• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರಿ ಸಂಬಳ, ಖಾಸಗಿ ಸೇವೆ : ಶಿಕ್ಷಕನ ಬಣ್ಣ ಬಯಲು ಮಾಡಿದ ಕೋಹಳ್ಳಿ ಗ್ರಾಮಸ್ಥರು..!

ಸರ್ಕಾರಿ ಶಾಲೆಯ ಶಿಕ್ಷಕನಿಂದ ತನ್ನ ಬದಲಿಗೆ ಪಾಠಕ್ಕಾಗಿ ಖಾಸಗಿ ವ್ಯಕ್ತಿಯ ನೇಮಕ : ಶಿಕ್ಷಕನ ಕಳ್ಳಾಟಕ್ಕೆ ಗ್ರಾಮಸ್ಥರ ಆಕ್ರೋಶ..!

ಪ್ರತಿಧ್ವನಿ by ಪ್ರತಿಧ್ವನಿ
March 7, 2026
in Top Story, ಇದೀಗ, ಕರ್ನಾಟಕ, ಸ್ಟೂಡೆಂಟ್‌ ಕಾರ್ನರ್
0
ಸರ್ಕಾರಿ ಸಂಬಳ, ಖಾಸಗಿ ಸೇವೆ : ಶಿಕ್ಷಕನ ಬಣ್ಣ ಬಯಲು ಮಾಡಿದ ಕೋಹಳ್ಳಿ ಗ್ರಾಮಸ್ಥರು..!
Share on WhatsAppShare on FacebookShare on Telegram

ಬೆಳಗಾವಿ :  ಸರ್ಕಾರಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕಾದ ಶಿಕ್ಷಕನೊಬ್ಬ ಶಾಲೆಗೆ ಚಕ್ಕರ್ ಹೊಡೆದು, ತನ್ನ ಬದಲಿಗೆ ಪಾಠ ಮಾಡಲು ಖಾಸಗಿ ಶಿಕ್ಷಕನೊಬ್ಬನನ್ನು ನೇಮಿಸಿರುವ ಆಘಾತಕಾರಿ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಕೆಸ್ಕರ್ ದಡ್ಡಿಯಲ್ಲಿ ಬೆಳಕಿಗೆ ಬಂದಿದೆ. ಈ ‘ಕಳ್ಳಾಟ’ವನ್ನು ಬಯಲು ಮಾಡಿರುವ ಗ್ರಾಮಸ್ಥರು, ಸರ್ಕಾರಿ ಹಾಗೂ ಖಾಸಗಿ ಶಿಕ್ಷಕರಿಬ್ಬರನ್ನೂ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ADVERTISEMENT
Podcast with Kanthakumar R : ಉನ್ನತ ಶಿಕ್ಷಣ ಸಚಿವ ಸುಧಾಕರ್ ವಿರುದ್ಧ ಗಂಭೀರ ಆರೋಪ..! #mcsudhakar #congress

ಕೋಹಳ್ಳಿ ಗ್ರಾಮದ ಕೇಸ್ಕರದಡ್ಡಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಅಪ್ಪಾಸಾಹೇಬ್ ತೆಲಸಂಗ್ ಎಂಬುವವರೇ ಈ ಬೇಜವಾಬ್ದಾರಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಕಳೆದ ಹಲವು ದಿನಗಳಿಂದ ಶಾಲೆಗೆ ಗೈರಾಗುತ್ತಿದ್ದರು. ಆದರೆ, ಇವರ ಬದಲಿಗೆ ಬೇರೊಬ್ಬ ಖಾಸಗಿ ವ್ಯಕ್ತಿ ಪ್ರತಿದಿನ ಶಾಲೆಗೆ ಬಂದು ಮಕ್ಕಳಿಗೆ ಪಾಠ ಮಾಡುತ್ತಿದ್ದನು. ಈ ಬಗ್ಗೆ ಅನುಮಾನಗೊಂಡ ಗ್ರಾಮಸ್ಥರು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಶಿಕ್ಷಕನ ನಿಜ ಬಣ್ಣ ಬಯಲಾಗಿದೆ.

ಸರ್ಕಾರಕ್ಕೆ ಪಂಗನಾಮ, ಖಾಸಗಿ ಕೆಲಸಕ್ಕೆ ಹಾಜರ್..! 

ಸರ್ಕಾರದಿಂದ ಸಾವಿರಾರು ರೂಪಾಯಿ ಸಂಬಳ ಪಡೆಯುವ ಶಿಕ್ಷಕ ಅಪ್ಪಾಸಾಹೇಬ್, ಸರ್ಕಾರದ ನಿಯಮಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿದ್ದಾರೆ. ಬಡ ಮಕ್ಕಳು ಕಲಿಯುವ ಸರ್ಕಾರಿ ಶಾಲೆಗೆ ಬೇರೊಬ್ಬನನ್ನು ನೇಮಿಸಿ, ತಾವು ಮಾತ್ರ ತಮ್ಮದೇ ಒಡೆತನದ ಖಾಸಗಿ ಶಾಲೆಯಲ್ಲಿ ಕಾಲ ಕಳೆಯುತ್ತಿದ್ದರು ಎಂದು ಗ್ರಾಮಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ.

ಶಿಕ್ಷಕನ ಈ ಬೇಜವಾಬ್ದಾರಿತನದಿಂದ ರೊಚ್ಚಿಗೆದ್ದ ಗ್ರಾಮಸ್ಥರು, ಕೂಡಲೇ ಮೂಲ ಸರ್ಕಾರಿ ಶಿಕ್ಷಕನನ್ನು ಶಾಲೆಗೆ ಕರೆಯಿಸಿಕೊಂಡು, ಖಾಸಗಿ ಶಿಕ್ಷಕ (ವ್ಯಕ್ತಿ) ಹಾಗೂ ಸರ್ಕಾರಿ ಶಿಕ್ಷಕರಿಬ್ಬರಿಗೂ ಚಳಿ ಬಿಡಿಸಿದ್ದಾರೆ. “ಬಡ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುವ ಹಕ್ಕು ನಿಮಗ್ಯಾರಿಗೆ ಕೊಟ್ಟಿದ್ದು?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಮುಸ್ಲಿಂ ಓಲೈಕೆ ಬಜೆಟ್‌ ಎಂದಿದ್ದ ತೇಜಸ್ವಿ ಸೂರ್ಯಗೆ ದಾಖಲೆ ಸಮೇತ ಅಮೀನ್‌ ಮಟ್ಟು ತಿರುಗೇಟು..!

ಇನ್ನೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕೂಡಲೇ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕರ್ತವ್ಯಲೋಪ ಎಸಗಿರುವ ಹಾಗೂ ಬಡವರ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ಕಂಟಕವಾಗಿರುವ ಈ ಶಿಕ್ಷಕ ಅಪ್ಪಾಸಾಹೇಬ್ ತೆಲಸಂಗ್ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸ್ಥಳಿಯರಾದ ಮನೋಜ ಸರಗರ ಸೇರಿದಂತೆ ಗ್ರಾಮಸ್ಥರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಶಿಕ್ಷಣ ಅಧಿಕಾರಿಗಳ ಬೇಜವಾಬ್ದಾರಿಯೂ ಕೂಡ ಕಾಣುತ್ತಿದೆ,..

 

ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಶಿಕ್ಷಕ ಅಪ್ಪಾಸಾಹೇಬ್‌ ತೆಲಸಂಗ ಕರ್ತವ್ಯ ಲೋಪದ ಬಗ್ಗೆ ನನ್ನ ಗಮನಕ್ಕೆ ಬಂದಿದೆ, ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ವರದಿ ನೀಡುವಂತೆ ಕೇಳಿದ್ದೇನೆ, ಇಲ್ಲಿ ಸ್ಥಳಿಯ ಶಿಕ್ಷಣ ಅಧಿಕಾರಿಗಳ ಬೇಜವಾಬ್ದಾರಿಯೂ ಕೂಡ ಕಾಣುತ್ತಿದೆ, ಈ ವಿಚಾರವನ್ನು ನಾನು ಗಂಭೀರವಾಗಿ ತೆಗೆದುಕೊಂಡಿದ್ದೇನೆ, ನಮ್ಮ ಮೇಲಾಧಿಕಾರಿಗಳಿಗೆ ಈ ಕುರಿತು ವರದಿಯನ್ನು ಸಲ್ಲಿಸುತ್ತೇನೆ ಎಂದು ಪ್ರತಿಧ್ವನಿ ನ್ಯೂಸ್‌ಗೆ ಭರವಸೆ ನೀಡಿದ್ದಾರೆ.‌

– ಸೀತಾರಮು, ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಚಿಕ್ಕೋಡಿ

ಒಂದನೇ ತರಗತಿಯಿಂದ 5ನೇ ತರಗತಿಯವರೆಗೆ ಇರುವ ಶಾಲೆಯಲ್ಲಿ 45 ಮಕ್ಕಳಿದ್ದು, ಗಡಿಭಾಗದ ಗ್ರಾಮವಾಗಿರುವ ಕಾರಣ ಮರಾಠಿ ಪ್ರಭಾವದ ಜನರಿದ್ದಾರೆ. ಇಲ್ಲಿ ಕನ್ನಡದ ಕಂಪನ್ನು ಹರಬೇಕಿದ್ದ ಶಿಕ್ಷಕ ತನ್ನ ಜವಾಬ್ದಾರಿಯನ್ನು ಮರೆತು ವಿದ್ಯಾರ್ಥಿಗಳಿಗೆ ಅನ್ಯಾಯವೆಸಗಿದ್ದಾರೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.

ಜನರ ನಂಬಿಕೆಯನ್ನೇ ಬಂಡವಾಳ ಮಾಡಿಕೊಂಡಿದ್ದ ಶಿಕ್ಷಕ..

ಶಿಕ್ಷಕ ಅಪ್ಪಾಸಾಹೇಬ್‌, ತಮ್ಮದೇ ಆದ ಸ್ವಂತ ಖಾಸಗಿ ಶಾಲೆಯಲ್ಲೇ ಇರುತ್ತಿದ್ದರು ಎಂಬ ವಿಚಾರದಲ್ಲಿ ಅಲ್ಲಿನ ಗ್ರಾಮಸ್ಥರ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕೃಷಿಕರು, ಕೂಲಿ ಕಾರರ ಮಕ್ಕಳೇ ಹೆಚ್ಚಾಗಿ ಗಡಿಭಾಗವಾಗಿರುವ ಈ ಗ್ರಾಮದ ಸರ್ಕಾರಿ ಶಾಲೆಗೆ ಆಗಮಿಸುತ್ತಾರೆ.

ಪೋಷಕರು ತಮ್ಮ ದಿನ ನಿತ್ಯದ ಕಾರ್ಯಗಳಲ್ಲಿ ತೊಡಗಿಕೊಂಡು, ಶಾಲೆಯಲ್ಲಿ ಮಕ್ಕಳಿಕೆ ಒಳ್ಳೆಯ ಶಿಕ್ಷಣ ದೊರೆಯುತ್ತಿದೆ ಎಂದು ಭಾವಿಸಿದ್ದರು. ಆದರೆ ಇದನ್ನೇ ಬಂಡವಾಳ ಮಾಡಿಕೊಂಡಿದ್ದ ಈ ಶಿಕ್ಷಕ ಸರ್ಕಾರಿ ಶಾಲೆಗೆ ಚಕ್ಕರ್‌, ಖಾಸಗಿ ಶಾಲೆಗೆ ಹಾಜರ್‌ ಎಂಬಂತೆ ವರ್ತಿಸುತ್ತಿದ್ದರು ಎಂಬ ಆರೋಪಗಳು ವ್ಯಕ್ತವಾಗುತ್ತಿವೆ.

ಸರ್ಕಾರಿ ಸಂಬಳ ಪಡೆಯುವ ಕ್ಷೇತ್ರ ಶಿಕ್ಷಣಾಧಿಕಾರಿ ಏನ್ಮಾಡ್ತಿದ್ದಾರೆ..?

ಮುಖ್ಯವಾಗಿ ಚಿಕ್ಕೋಡಿ ಉಪನಿರ್ದೇಶಕರೇ ಕ್ಷೇತ್ರ ಶಿಕ್ಷಣಾಧಿಕಾರಿಗಳ ಬಗ್ಗೆ ಅಸಮಾಧಾನ ಹೊರಹಾಕಿರುವುದು ಆತಂಕಕಾರಿ ವಿಚಾರ. ಶೈಕ್ಷಣಿಕ ಜಿಲ್ಲೆಯ ಉನ್ನತ ಮಟ್ಟದ ಅಧಿಕಾರಿಗಳೇ ಹೀಗೆ ಕೆಳ ಹಂತದ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಮಾತನಾಡುವ ಹಂತಕ್ಕೆ ತಲುಪಿದರೆ ಅಥಣಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಏನು ಮಾಡುತ್ತಿದ್ದಾರೆ..? ಈ ರೀತಿಯ ಪ್ರಕರಣಗಳು ಅವರ ಗಮನಕ್ಕೆ ಬಂದಿಲ್ಲವೇ? ಅಥವಾ ಎಲ್ಲಾ ಗೊತ್ತಿದ್ದೂ ಕೂಡ ಸೈಲೆಂಟ್‌ ಆಗಿದ್ದಾರಾ ಎಂಬ ಪ್ರಶ್ನೆ ಸ್ಥಳೀಯರಲ್ಲಿ ಮೂಡುತ್ತಿದೆ.

ಇನ್ನಾದರೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕೂಡಲೇ ಎಚ್ಚೆತ್ತು ಈ ರೀತಿಯ ಬೇಜವಾಬ್ದಾರಿಯಾಗಿ ನಡೆದುಕೊಳ್ಳುವ ಶಿಕ್ಷಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಬೇಕಿದೆ.

Tags: athani newsChikkodi DDPIChikkodi newsCM SiddaramaiahEducation DepartmentEducation MinisterGovernment SchoolsGovt school TeacherKananda LanguageKohalli Govt SchoolMadhu BangarappaPratidhvaniPrimary SchoolsSave Govt Schoolsschool students
Previous Post

ಅವಮಾನ, ಅಪಮಾನಗಳೇ ಯಶಸ್ಸಿನ ಮೆಟ್ಟಿಲು…!

Next Post

ಕಲಬುರಗಿ ಜಿಲ್ಲೆಯನ್ನು ಸಿರಿಧಾನ್ಯ ಹಾಗೂ ಕೃಷಿ ಹಬ್ ಮಾಡಲು ಕ್ರಮ- ಸಚಿವ ಪ್ರಿಯಾಂಕ್ ಖರ್ಗೆ.

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ಕಲಬುರಗಿ ಜಿಲ್ಲೆಯನ್ನು ಸಿರಿಧಾನ್ಯ ಹಾಗೂ ಕೃಷಿ ಹಬ್ ಮಾಡಲು ಕ್ರಮ- ಸಚಿವ ಪ್ರಿಯಾಂಕ್ ಖರ್ಗೆ.

ಕಲಬುರಗಿ ಜಿಲ್ಲೆಯನ್ನು ಸಿರಿಧಾನ್ಯ ಹಾಗೂ ಕೃಷಿ ಹಬ್ ಮಾಡಲು ಕ್ರಮ- ಸಚಿವ ಪ್ರಿಯಾಂಕ್ ಖರ್ಗೆ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada