ಅನೇಕ ಕ್ರಿಮಿನಲ್ ಪ್ರಕರಣಗಳನ್ನು ಭಾಗಿಯಾಗಿರುವ ಆರೋಪಿ ಹಾಗೂ ರಾಷ್ಟ್ರರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ವಿರುದ್ಧ ಉಪ್ಪಾರಪೇಟೆ ಹಾಗೂ ವಿ.ವಿ ಪುರಂ ಪೊಲೀಸ್ ಠಾಣೆಯಲ್ಲಿ ಮತ್ತೆ ಎರಡು FIR ದಾಖಲಾಗಿವೆ.
ಪುನೀತ್ ವಿರುದ್ಧ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಲ್ಲಿ ಕೋಮು ದ್ವೇಷ, ದೊಂಬಿ, ಕೊಲೆ, ಹಲ್ಲೆ, ಪ್ರಾಣ ಬೆದರಿಕೆ ಆರೋಪದ ಅಡಿ ಪ್ರಕರಣಗಳು ದಾಖಲಾಗಿದ್ದವು. ಚಾಮರಾಜಪೇಟೆ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಈ ವರದಿ ಆಧರಿಸಿ, ಪುನೀತ್ ಕೆರೆಹಳ್ಳಿ ಹೆಸರನ್ನು ರೌಡಿಪಟ್ಟಿಗೆ ಸೇರ್ಪಡೆ ಮಾಡಲಾಗಿತ್ತು. ಅದಾದ ಮೇಲೆ ಪುನೀತ್ ಬಂಧನವಾಗಿತ್ತು. ಜಾಮೀನನ ಮೇಲೆ ಇತ್ತೀಚೆಗೆ ಬಿಡುಗಡೆಯಾಗಿದ್ದ.
ತನ್ನ ಮೇಲೆ ದಾಖಲಿಸಿರುವ ಪ್ರಕರಣಕ್ಕೆ ದಾಖಲೆ ಕೊಡಬೇಕು ಹಾಗೂ ಈ ಕೂಡಲೇ ಸರ್ಕಾರ ನನ್ನ ಬಳಿ ಬಂದು ಕ್ಷಮೆಯಾಚಿಸಬೇಕು ಎಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಉಪವಾಸ ಹೋರಾಟ ಆರಂಭಿಸಿದ ಪುನೀತ್ ಕೆರೆಹಳ್ಳಿಯನ್ನು ಆರೋಗ್ಯ ಸಮಸ್ಯೆಯಿಂದಾಗಿ ಖುದ್ದು ಪೊಲೀಸರೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಇಷ್ಟು ಕರ್ತವ್ಯದಿಂದ ಪೊಲೀಸರು ಸಹಾಯ ಮಾಡಿದರು ನಂತರ ಪೊಲೀಸರು ನನ್ನನ್ನು ಭಲವಂತವಾಗಿ ಆಸ್ಪತ್ರೆಗೆ ತಂದಿದ್ದಾರೆ ಎಂದು ಆರೋಪಿಸಿದ್ದರು. ಇದಲ್ಲದೇ ಅರುಣ್ ಕುಮಾರ್ ಪುತ್ತಿಲ ಮತ್ತು ಹಿಂದೂ ಕಾರ್ಯಕರ್ತರ ಗ್ಯಾಂಗ್ ಬಂಗಾದ ಬಸ್ಸಿಗೆ ಬೆಂಕಿ ಹಚ್ಚುವ ಮಾತನ್ನು ಅಡಿದ್ದ ಹಾಗೂ ವಿಧಾನಸೌಧಕ್ಕೆ ಮುತ್ತಿಗೆ ಕಲ್ಲು ಹೊಡೆಯುವುದಾಗಿ ಹೇಳಿದಕ್ಕೆ ವಿವಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಜರಣ ದಾಖಲಾಗಿದೆ.
ಉಪ್ಪಾರಪೇಟೆಯಲ್ಲಿ ಆತ್ಮಹತ್ಯೆಗೆ ಯತ್ನ ಆರೋಪದ ಅಡಿ ಪ್ರಕರಣ ದಾಖಲಾಗಿದ್ದರೆ, ವಿ.ವಿ ಪುರಂನಲ್ಲಿ ಕಾನೂನು ವ್ಯವಸ್ಥೆಗೆ ಧಕ್ಕೆ ಆರೋಪದ ಅಡಿ ಪ್ರಕರಣ ದಾಖಲಾಗಿದೆ.






