ರಾಜ್ಯದಲ್ಲಿ ನಾಳೆ ದ್ವಿತೀಯ ಪಿಯುಸಿ 2021ರ ಫಲಿತಾಂಶ ಪ್ರಕಟವಾಗಲಿದೆ. ಸಂಜೆ 4.30ಕ್ಕೆ ಸುಮಾರಿಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಕರೋನ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡಿತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದು ಪಡಿಸಲಾಗಿತ್ತು. ಎಸ್ಎಸ್ಎಲ್ಸಿ ಫಲಿತಾಂಶ ಮತ್ತು ಪ್ರಥಮ ಪಿಯುಸಿ ಫಲಿತಾಂಶವನ್ನು ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶವನ್ನು ನೀಡಲಾಗುತ್ತದೆ. ಶೇ.35ರಷ್ಟು ಅಂಕಗಳನ್ನು ನೀಡುವ ಮೂಲಕ, ದ್ವಿತೀಯ ಪಿಯು ಎಲ್ಲಾ ರಿಪೀಟರ್ಸ್ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತದೆ ಎಂದಿತ್ತು.
ಈ ಮೊದಲು ಗ್ರೇಡ್ ಮೂಲಕ ಫಲಿತಾಂಶವನ್ನು ನೀಡಲು ಮುಂದಾಗಿದ್ದ ಪಿಯು ಬೋರ್ಡ್ ಮತ್ತೆ ಯನ್ನ ನಿರ್ಧಾರವನ್ನು ಬದಲಿಸಿ ಅಂಕಗಳ ಆಧಾರದಲ್ಲಿ ಫಲಿತಾಂಶ ನೀಡಲು ತೀರ್ಮಾನ ಮಾಡಿತ್ತು ಈಗ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಅಂಕಗಳ ಮೂಲಕ ಹೊರಬೀಳಲಿದೆ .
ಪ್ರತಿ ವರ್ಷ ಪರೀಕ್ಷೆಗೆ ಕೊಟ್ಟ ರಿಜಿಸ್ಟರ್ ಸಂಖ್ಯೆ ಮೇಲೆ ಫಲಿತಾಂಶ ಸಿಗುತ್ತಿತ್ತು. ಈ ಬಾರಿ ಪರೀಕ್ಷೆ ರದ್ದಾದ ಕಾರಣ ರಿಜಿಸ್ಟರ್ ನಂಬರ್ ಸಿಕ್ಕಿಲ್ಲ. ಹೀಗಾಗಿ, ಫಲಿತಾಂಶ ಸಲುವಾಗಿ ವಿದ್ಯಾರ್ಥಿಗಳಿಗೆ ಹೊಸದಾಗಿ ರಿಜಿಸ್ಟರ್ ನಂಬರ್ ಜನರೇಟ್ ಮಾಡುವ ವ್ಯವಸ್ಥೆ ಮಾಡಲಾಗಿದೆ. Know my number ಆಯ್ಕೆಯನ್ನು ಪಿಯು ವೆಬ್ಸೈಟ್ ಮೂಲಕ ವಿದ್ಯಾರ್ಥಿಗಳು ಪರಿಶೀಲಿಸಿ ಪಡೆಯಬಹುದಾಗಿದೆ.
ವಿದ್ಯಾರ್ಥಿಗಳಿಗೆ SMS ಮೂಲಕ ತಿಳಿಸುವುದರೊಂದಿಗೆ ಆಯಾ ಕಾಲೇಜಿಗೆ ಈ ಕುರಿತು ಮಾಹಿತಿ ನೀಡಲಾಗುತ್ತದೆ. ಫಲಿತಾಂಶ ಮುನ್ನ ತಮ್ಮ ರಿಜಿಸ್ಟರ್ ನಂಬರನ್ನು ವಿದ್ಯಾರ್ಥಿಗಳು ಖಚಿತಪಡಿಸಿಕೊಳ್ಳಬೇಕು. ಜನರೇಟ್ ಆದ ರಿಜಿಸ್ಟರ್ ನಂಬರ್ ಅನ್ನು ಚೆಕ್ ಮಾಡಿ ಖಚಿತಪಡಿಸಿಕೊಳ್ಳಬೇಕು. ಆನಂತರ ಜು.20ರಂದು ವೆಬ್ಸೈಟ್ ಮೂಲಕ ಫಲಿತಾಂಶ ಪಡೆಯಬಹುದು ಎಂದು ತಿಳಿಸಿದೆ.