• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಖ್ಯಾತ ನಟ ಪುನೀತ್ ರಾಜ್ ಕುಮಾರ್ ವಿಧಿವಶ : ಗಣ್ಯರಿಂದ ಸಂತಾಪ

Any Mind by Any Mind
October 29, 2021
in ಕರ್ನಾಟಕ
0
ಖ್ಯಾತ ನಟ ಪುನೀತ್ ರಾಜ್ ಕುಮಾರ್ ವಿಧಿವಶ : ಗಣ್ಯರಿಂದ ಸಂತಾಪ
Share on WhatsAppShare on FacebookShare on Telegram

ನಟ ಪುನೀತ್ ರಾಜ್ ಕುಮಾರ್ ಇಂದು ಬೆಳಿಗ್ಗೆ ಹೃದಯಾಘಾತದಿಂದ ವಿಧಿವಶರಾಗಿದ್ದು ಅನೇಕ ನಟರು, ರಾಜಕೀಯ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.

ADVERTISEMENT

ನಟ ಪುನೀತ್ ರಾಜ್ಕುಮಾರ್ ಅವರ ಆರೋಗ್ಯದಲ್ಲಿ ಇಂದು (ಅ.29) ಏರುಪೇರು ಉಂಟಾದ ಕಾರಣ, ಕೂಡಲೇ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಪುನೀತ್ ರಾಜಕುಮಾರ್ ಇಹಲೋಕ ತ್ಯಜಿಸಿದ್ದಾರೆ. ವಿಕ್ರಂ ಆಸ್ಪತ್ರೆಯಿಂದ ಪಾರ್ಥಿವ ಶರೀರವನ್ನು ಸದಾಶಿವನಗರದ ನಿವಾಸಕ್ಕೆ ಸ್ಥಳಾಂತರ ಮಾಡಲಾಗಿದೆ. ಆ್ಯಂಬುಲೆನ್ಸ್ ಮೂಲಕ ಮನೆಗೆ ಪಾರ್ಥಿವ ಶರೀರ ಸ್ಥಳಾಂತರ ಮಾಡಲಾಗಿದ್ದು, ನಂತರ ಸಂಜೆ ಐದು ಗಂಟೆ ಬಳಿಕ ನಟ ಪುನೀತ್ ಮೃತದೇಹ ಕಂಠೀರವ ಕ್ರೀಡಾಗಂಣಕ್ಕೆ ಸ್ಥಳಾಂತರ ಮಾಡಿ ಸಂಜೆ ಬಳಿಕವೇ ಅಭಿಮಾನಿಗಳ ದರ್ಶನಕ್ಕೆ ಪ್ರಾರ್ಥಿವ ಶರೀರ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ

ಪುನೀತ್ ರಾಜ್ಕುಮಾರ್ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಪುನೀತ್ ಹಠಾತ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ಪುನೀತ್ ರಾಜ್ಕುಮಾರ್ ಕನ್ನಡಿಗರ ಮನೆ ಮಗನಂತಿದ್ದರು. ಅವರ ನಿಧನ ತುಂಬಲಾರದ ನಷ್ಟ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಡಿಕೆ ಶಿವಕುಮಾರ್ ಸಂತಾಪ

ನನ್ನ ಬಾಲ್ಯ ಸ್ನೇಹಿತ, ನೆರೆ ಮನೆಯ ಪುನೀತ್ ಇನ್ನಿಲ್ಲ. ಇದನ್ನು ನಂಬುವುದಕ್ಕೂ ಸಾಧ್ಯವಾಗುತ್ತಿಲ್ಲ. ವಿಧಿ ಎಷ್ಟು ಕ್ರೂರಿ ಎನ್ನುವುದಕ್ಕೆ ಇದೇ ಸಾಕ್ಷಿ. ಪುನೀತ್ಗೆ ಯಾವುದೇ ಕೆಟ್ಟ ಹವ್ಯಾಸಗಳು ಇರಲಿಲ್ಲ. ರಾಜಕೀಯಕ್ಕೆ ಕರೆತರಲು ಪ್ರಯತ್ನಿಸಿದ್ದೆವು. ಆದರೆ ಅವರು ರಾಜಕೀಯಕ್ಕೆ ಬರಲು ಇಷ್ಟಪಡಲಿಲ್ಲ ಎಂದು ಹೇಳಿದ್ದಾರೆ.

ಮಾಜಿ ಸಿಎಂ ಬಿಎಸ್ವೈ ಸಂತಾಪ,

‘‘ನಟ ಪುನೀತ್ ನಿಧನದಿಂದ ನನಗೆ ತೀವ್ರ ಆಘಾತವಾಗಿದೆ. ನಟ ಪುನೀತ್ ನಿಧನದಿಂದ ಕರುನಾಡಿಗೆ ತುಂಬಲಾರದ ನಷ್ಟ. ನಟ ಪುನೀತ್ ಆತ್ಮಕ್ಕೆ ಆ ದೇವರು ಶಾಂತಿಯನ್ನ ಕರುಣಿಸಲಿ ಎಂದು ಹೇಳಿದ್ದಾರೆ.

ಟಾಲಿವುಡ್ ನಟರಿಂದ ಸಂತಾಪ

ನಟ ಪುನೀತ್ ನಿಧನಕ್ಕೆ ತೆಲುಗಿನ ಖ್ಯಾತ ನಟರಾದ ಮಹೇಶ್ ಬಾಬು ಸಂತಾಪ,

ಪುನೀತ್ ರಾಜ್‌ಕುಮಾರ್ ಅವರ ನಿಧನದ ದುರಂತ ಸುದ್ದಿಯಿಂದ ಆಘಾತ ಮತ್ತು ತೀವ್ರ ದುಃಖವಾಗಿದೆ. ನಾನು ಭೇಟಿಯಾದ ಮತ್ತು ಸಂವಾದ ನಡೆಸಿದ ಅತ್ಯಂತ ವಿನಮ್ರ ವ್ಯಕ್ತಿಗಳಲ್ಲಿ ಒಬ್ಬರು. ಅವರ ಕುಟುಂಬ ಮತ್ತು ಆತ್ಮೀಯರಿಗೆ ಹೃತ್ಪೂರ್ವಕ ಸಂತಾಪಗಳು ಎಂದಿದ್ದಾರೆ.

ಚಿರಂಜೀವಿ ಸಂತಾಪ,

ಆಘಾತಕಾರಿ, ವಿನಾಶಕಾರಿ ಮತ್ತು ಹೃದಯವಿದ್ರಾವಕ! #ಪುನೀತ್ ರಾಜ್ ಕುಮಾರ್ ಬೇಗನೇ ಹೋಗಿದ್ದಾರೆ. ಒಡೆದ ಹೃದಯ ಶಾಂತಿಯಲ್ಲಿ ವಿಶ್ರಾಂತಿ! ಕುಟುಂಬಕ್ಕೆ ನನ್ನ ಆಳವಾದ ಸಂತಾಪ ಮತ್ತು ಕಣ್ಣೀರಿನ ಸಂತಾಪ. ಒಟ್ಟಾರೆಯಾಗಿ ಕನ್ನಡ/ಭಾರತೀಯ ಚಲನಚಿತ್ರ ಬಂಧುಗಳಿಗೆ ಒಂದು ದೊಡ್ಡ ನಷ್ಟ. ಈ ದುರಂತ ನಷ್ಟವನ್ನು ನಿಭಾಯಿಸುವ ಶಕ್ತಿ ಎಲ್ಲರಿಗೂ ಕರುಣಿಸಲಿ ಎಂದಿದ್ದಾರೆ!

ಗೃಹ ಸಚಿವ ಆರಗ ಜ್ಞಾನೇಂದ್ರ ಸಂತಾಪ.

ಕನ್ನಡ ಚಿತ್ರರಂಗದಲ್ಲಿ, “ಪವರ್ ಸ್ಟಾರ್” ಎಂದೇ ಖ್ಯಾತರಾಗಿದ್ದ, ಜನಾನುರಾಗಿ ಹಾಗೂ ಶ್ರೇಷ್ಠ ನಟ ಪುನೀತ್ ರಾಜಕುಮಾರ್, ಅವರ ಹಠಾತ್ ನಿಧನ, ಅಪಾರವಾದ ನೋವು ಹಾಗೂ ದುಃಖ ತಂದಿದೆ. ಬರ ಸಿಡಿಲಿನಂತೆ ಬಂದೆರಗಿದ ಪುನೀತ್ ರಾಜಕುಮಾರ್ ರವರ ಹಠಾತ್ ನಿಧನದ ಸುದ್ದಿಯಿಂದ ಇಡೀ ಕನ್ನಡ ಚಿತ್ರರಂಗ ಕನ್ನಡ ಚಿತ್ರರಂಗ ಹಾಗೂ ನಾಡಿನ ಜನತೆ, ಆಘಾತಗೊಂಡಿದ್ದು ನಾಡಿನಾದ್ಯಂತ, ದುಃಖದ ಛಾಯೆ ಆವರಿಸಿದೆ ಎಂದ ಹೇಳಿದ್ದಾರೆ.

ಸಚಿವ ಆರ್ ಅಶೋಕ್ ಮಾಹಿತಿ ಸಂತಾಪ

‘‘ಹೃದಯಾಘಾತದಿಂದ ವಿಕ್ರಂ ಆಸ್ಪತ್ರೆಗೆ ಪುನೀತ್ ದಾಖಲಾಗಿದ್ದರು. ನಟ ಪುನೀತ್ ನಮ್ಮನ್ನಗಲಿರುವುದು ತೀವ್ರ ನೋವಿನ ಸಂಗತಿ. ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್ ಅಂತ್ಯಕ್ರಿಯೆಯನ್ನು ನಡೆಸಲಾಗುವುದು. ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಕುಟುಂಬಸ್ಥರ ಆಸೆಯಂತೆ ಅಂತ್ಯಸಂಸ್ಕಾರ ಮಾಡಲಾಗುತ್ತದೆ. ದೇವರು ನಟ ಪುನೀತ್ ಆತ್ಮಕ್ಕೆ ಶಾಂತಿಯನ್ನ ಕರುಣಿಸಲಿ ಎಂದ ಹೇಳಿದ್ದಾರೆ.

ನಟಿ ರಮ್ಯಾ ಸಂತಾಪ

‘ಮಿಸ್ ಯೂ ಅಪ್ಪು’ ಎಂದು ನಟಿ ರಮ್ಯಾ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಸಂತಾಪ

ನಟ ಪುನೀತ್ ನಿಧನಕ್ಕೆ ಮಾಜಿ ಪ್ರಧಾನಿ ದೇವೇಗೌಡ ಸಂತಾಪ ಸೂಚಿಸಿದ್ದಾರೆ. ಪುನೀತ್ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಗಿದೆ. ಪುನೀತ್ ನಿಧನದ ಸುದ್ದಿಯನ್ನು ನಂಬಲು ಸಾಧ್ಯವಾಗುತ್ತಿಲ್ಲ. ಯುವರತ್ನನನ್ನು ಕಳೆದುಕೊಂಡ ಕರುನಾಡು ಬರಿದಾಗಿದೆ. ದೇವರು ಪುನೀತ್ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಸಂತಾಪ ಸೂಚಿಸಿದ್ದಾರೆ.

ಕ್ರಿಕೆಟಿಗರ ದಂಡೇ ಈ ಒಂದು ಆಘಾತಕಾರಿ ಸಾವಿಗೆ ಕಂಬನಿ ಮಿಡಿದಿದ್ದಾರೆ,

ಅನಿಲ್ ಕುಂಬ್ಳೆ, ವೆಂಕಟೇಶ್ ಪ್ರಸಾದ್, ವೀರೇಂದ್ರ ಸೆಹ್ವಾಗ್, ಹರ್ಭಜನ್ ಸಿಂಗ್, ಆರ್.ವಿನಯ್ ಕುಮಾರ್ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.

ನಟ ಪುನೀತ್ ರಾಜ್ ಕುಮಾರ್ ಇಂದು ಬೆಳಿಗ್ಗೆ ಜಿಮ್ ನಲ್ಲಿ ಕಸರತ್ತು ಮಾಡುವಾಗ ಹೃದಯಾಘಾತವಾಗಿದೆ. ನಂತರ ಖಾಸಗಿ ಕ್ಲೀನಿಕ್ಗೆ ತೆರಳಿ ಈಸಿಜಿ ಮಾಡಿಸಿಕೊಂಡು ನೇರ ವಿಕ್ರಮ್ ಆಶ್ಪತ್ರೆಯತ್ತೆ ಬಂದಿದ್ದಾದರು ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಸುಮಾರು 11:45 ಗಂಟೆಯ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಗಳ ಮೂಲಗಳು ತಿಳಿಸಿವೆ.

Tags: ಎಚ್ ಡಿ ಕುಮಾರಸ್ವಾಮಿಪುನೀತ್ ರಾಜ್ ಕುಮಾರ್ಬಿ ಎಸ್ ಯಡಿಯೂರಪ್ಪವಿಧಿವಶಸಿದ್ದರಾಮಯ್ಯ
Previous Post

ಪುನೀತ್ ರಾಜ್‍ಕುಮಾರ್ ಇನ್ನಿಲ್ಲ

Next Post

‘ಪ್ರತಿಧ್ವನಿ’ ಇಂಪಾಕ್ಟ್ : ರಾಯಚೂರು ಜಿಲ್ಲೆಯ ಮಸ್ಕಿ ಶಾಲೆಗಾಗಿ ಎಸ್ಎಫ್ಐ ನೇತೃತ್ವದಲ್ಲಿ ಪ್ರತಿಭಟನೆ

Related Posts

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?
ಕರ್ನಾಟಕ

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದ ಆಡಳಿತದ ಬಳಿಕ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಉಪಮುಖ್ಯಮಂತ್ರಿ...

Read moreDetails
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
‘ಪ್ರತಿಧ್ವನಿ’ ಇಂಪಾಕ್ಟ್ : ರಾಯಚೂರು ಜಿಲ್ಲೆಯ ಮಸ್ಕಿ ಶಾಲೆಗಾಗಿ ಎಸ್ಎಫ್ಐ ನೇತೃತ್ವದಲ್ಲಿ ಪ್ರತಿಭಟನೆ

‘ಪ್ರತಿಧ್ವನಿ’ ಇಂಪಾಕ್ಟ್ : ರಾಯಚೂರು ಜಿಲ್ಲೆಯ ಮಸ್ಕಿ ಶಾಲೆಗಾಗಿ ಎಸ್ಎಫ್ಐ ನೇತೃತ್ವದಲ್ಲಿ ಪ್ರತಿಭಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada