ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಚೇತೇಶ್ವರ್ ಪೂಜಾರ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಟೆಸ್ಟ್ ಗೆ ಮರಳಿದ್ದಾರೆ.
ಭಾನುವಾರ ಬಿಸಿಸಿಐ ಆಯ್ಕೆ ಸಮಿತಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿರುವ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್ ಸರಣಿ ವೇಳೆ ಮುಂದೂಡಲಾಗಿದ್ದ ಒಂದು ಪಂದ್ಯ ಜುಲೈ ಮೊದಲ ವಾರ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಆಡಲಿದೆ.
ಇಂಗ್ಲೆಂಡ್ ಟೆಸ್ಟ್ ತಂಡ: ರೋಹಿತ್ ಶರ್ಮ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ್ ಪೂಜಾರ, ರಿಷಭ್ ಪಂತ್ (ವಿ.ಕೀ.), ಕೆಎಸ್ ಭರತ್ (ವಿ.ಕೀ.), ರವೀಂದ್ರ ಜಡೇಜಾ, ಆರ್.ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮದ್ ಶಮಿ, ಜಸ್ ಪ್ರೀತ್ ಬುಮ್ರಾ, ಮೊಹಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ ಕೃಷ್ಣ.