪ್ರವಾಸ ಆಯೋಜಿಸಲಾಗಿತ್ತು. ಎರಡು ಬಸ್‌ ಗಳಲ್ಲಿ ೭೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಪ್ರವಾಸಕ್ಕೆ ಆಗಮಿಸಿದ್ದರು. ಆಗ ರಾತ್ರಿ ಉಪನ್ಯಾಸಕರು ಮತ್ತು ಪ್ರಾಂಶುಪಾಲರು ಬಿಯರ್ ಕುಡಿದಿದ್ದಾರೆ. ಬಳಿಕ ಮೂವರು ವಿದ್ಯಾರ್ಥಿನಿಯರನ್ನು ಕೋಣೆಯಲ್ಲಿ ಕೂಡಿಹಾಕಿ ಬಲವಂತವಾಗಿ ಬಿಯರ್ ಕುಡಿಸಿದ್ದಾರೆ. ಅಲ್ಲದೇ, ತಮ್ಮ ಜೊತೆ ಡ್ಯಾನ್ಸ್ ಮಾಡುವಂತೆ ಬಲವಂತ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರವಾಸದಿಂದ ಕಾಲೇಜಿಗೆ ಬಂದ ಬಳಿಕ ಅಕ್ಟೋಬರ್‌ 12 ರಂದು ವಿದ್ಯಾರ್ಥಿನಿಯರು ನಡೆದ ಘಟನೆ ಬಗ್ಗೆ ಕಾಲೇಜಿನ ಮಹಿಳಾ ಉಪನ್ಯಾಸಕರಿಗೆ ಹೇಳಿದ್ದಾರೆ. ಅದಕ್ಕೆ ಮಹಿಳಾ ಉಪನ್ಯಾಸಕಿಯರು “ಕಾಲೇಜು ಅಂದಮೇಲೆ ಇದೆಲ್ಲಾ ಕಾಮನ್” ಎಂದಿದ್ದಾರೆ. ಇದರಿಂದ ನೊಂದ ಮೂವರು ವಿದ್ಯಾರ್ಥಿನಿಯರು ರಾಮನಗರ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಗೆ 1098 ಕ್ಕೆ ಕರೆ ಮಾಡಿ ದೂರು ನೀಡಿದ್ದಾರೆ.

ವಿಚಾರ ತಿಳಿದ ಕೂಡಲೇ ಮಕ್ಕಳಾ ಹಕ್ಕುಗಳ ರಕ್ಷಣಾ ಆಯೋಗ, ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಪತ್ರ ಬರೆದು ಉಪನ್ಯಾಸಕರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದೆ.ಅಲ್ಲದೇ ಪ್ರಕರಣದ ತನಿಖೆ ನಡೆಸಿ ಏಳು ದಿನದೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ಈ ಕೃತ್ಯ ನಡೆದಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ದ ಪೋಕ್ಸೋ ಪ್ರಕರಣ ದಾಖಲಿಸಲಾಗುವುದು ಎಂದು ಶೇಖರ್‌ ಗೌಡ ತಿಳಿಸಿದರು.

Tags: Commission for Protection of Child RightsFile a complaint with the Children's CommissionMadikeriPU studentsRural Pre-Graduation
Previous Post

ಅಕ್ರಮ ಹಣ ವರ್ಗಾವಣೆ ಪ್ರಕರಣ ; ಬಿಹಾರ ಆರ್‌ಜೆಡಿ ಮಾಜಿ ಶಾಸಕ ಮತ್ತು ಐಏಎಸ್‌ ಅಧಿಕಾರಿ ಬಂಧನ

Next Post

ಬೆಳಗಾವಿಯಲ್ಲಿ ರಿಯಲ್‌ ಎಸ್ಟೇಟ್‌ ಉದ್ಯಮಿ ಕೊಲೆ ;ಶನಿವಾರಸಂತೆಯ ಇಬ್ಬರ ಬಂಧನ

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

May 26, 2026
ಅರಣ್ಯ ಒತ್ತುವರಿಗೆ ಖಡಕ್ ಎಚ್ಚರಿಕೆ; 2015 ಬಳಿಕದ ಅತಿಕ್ರಮಣ ತೆರವಿಗೆ ಖಂಡ್ರೆ ಆದೇಶ

ಅರಣ್ಯ ಒತ್ತುವರಿಗೆ ಖಡಕ್ ಎಚ್ಚರಿಕೆ; 2015 ಬಳಿಕದ ಅತಿಕ್ರಮಣ ತೆರವಿಗೆ ಖಂಡ್ರೆ ಆದೇಶ

May 26, 2026
Next Post

ಬೆಳಗಾವಿಯಲ್ಲಿ ರಿಯಲ್‌ ಎಸ್ಟೇಟ್‌ ಉದ್ಯಮಿ ಕೊಲೆ ;ಶನಿವಾರಸಂತೆಯ ಇಬ್ಬರ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada