ಈಗಾಗಲೇ ಟೈಟಲ್ ಹಾಗೂ ಹಾಡಿನ ಮೂಲಕ ಸಾಕಷ್ಟು ಸದ್ದು ಮಾಡುತ್ತಿರುವ ಪದವಿಪೂರ್ವ ಚಿತ್ರವು ವರ್ಷಾಂತ್ಯ ಡಿಸೆಂಬರ್ 30ರಂದು ತೆರೆಮೇಲೆ ಬರಲು ಸಜ್ಜಾಗಿದೆ.
ಹರಿಪ್ರಸಾದ್ ಜಯಣ್ಣ ನಿರ್ದೇಶಿಸಿರುವ ಪದವಿಪೂರ್ವದಲ್ಲಿ ನವ ಪ್ರತಿಭೆ ಪೃಥ್ವಿ ಶಾಮನೂರು ನಾಯಕಿಯರಾಗಿ ಅಂಜಲಿ ಅನೀಶ್ ಮತ್ತು ಯಶ ಶಿವಕುಮಾರ್ ನಟಿಸಿದ್ದಾರೆ. ಶರತ್ ಲೋಹಿತಾಶ್ವ, ರಂಗಾಯಣ ರಘು, ರಾಮಾರಾಮಾರೆ ಖ್ಯಾತಿಯ ನಟರಾಜ್ ಭಟ್ ನಟಿಸಿದ್ದು ಅತಿಥಿ ಪಾತ್ರಗಳಲ್ಲಿ ಯೋಗರಾಜ್ ಭಟ್, ನಟಿ ಅದಿತಿ ಪ್ರಭುದೇವ, ದಿವ್ಯ ಉರುಡುಗ, ಪ್ರಭು ಮುಂದ್ಕುರ್, ಶ್ರೀ ಮಹದೇವ್ ಕಾಣಿಸಿಕೊಂಡಿದ್ದಾರೆ.
ಇನ್ನು ಚಿತ್ರಕ್ಕೆ ಹರಿಪ್ರಸಾದ್ ಜಯಣ್ಣ ಆಕ್ಷನ್ ಕಟ್ ಹೇಳಿದ್ದು ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ. ಸಂತೋಷ್ ರೈ ಪಾತಾಜೆ ಕ್ಯಾಮರಾ ಕಣ್ಚಳಕ, ಅರ್ಜುನ್ ಜನ್ಯಾ ಸಂಗೀತ, ಯೋಗರಾಜ್ ಭಟ್ ಸಾಹಿತ್ಯ, ಮಧು ತುಂಬಕೆರೆ ಸಂಕಲನ ಈ ಚಿತ್ರಕ್ಕಿದೆ.