• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪುನೀತ್ ರಾಜ್‍ಕುಮಾರ್ ಆದರ್ಶದ ಜೀವನವನ್ನು ಮುಂದಿನ ಪೀಳಿಗೆಗೆ ತಿಳಿಯಬೇಕು : ಸಚಿವ ವಿ.ಸೋಮಣ್ಣ

ಪ್ರತಿಧ್ವನಿ by ಪ್ರತಿಧ್ವನಿ
January 30, 2022
in ಕರ್ನಾಟಕ
0
ಪುನೀತ್ ರಾಜ್‍ಕುಮಾರ್ ಆದರ್ಶದ ಜೀವನವನ್ನು ಮುಂದಿನ ಪೀಳಿಗೆಗೆ ತಿಳಿಯಬೇಕು : ಸಚಿವ ವಿ.ಸೋಮಣ್ಣ
Share on WhatsAppShare on FacebookShare on Telegram

ಇತ್ತೀಚೆಗಷ್ಟೆ ನಮ್ಮನ್ನಗಲಿದ ನಟ ಪುನೀತ್ ರಾಜ್‍ಕುಮಾರ್ ಅವರ ಸಾಧನೆ ಮುಂದಿನ ಪೀಳಿಗೆಗೆ ತಿಳಿಯಬೇಕು. ಅವರ ಆದರ್ಶದ ಜೀವನ, ಸಾಧನೆ, ಜೀವನ ಮೌಲ್ಯಗಳಿಂದ ಅವರು ಇಂದಿಗೂ‌ ನಮ್ಮೆಲ್ಲರ ಮನದಲ್ಲಿ ಜೀವಂತವಾಗಿದ್ದಾರೆ ಎಂದು ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಹೇಳಿದರು.

ADVERTISEMENT

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ನಾಗರಭಾವಿ ಪಾಲಿಕೆ ಕಚೇರಿಯಲ್ಲಿ ಪುನೀತ್ ರಾಜ್‍ಕುಮಾರ್ ಅವರ ಸವಿನೆನಪಿಗಾಗಿ‌ ನಿರ್ಮಿಸಲಾದ ಒಳಾಂಗಣ ಕ್ರೀಡಾಂಗಣವನ್ನು ಲೋಕಾರ್ಪಣೆ ಮಾಡಿ‌ ಮಾತನಾಡಿದ ಅವರು, ಯುತ್ ಐಕಾನ್ ಎಂತಲೇ ಖ್ಯಾತರಾಗಿದ್ದ ಪುನೀತ್ ಅವರ ಹೆಸರಿನಲ್ಲಿ ಈ ಸುಸಜ್ಜಿತವಾದ ಒಳಾಂಗಣ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಈ‌ ಮೂಲಕ ಈ ಭಾಗದ ಕ್ರೀಡಾಸಕ್ತ ಯುವಕರಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದರು.

ಚಿಕ್ಕ ವಯಸ್ಸಿನಲ್ಲಿಯೇ ಅಗಾಧ ಸಾಧನೆ ಮಾಡಿ ಕರ್ನಾಟಕ ರತ್ನ ಪ್ರಶಸ್ತಿಗೆ ಭಾಜನರಾದ ಪುನೀತ್ ಅವರ ಹೆಸರಿನಲ್ಲಿ ಒಳಾಂಗಣ ಕ್ರೀಡಾಂಗಣಕ್ಕೆ ಅವರ ಹೆಸರನ್ನು ಇರಿಸಲಾಗಿದೆ.

ಇನ್ನು, ನಟ ಪುನೀತ್ ತಮ್ಮ ಸಾವಿನ ಬಳಿಕವೂ ಸಾಕಷ್ಟು ಜನರಿಗೆ ಪ್ರೇರಣೆಯಾಗಿದ್ದಾರೆ. ಅವರ ಅಕಾಲಿಕ ನಿಧನದ ಬಳಿಕ ಅವರ ಸಾವಿರಾರು ಅಭಿಮಾನಿಗಳು ಸ್ವಯಂ ಪ್ರೇರಿತರಾಗಿ ನೇತ್ರದಾನ ಮಾಡುವ ಮೂಲಕ ನಟನೊಬ್ಬನ ಆದರ್ಶಗಳನ್ನು ಜೀವಂತವಿರಿಸಿದ್ದಾರೆ ಎಂದರು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಯುವ ಮುಖಂಡ ಡಾ.ಅರುಣ್ ಸೋಮಣ್ಣ, ಮಕ್ಕಳ ಶಿಕ್ಷಣ ಹಕ್ಕುಗಳ ರಾಯಭಾರಿಯಾಗಿ ‘ಎಜುಕೇಶನ್ ಇಸ್ ಪವರ್’ ಎಂಬ ಅಭಿಯಾನದಲ್ಲಿ ಕಾರ್ಯ ನಿರ್ವಹಿಸುವ ಮೂಲಕ ಶಿಕ್ಷಣದ ಮಹತ್ವದ ಕುರಿತಂತೆ ಜಾಗೃತಿ ಮೂಡಿಸುವ ಕೆಲಸವನ್ನು ಅವರು ಮಾಡಿದ್ದರು. ಇದಷ್ಟೇ ಅಲ್ಲದೇ, ಗ್ರಾಮೀಣ ಮಹಿಳೆಯರಿಗೆ ಸ್ವಾವಲಂಬಿ ಜೀವನಕ್ಕೆ ನೆರವಾಗುವ ‘ಸಂಜೀವಿನಿ’ ಯೋಜನೆ, ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳು ತಯಾರಿಸಿದ ‘ದೀಪ ಸಂಜೀವಿನಿ’ ಮಣ್ಣಿನ ಹಣತೆ ಖರೀದಿಸಿ ದೀಪಾವಳಿ ಆಚರಿಸುವ ಮೂಲಕ ಸ್ವಸಹಾಯ ಗುಂಪುಗಳನ್ನು ಬಲಪಡಿಸಲು ಮನವಿ ಮಾಡಿಕೊಳ್ಳುವ ಮೂಲಕ ಮಹಿಳೆಯರು ಸಬಲೀಕರಣಕ್ಕೆ ಕೈ ಜೋಡಿಸಿದ್ದರು.

ಇಂಥ ಸಾಕಷ್ಟು ಕಾರಣಗಳಿಂದ ಲಕ್ಷಾಂತರ ಜನರು ರಾಜ್‍ಕುಮಾರ್ ಅವರನ್ನು ತಮ್ಮ ಆದರ್ಶವನ್ನಾಗಿ ಸ್ವೀಕರಿಸಿದ್ದಾರೆ. ಸಿನಿಮಾ, ನಟನೆ, ಗ್ಲಾಮರ್, ಸ್ಟಾರ್ ಗಿರಿಗಳನ್ನು‌ ಮೀರಿ ಒಬ್ಬ ಮಹಾ ಮಾನವತಾವಾದಿಯಾಗಿ ಪುನೀತ್ ನಮ್ಮೆಲ್ಲರ ಮನಗಳಲ್ಲಿ ನೆಲೆಯೂರಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಬಿಬಿಎಂಪಿ ಮಾಜಿ ಸದಸ್ಯರಾದ ಮೋಹನ್ ಕುಮಾರ್, ದಾಸೇಗೌಡ, ಉಮೇಶ್ ಶೆಟ್ಟಿ, ವಾಗೀಶ್ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags: ಪುನೀತ್ ರಾಜ್ ಕುಮಾರ್ವಿ ಸೋಮಣ್ಣ
Previous Post

216 ಬೋಗಿಗಳಿಗಾಗಿ ಚೀನಾ ಕಂಪನಿಯೊಂದಿಗೆ ಒಪ್ಪಂದ : ಅಪಾಯದಲ್ಲಿ ನಮ್ಮ ಮೆಟ್ರೋ!

Next Post

ಕೋಮುಧ್ರುವೀಕರಣದ ರಾಜಕಾರಣ ಓಟು ತಂದುಕೊಡಬಹುದೇ ಹೊರತು ನಿರುದ್ಯೋಗ ಪರಿಹಾರವಾಗದು

Related Posts

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ
Top Story

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

by ನಾ ದಿವಾಕರ
August 29, 2026
0

ಭಾರತೀಯ ಪ್ರಜಾತಂತ್ರ ಎಲ್ಲಿಂದ ಎಲ್ಲಿಗೆ ಬಂದು ತಲುಪಿದೆ ? ವಸಾಹತು ಆಳ್ವಿಕೆಯಲ್ಲಿ , 1947ರ ಹೊಸ್ತಿಲಲ್ಲೂ ಸಹ ಶೇಕಡಾ 13ರಷ್ಟು ಭಾರತೀಯರು ಮಾತ್ರ ಮತದಾನದ ಹಕ್ಕು ಹೊಂದಿದ್ದರು....

Read moreDetails
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

August 28, 2026
Next Post
ಕೋಮುಧ್ರುವೀಕರಣದ ರಾಜಕಾರಣ ಓಟು ತಂದುಕೊಡಬಹುದೇ ಹೊರತು ನಿರುದ್ಯೋಗ ಪರಿಹಾರವಾಗದು

ಕೋಮುಧ್ರುವೀಕರಣದ ರಾಜಕಾರಣ ಓಟು ತಂದುಕೊಡಬಹುದೇ ಹೊರತು ನಿರುದ್ಯೋಗ ಪರಿಹಾರವಾಗದು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada