ನಟ ಪವರ್ಸ್ಟಾರ್ ಡಾ || ಪುನೀತ್ ರಾಜ್ಕುಮಾರ್ಗೆ ಕರ್ನಾಟಕ ಸರ್ಕಾರದ ವತಿಯಿಂದ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಜ್ಯ ಸರ್ಕಾರದ ವತಿಯಿಂದ ವಿಧಾನಸೌಧ ಮುಂಭಾಗ ನೀಡಲಾಗುತ್ತಿದೆ.
ಇನ್ನು ಕಾರ್ಯಕ್ರಮಕ್ಕೆ ಸುಮಾರು 25 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದು ಸಂಚಾರ ದಟ್ಟಣೆ ತಪ್ಪಿಸುವ ಸಲುವಾಗಿ ಸಂಚಾರಿ ಪೊಲೀಸರು ಬದಲಿ ಮಾರ್ಗವನ್ನ ಉಪಯೋಗಿಸುವಂತೆ ಸಾರ್ವಜನಿಕರಲ್ಲಿ ಕೋರಿದ್ದಾರೆ.
ಮಧ್ಯಾಹ್ನ 2 ಘಂಟೆಯಿಂದ ರಾತ್ರಿ 10 ಘಂಟೆವರೆಗೂ ಕಾರ್ಯಕ್ರಮ ನಡೆಯಲಿದ್ದು ಮೀಸೆ ತಿಮ್ಮಯ್ಯ ರಸ್ತೆಯಿಂದ ಕೆ.ಆರ್ ವೃತ್ತದವರೆಗೂ ಸಂಚಾರವನ್ನ ನಿರ್ಬಂಧಿಸಲಾಗಿದೆ ಮತ್ತು ಸಾರ್ವಜನಿಕರು ಮೆಟ್ರೋ ಹಾಗೂ ಬಿಎಂಟಿಸಿಯನ್ನು ಹೆಚ್ಚು ಬಳಸುವಂತೆ ಸಂಚಾರಿ ಪೊಲೀಸರು ಕೋರಿದ್ದಾರೆ.
ಇನ್ಫೆಂಟ್ರಿ ರಸ್ತೆ, ಅಲಿ ಅಸ್ಕರ್, ಅರಮನೆ ರಸ್ತೆ, ಕಬ್ಬನ್, ರಾಜಭವನ, ಕ್ವೀನ್ಸ್ ಹಾಗೂ ಕನ್ನಿಂಗ್ ಹ್ಯಾಮ್ ರೋಡ್ನಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.