• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅಭ್ಯರ್ಥಿ ಘೋಷಣೆಯಾದ 48 ಗಂಟೆಗಳ ಒಳಗೆ ಅವರ ಅಪರಾಧ ಹಿನ್ನೆಲೆ ಬಹಿರಂಗಪಡಿಸಿ- ಸುಪ್ರಿಂ

ಪ್ರತಿಧ್ವನಿ by ಪ್ರತಿಧ್ವನಿ
August 10, 2021
in ದೇಶ
0
ಅಭ್ಯರ್ಥಿ ಘೋಷಣೆಯಾದ 48 ಗಂಟೆಗಳ ಒಳಗೆ ಅವರ ಅಪರಾಧ ಹಿನ್ನೆಲೆ ಬಹಿರಂಗಪಡಿಸಿ- ಸುಪ್ರಿಂ
Share on WhatsAppShare on FacebookShare on Telegram

ರಾಜಕೀಯ ಕ್ಷೇತ್ರವನ್ನು ಅಪರಾಧಿಕರಣದಿಂದ ದೂರ ಉಳಿಸುವ ನಿಟ್ಟಿನಲ್ಲಿ ಸುಪ್ರಿಂ ಕೋರ್ಟ್ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ಯಾವುದೇ ಪಕ್ಷವು ತನ್ನ ಅಭ್ಯರ್ಥಿಗಳನ್ನು ಘೋಷಿಸಿದ 48 ಗಂಟೆಗಳ ಒಳಗೆ ಅಭ್ಯರ್ಥಿಗಳ ಅಪರಾಧಿ ಹಿನ್ನೆಲೆಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಸುಪ್ರಿಂ ಹೇಳಿದೆ.

ADVERTISEMENT

ರಾಜ್ಯ ಸರ್ಕಾರಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಪ್ಪಿಸಲು, ಶಾಸಕರು ಅಥವಾ ಸಂಸದರ ಮೇಲಿರುವ ಪ್ರಕರಣಗಳನ್ನು ಹೈಕೋರ್ಟ್ ಒಪ್ಪಿಗೆಯಿಲ್ಲದೇ ವಜಾಗೊಳಿಸುವಂತಿಲ್ಲ, ಎಂದು ಹೇಳಿದೆ.

ಇದಕ್ಕೂ ಮೊದಲು ಕಳೆದ ವರ್ಷದ ಫೆಬ್ರವರಿಯಲ್ಲಿ ಇಂತಹುದೇ ನಿರ್ಧಾರವನ್ನು ಸುಪ್ರಿಂ ಪ್ರಕಟಿಸಿತ್ತು. ಕಳೆದ ವರ್ಷದ ಬಿಹಾರ ಚುನಾವಣೆಗೆ ಸಂಬಂಧಿಸಿ ಈ ನಿರ್ಧಾರವನ್ನು ಪ್ರಕಟಿಸಲಾಗಿತ್ತು. ಆ ಸಂದರ್ಭದಲ್ಲಿ ಸುಪ್ರಿಂ ಕೋರ್ಟ್ ಎರಡು ಆಐ್ಕೆಗಳನ್ನು ಅಭ್ಯರ್ಥಿಗಳಿಗೆ ನೀಡಿತ್ತು. ಒಂದು, ಅಭ್ಯರ್ಥಿಯ ಹೆಸರು ಘೊಷಿಸಿದ 48 ಗಂಟೆಗಳ ಒಳಗಾಗಿ ಅವರ ಮೇಲಿನ ಪ್ರಕರಣಗಳನ್ನು ಬಹಿರಂಗಗೊಳಿಸಬೇಕು. ಎರಡನೇಯದು, ಮೊದಲ ನಾಮಪತ್ರ ಸಲ್ಲಿಸುವ ದಿನಾಂಕದ ಕನಿಷ್ಟ ಎರಡು ವಾರಗಳ ಹಿಂದೆ ಅಭ್ಯರ್ಥಿಗಳ ಮೇಲಿನ ಪ್ರಕರಣಗಳನ್ನು ಬಹಿರಂಗಗೊಳಿಸಬೇಕು ಎಂದು ಸುಪ್ರಿಂ ಹೇಳಿದ್ದು. ಈಗ ಇದರಲ್ಲಿ ಎರಡನೇಯ ಆಯ್ಕೆಯನ್ನು ತೆಗೆದು, ಒಂದನೇ ಆಯ್ಕೆಯನ್ನು ಮಾತ್ರ ಉಳಿಸಲಾಗಿದೆ.

ಈ ರೀತಿ ಅಭ್ಯರ್ಥಿಗಳ ಮೇಲಿನ ಅಪರಾಧ ಪ್ರಕರಣಗಳನ್ನು ಬಹಿರಂಗಪಡಿಸದ ಪಕ್ಷಗಳ ಅಧಿಕೃತ ಚಿಹ್ನೆಯನ್ನು ನಿಷೇಧಿಸುವ ಕುರಿತ ಅರ್ಜಿಯ ವಿಚಾರಣೆ ನಡೆಸುವಾಗ ಸುಪ್ರಿಂ ಈ ಆದೇಶ ನಿಡಿದೆ. ಸುಪ್ರಿಂ ಕೋರ್ಟ್’ನ ಫೆಬ್ರುವರಿ 2020ರ ಆದೇಶವನ್ನು ಉಲ್ಲಂಘಿಸುವ ರಾಜಕೀಯ ಪಕ್ಷಗಳ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕೆಂದು ಈ ಅರ್ಜಿಯಲ್ಲಿ ಕೋರಲಾಗಿದೆ.

ಆದೇಶದಲ್ಲಿ ಸ್ಪಷ್ಟವಾಗಿ ಅಭ್ಯರ್ಥಿಗಳ ಅಪರಾಧ ಹಿನ್ನೆಯನ್ನು ಬಹಿರಂಗಗೊಳಿಸಲು ಆದೇಶ ನಿಡಲಾಗಿತ್ತು. ಪಕ್ಷದ ಅಧಿಕೃತ ಅಂತರ್ಜಾಲ ತಾಣದಲ್ಲಿ ಈ ಮಾಹಿತಿಯನ್ನು ದಾಖಲಿಸಿ, ಅವರನ್ನು ಆಯ್ಕೆ ಮಾಡಲು ಕಾರಣವೇನು ಎಂಬುದನ್ನು ಸ್ಪಷ್ಟಪಡಿಸುವಂತೆಯೂ ಕೋರ್ಟ್ ಹೇಳಿತ್ತು. ಚುನಾವಣಾ ಆಯೋಗವು, ಈ ಮಾಹಿತಿಯನ್ನು ದಿನ ಪತ್ರಿಕೆಗಳಲ್ಲಿ ಪ್ರಕಟಿಸುವಂತೆ ಆದೇಶ ನೀಡಿತ್ತು.

ಈಗ ವಿಚಾರಣೆ ನಡೆಯುತ್ತಿರುವ ಅರ್ಜಿಗೆ ಸಂಬಂಧಿಸಿ ಸಿಪಿಐಎಂ ಹಾಗೂ ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎನ್ ಸಿ ಪಿ) ಸುಪ್ರಿಂ ಕೋರ್ಟ್’ಗೆ ಬೇಷರತ್ತ್ ಕ್ಷಮೆಯಾಚಿಸಿದೆ. ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸುಪ್ರಿಂ ಕೋರ್ಟ್ ಆದೇಶ ಪಾಲಿಸದ ಕಾರಣಕ್ಕಾಗಿ ನಾವು ಕ್ಷಮೆ ಯಾಚಿಸುತ್ತೇವೆಂದು ಹೇಳಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವೂ ಸುಪ್ರಿಂ ಕೋರ್ಟ್’ಗೆ  ಮಾಹಿತಿ ನೀಡಿದ್ದು, ನ್ಯಾಯಾಲಯದ ಆದೇಶವನ್ನು ಪಾಲಿಸದ ಪಕ್ಷಗಳ ಅಧಿಕೃತ ಚಿಹ್ನೆಯನ್ನು ಅಮಾನತುಗಳಿಸುತ್ತೇವೆ ಎಂದು ಹೇಳಿದೆ.

Tags: BJPCongress Partyಬಿಜೆಪಿ
Previous Post

ಕಾಂಗ್ರೆಸಿಗರು ಈ ದೇಶದಲ್ಲಿ ಬದುಕಿದ್ದಾರೆ.ಈಶ್ವರಪ್ಪರಿಗೆ ಹೇಗೆ ಉತ್ತರ ಕೊಡಬೇಕು ಎನ್ನುವುದು ನಮಗೆ ಗೊತ್ತಿದೆ – ಡಿಕೆಶಿ

Next Post

ಸೀಮಿತ ಹೊಣೆಗಾರಿಕೆ ಪಾಲುದಾರಿಕೆ, ಠೇವಣಿ ವಿಮೆ ಮತ್ತು ಸಾಲ ಖಾತರಿ ನಿಗಮ (ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post

ಸೀಮಿತ ಹೊಣೆಗಾರಿಕೆ ಪಾಲುದಾರಿಕೆ, ಠೇವಣಿ ವಿಮೆ ಮತ್ತು ಸಾಲ ಖಾತರಿ ನಿಗಮ (ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada