ರನ್ ಮೆಷಿನ್ ಎಂದೇ ಖ್ಯಾತಿ ಪಡೆದಿರುವ ಆರ್ಸಿಬಿಯ ಮಾಜಿ ನಾಯಕ ವಿರಾಟ್ ಕೊಹ್ಲಿ ಇತ್ತೀಚಿನ ದಿನಗಳಲ್ಲಿ ರನ್ ಬರ ಎದುರುಸಿತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ನಿನ್ನೆ ನಡೆದ ರಾಜಸ್ಥಾನ ವಿರುದ್ದದ ಪಂದ್ಯದಲ್ಲಿ ಕೊಹ್ಲಿ 9 ರನ್ಗಳನ್ನು ಗಳಿಸಲು ಮಾತ್ರ ಶಕ್ತರಾದರು.
ವಿರಾಟ್ ಕೊಹ್ಲಿ ಐಪಿಎಲ್ ಆಡುವುದನ್ನು ಬಿಟ್ಟು ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯಬೇಕು ಎಂದು ಟೀಂ ಇಂಡಿಯಾದ ಮಾಜಿ ಕೋಚ್ ರವಿ ಶಾಸ್ತ್ರಿ ಸುದ್ದಿ ವಾಹಿನಿಯಂದಕ್ಕೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.

ಕೊಹ್ಲಿ ಕಳೆದ ಕೆಲವು ವರ್ಷಗಳಿಂದ ನಾನ್ ಸ್ಟಾಪ್ ಕ್ರಿಕೆಟ್ ಆಡುತ್ತಿದ್ದಾರೆ. ಟೀಂ ಇಂಡಿಯಾವನ್ನು ಮೂರು ಪ್ರಕಾರಗಳಲ್ಲಿಯೂ ಮುನ್ನಡೆಸಿದ್ದರು ಸಮತೋಲನವನ್ನು ಕಾಪಾಡಿಕೊಳ್ಳುವ ಸಲುವಾಗಿ ಸ್ವಲ್ಪ ದಿನದ ಮಟ್ಟಿಗೆ ವಿರಾಮ ತೆಗೆದುಕೊಳ್ಳುವುದು ಸೂಕ್ತ ಎಂದು ಹೇಳಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಲು ಕೊಹ್ಲಿ ಬಯಸಿದರೆ ಐಪಿಎಲ್ನಿಂದ ವಿಶ್ರಾಂತಿ ತೆಗೆದುಕೊಳ್ಳುವುದು ಸೂಕ್ತ ಎಂದು ಹೇಳಿದ್ದಾರೆ.
ಕಳೆದ 14-15 ವರ್ಷಗಳಿಂದ ಅನೇಕ ಆಟಗಾರರು ಭಾರತವನ್ನು ಪ್ರತಿನಿಧಿಸಿದ್ದಾರೆ. ಕೆಲವೊಂದು ಸಾರಿ ಉತ್ತುಂಗ್ಕೇರಲು ಬಯಸುವವರು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಎಂದು ರವಿ ಶಾಸ್ತ್ರಿ ಆಭಿಪ್ರಾಯಪಟ್ಟಿದ್ದಾರೆ.