• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, September 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Health Care

ಸಾರ್ವಜನಿಕರೇ ಹಾವು ಕಚ್ಚಿದಾಗ ಈ ತಪ್ಪುಗಳನ್ನು ಮಾಡಬೇಡಿ.!

ಪ್ರತಿಧ್ವನಿ by ಪ್ರತಿಧ್ವನಿ
September 21, 2026
in Health Care, Top Story, ಕರ್ನಾಟಕ
0
ಸಾರ್ವಜನಿಕರೇ ಹಾವು ಕಚ್ಚಿದಾಗ ಈ ತಪ್ಪುಗಳನ್ನು ಮಾಡಬೇಡಿ.!
Share on WhatsAppShare on FacebookShare on Telegram

ಧಾರವಾಡ: ಭಾರತದಲ್ಲಿ ಹಾವಿನ ಕಡಿತದಿಂದ ಸಾಯುವವರ ಸಂಖ್ಯೆ ವಿಶ್ವದಲ್ಲೇ ಅತೀ ಹೆಚ್ಚು, ಹಾವು ಕಡಿತದ ಸಾವುಗಳು ಸಂಭವಿಸುವ ದೇಶಗಳಲ್ಲಿ ಭಾರತ ಕೂಡ ಒಂದಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ, ರೈತರು, ಕಾರ್ಮಿಕರು ಮತ್ತು ಮಕ್ಕಳು ಇದಕ್ಕೆ ಹೆಚ್ಚು ಬಲಿಯಾಗುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪರಶುರಾಮ ಎಫ್.ಕೆ ಅವರು ತಿಳಿಸಿದರು.

ADVERTISEMENT

ಅವರು ಇಂದು (ಸೆ.21) ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಐ.ಇ.ಸಿ. ವಿಭಾಗ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಧಾರವಾಡ ವತಿಯಿಂದ ನಡೆದ ವಿಶ್ವ ಹಾವು ಕಡಿತ ಜಾಗೃತಿ ಕಾರ್ಯಕ್ರಮ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

U.T.Khader :  ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ,  ನಮ್ಮ ಕೈಯಲ್ಲಿ ಇಲ್ಲ..! #pratidhvani

ಹಾವು ಕಡಿತ ಜಾಗತಿಕ ಸಮಸ್ಯೆಯಾಗಿದ್ದು, ಜಗತ್ತಿನ ಎಲ್ಲ ದೇಶಗಳಲ್ಲೂ ಬಗೆ ಬಗೆಯ ಹಾವುಗಳಿದ್ದು, ಅವುಗಳ ಕಡಿತವೂ ಸಾಮಾನ್ಯ, ಆದರೆ ವಿಶ್ವದಲ್ಲಿ ಹಾವು ಕಡಿತದ ರಾಷ್ಟ್ರ ಎಂದು ಕರೆಯುವುದು ಭಾರತವನ್ನು ಮಾತ್ರ ಎಂದರು.

ಇತರೆ ದೇಶಗಳಿಗೆ ಹೋಲಿಸಿದರೆ, ಭಾರತದಲ್ಲಿ ಹಾವುಗಳ ಸಂಖ್ಯೆ ಅಧಿಕ ಇದರೊಟ್ಟಿಗೆ ಜಾಗೃತಿ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಹಾವು ಕಡಿತದಿಂದ ಮೃತಪಡುವವರ ಸಂಖ್ಯೆಯೂ ಏರಿಕೆಯಾಗಿದ್ದು, ಇದರಿಂದ ಸಾವಿನ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಕಾರಣ ಪ್ರತಿ ವರ್ಷ ಅಂತರಾಷ್ಟ್ರೀಯ ಹಾವು ಕಡಿತದ ಜಾಗೃತಿ ದಿನವನ್ನಾಗಿ ಆಚರಿಸಿ ಹಾವಿನ ಕಡಿತದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

Bhojegowda on Umashree : ಸದನದಲ್ಲಿ ಉಮಾಶ್ರೀ ಕಾಲೆಳೆದ ಶಾಸಕ ಭೋಜೇಗೌಡ..! #umashree #congress

ನಾಗರಹಾವು, ಕೊಳಕುಮಂಡಲ ಹಾವು, ಕಟ್ಟು ಹಾವು, ಉರಿಮಂಡಲ ಹಾವು ಹೆಚ್ಚು ಅಪಾಯಕಾರಿ ಹಾವುಗಳಾಗಿವೆ. ಈ ನಾಲ್ಕು ಜಾತಿಯ ಹಾವುಗಳು ಗ್ರಾಮೀಣ ಮತ್ತು ನಗರ ಪ್ರದೇಶದ ಜನ ವಸತಿ ಪ್ರದೇಶಗಳಲ್ಲಿ ಹೆಚ್ಚು ಕಂಡು ಬರುತ್ತವೆ ಹಾಗೂ ಇವುಗಳ ಕಡಿತದಿಂದಲೇ ಗರಿಷ್ಠ ಸಂಖ್ಯೆಯ ಜನ ಮೃತ ಪಡುತ್ತಿದ್ದಾರೆ. ಇವುಗಳ ಚಲನವಲನ, ಆಹಾರಪದ್ಧತಿ ಇತ್ಯಾದಿ ವಿಷಯಗಳ ಬಗ್ಗೆ ಮತ್ತು ಕಡಿತದಿಂದ ಪಾರಾಗಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ಅರಿತರೆ ಸುಲಭವಾಗಿ ಪಾರಾಗಬಹುದು. ಯಾವ ಹಾವು ಅಪಾಯಕಾರಿ ಭಾರತದಲ್ಲಿ 300 ವಿಧದ ಹಾವುಗಳಿದ್ದು, ಅವುಗಳೆಲ್ಲವೂ ಅಪಾಯಕಾರಿಯಲ್ಲ, ಹಾಗಾಗಿ ದೇಶದಲ್ಲಿ ಹಾವು ಕಡಿತದಿಂದ ಮೃತ ಪಡುವವರಲ್ಲಿ ಶೇ 90 ಕ್ಕೂ ಅಧಿಕ ಜನರು 4 ಜಾತಿಯ ಹಾವುಗಳ ಕಡಿತದಿಂದ ಮಾತ್ರ ಮೃತಪಡುತ್ತಿದ್ದಾರೆ ಎಂದು ಹೇಳಿದರು.

ರೈತರು ದೇಶದ ಬೆನ್ನೆಲಬು ಆದ್ದರಿಂದ ಹಾವು ಕಡಿತದಿಂದ ಹೆಚ್ಚಾಗಿ ರೈತರು, ಕೂಲಿ ಕಾರ್ಮಿಕರು ಮೃತ ಪಡುತ್ತಿದ್ದು, ರಾತ್ರಿ ವೇಳೆ ಜಮೀನುಗಳಿಗೆ ಹೋದಾಗ ಕಡ್ಡಾಯವಾಗಿ ಟಾರ್ಚ ಲೈಟ್ ಮತ್ತು ಶೂಗಳನ್ನು ಬಳಸಬೇಕು ಹಾಗೂ ಸೂಕ್ತ ಕಳೆ, ಹುಲ್ಲುಗಾವಲು, ಅರಣ್ಯ ಪ್ರದೇಶ, ಜಮೀನಿನಲ್ಲಿ ಕೆಲಸ ಮಾಡುವಾಗ  ಗಮ್ ಬೂಟ್ ಬಳಸುವುದು ಸೂಕ್ತ.

Assembly Special Session: ರೆವಿನ್ಯೂ ಭೂಮಿಯನ್ನೆಲ್ಲಾ ಡೀಮ್ಡ್ ಫಾರೆಸ್ಟ್ ಅಂತಾ DC ಬರೆದು ಹೋಗಿದ್ದ- ಅಶೋಕ್

ಹಾವು ಕಚ್ಚಿದಾಗ ಈ ತಪ್ಪುಗಳನ್ನು ಮಾಡಬೇಡಿ

ಹಾವು ಕಚ್ಚಿದಾಗ, ಗಾಯವನ್ನು ಕತ್ತರಿಸುವುದು, ವಿಷವನ್ನು ಬಾಯಿಯಿಂದ ಹೀರುವುದು, ಗಾಯವನ್ನು ಸುಡುವುದು, ಬಿಗಿಯಾಗಿ ಹಗ್ಗ ಕಟ್ಟುವುದು ಅಥವಾ ಮನೆಮದ್ದು ಹಚ್ಚುವುದು ಮಾಡಬಾರದು.  ಮಂತ್ರ-ತಂತ್ರದ ಅಥವಾ ಇತರ ಮೂಡನಂಬಿಕೆಯ ಚಿಕಿತ್ಸೆಗಾಗಿ ಸಮಯ ವ್ಯರ್ಥ ಮಾಡದೇ ಹತ್ತಿರದ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆದರೆ ಹಾವು ಕಚ್ಚಿದವರು ಬದುಕುಳಿಯುತ್ತಾರೆ ಎಂದರು.

ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಮಹೇಶ ಚಿತ್ತರಗಿ ಪ್ರಾಸ್ತಾವಿಕವಾಗಿ ಮಾತನಾಡಿ, ಭಾರತ ಸೇರಿದಂತೆ ಜಾಗತಿಕ ಮಟ್ಟದಲ್ಲಿ ಹಾವು ಕಡಿತದ ಅಪಾಯಗಳು, ತಕ್ಷಣದ ವೈದ್ಯಕೀಯ ಚಿಕಿತ್ಸೆಯ ಮಹತ್ವ ಹಾಗೂ ತಪ್ಪು ಕಲ್ಪನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಕಾರ್ಯಕ್ರಮ ಸಂಪನ್ಮೂಲ ವ್ಯಕ್ತಿಯಾದ ಸಿನಿಯರ್ ಸ್ಪೆಶಲಿಸ್ಟ್ ರಮೇಶ ಭಜಂತ್ರಿ ಅವರು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ಶಶಿಧರ ಕಳಸೂರಮಠ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ. ರವೀಂದ್ರ ಬೊವೇರ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಮಂಜುನಾಥ ಸೊಪ್ಪಿನಮಠ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ  ಡಾ ಸಂಜಯ ಡುಮ್ಮಗೋಳ, ಡಾ. ಕಿರಣ ಕುಲಕರ್ಣಿ ಜಿಲ್ಲಾ ಆಸ್ಪತ್ರೆ, ತಾಲೂಕಾ ಆರೋಗ್ಯಾಧಿಕಾರಿ ಡಾ. ತನುಜಾ ಕೆ.ಎನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್. ಪಾತ್ರೋಟ ಉಪಸ್ಥಿತರಿದ್ದರು.

ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಮ್.ಎನ್ ಅಗಡಿ ಸ್ವಾಗತಿಸಿದರು, ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುಧಾ ತಿವಾರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಅಧಿಕಾರಿಗಳು ಹಾಗೂ ಇಲಾಖೆಯ ಸಿಬ್ಬಂದಿ ವರ್ಗವದರು ಉಪಸ್ಥಿತರಿದ್ದರು.

Tags: Big Four SnakesHealth DepartmentSnakebite AwarenessSnakebite First AidSnakebite PreventionVenomous SnakesWorld Snakebite Awareness Day
Previous Post

ಪ್ರತಾಪ್ ಸಿಂಹ ಹೇಳಿಕೆಗೆ ಪ್ರದೀಪ್ ಈಶ್ವರ್ ತಿರುಗೇಟು; ದಲಿತರ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಎಂದ ಶಾಸಕ

Next Post

ಅಕ್ಟೋಬರ್ 20ರಿಂದ ಹೊಸ ವ್ಯಾಪಾರ ನಿಯಮ; ಭಾರತ-ನ್ಯೂಜಿಲೆಂಡ್ FTAಯಿಂದ ಏನೆಲ್ಲ ಬದಲಾವಣೆ?

Related Posts

ಅಕ್ಟೋಬರ್ 20ರಿಂದ ಹೊಸ ವ್ಯಾಪಾರ ನಿಯಮ; ಭಾರತ-ನ್ಯೂಜಿಲೆಂಡ್ FTAಯಿಂದ ಏನೆಲ್ಲ ಬದಲಾವಣೆ?
Top Story

ಅಕ್ಟೋಬರ್ 20ರಿಂದ ಹೊಸ ವ್ಯಾಪಾರ ನಿಯಮ; ಭಾರತ-ನ್ಯೂಜಿಲೆಂಡ್ FTAಯಿಂದ ಏನೆಲ್ಲ ಬದಲಾವಣೆ?

by ಪ್ರತಿಧ್ವನಿ
September 21, 2026
0

ನವದೆಹಲಿ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದ (FTA) ಅಕ್ಟೋಬರ್ 20, 2026ರಿಂದ ಜಾರಿಗೆ ಬರಲಿದೆ. ಎರಡೂ ದೇಶಗಳು ಒಪ್ಪಂದವನ್ನು ಅನುಮೋದಿಸಿದ ಬಳಿಕ ಈ...

Read moreDetails
ಪ್ರತಾಪ್ ಸಿಂಹ ಹೇಳಿಕೆಗೆ ಪ್ರದೀಪ್ ಈಶ್ವರ್ ತಿರುಗೇಟು; ದಲಿತರ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಎಂದ ಶಾಸಕ

ಪ್ರತಾಪ್ ಸಿಂಹ ಹೇಳಿಕೆಗೆ ಪ್ರದೀಪ್ ಈಶ್ವರ್ ತಿರುಗೇಟು; ದಲಿತರ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಎಂದ ಶಾಸಕ

September 21, 2026
108 ಆ್ಯಂಬುಲೆನ್ಸ್ ಸೇವೆ ಸ್ಥಗಿತದ ಎಚ್ಚರಿಕೆ; ಬೇಡಿಕೆ ಈಡೇರಿಕೆಗೆ ನೌಕರರ ಗಡುವು ಮುಕ್ತಾಯ

108 ಆ್ಯಂಬುಲೆನ್ಸ್ ಸೇವೆ ಸ್ಥಗಿತದ ಎಚ್ಚರಿಕೆ; ಬೇಡಿಕೆ ಈಡೇರಿಕೆಗೆ ನೌಕರರ ಗಡುವು ಮುಕ್ತಾಯ

September 21, 2026
ಪಿಲಿಕುಳ ನಿಸರ್ಗಧಾಮದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ಸಚಿವ ಡಾ. ಅಜಯ್ ಧರ್ಮಸಿಂಗ್ ಸೂಚನೆ

ಪಿಲಿಕುಳ ನಿಸರ್ಗಧಾಮದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ಸಚಿವ ಡಾ. ಅಜಯ್ ಧರ್ಮಸಿಂಗ್ ಸೂಚನೆ

September 21, 2026
ವಿಧಾನ ಪರಿಷತ್ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ಡಿಸಿಎಂ ಡಾ. ಜಿ. ಪರಮೇಶ್ವರ್ ಹೇಳಿದ್ದೇನು?

ವಿಧಾನ ಪರಿಷತ್ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ಡಿಸಿಎಂ ಡಾ. ಜಿ. ಪರಮೇಶ್ವರ್ ಹೇಳಿದ್ದೇನು?

September 21, 2026
Next Post
ಅಕ್ಟೋಬರ್ 20ರಿಂದ ಹೊಸ ವ್ಯಾಪಾರ ನಿಯಮ; ಭಾರತ-ನ್ಯೂಜಿಲೆಂಡ್ FTAಯಿಂದ ಏನೆಲ್ಲ ಬದಲಾವಣೆ?

ಅಕ್ಟೋಬರ್ 20ರಿಂದ ಹೊಸ ವ್ಯಾಪಾರ ನಿಯಮ; ಭಾರತ-ನ್ಯೂಜಿಲೆಂಡ್ FTAಯಿಂದ ಏನೆಲ್ಲ ಬದಲಾವಣೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada