ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ (Puneeth Rajkumar) ಅವರಿಗೆ ಮತ್ತೊಂದು ಗೌರವ ಲಭ್ಯವಾಗಿದೆ. ದೇಶದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾಗಿರುವ ಮೈಸೂರು ವಿಶ್ವವಿದ್ಯಾನಿಲಯ (University of Mysore) ಪುನೀತ್ ಅವತಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಘೋಷಿಸಿದೆ.
ಹೌದು, ಮೈಸೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ.ಹೇಮಂತ್ ರಾವ್ ಅವರು, ದಿವಂಗತ ನಟ ಪುನೀತ್ ರಾಜ್ಕುಮಾರ್ ಅವರಿಗೆ ಸಿನಿಮಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಮತ್ತು ಅವರ ಪರೋಪಕಾರಿ ಕಾರ್ಯಗಳಿಗಾಗಿ ಮರಣೋತ್ತರ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಘೋಷಿಸಿದ್ದಾರೆ ಎಂದು TOI ವರದಿ ಮಾಡಿದೆ. ಪುನೀತ್ ರಾಜ್ಕುಮಾರ್ ಅವರ ತಂದೆ ಮತ್ತು ರಾಜ್ಕುಮಾರ್ ಅವರಿಗೂ ಕೂಡ ಮೈಸೂರು ವಿಶ್ವವಿದ್ಯಾಲಯದಿಂದಲೇ ಗೌರವ ಡಾಕ್ಟರೇಟ್ ಪಡೆದಿದ್ದಾರೆ.
ಮಾರ್ಚ್ 22 ರಂದು 102ನೇ ಘಟಿಕೋತ್ಸವದಲ್ಲಿ ಪುನೀತ್ ಪರವಾಗಿ ಡಾಕ್ಟರೇಟ್ ಸ್ವೀಕರಿಸಲು ಸಮ್ಮತಿಸಿದ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಅವರನ್ನು ಸಂಪರ್ಕಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಅಕ್ಟೋಬರ್ನಲ್ಲಿ ನಿಧನರಾದ ಪುನೀತ್ ರಾಜ್ಕುಮಾರ್ ಅವರಿಗೆ ಕರ್ನಾಟಕ ಸರ್ಕಾರವು ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಿಸಿದೆ. ಅವರ ಚಿತ್ರ ಜೇಮ್ಸ್ ಬಿಡುಗಡೆಗೆ ಮುಂಚಿತವಾಗಿ ಈ ಸುದ್ದಿ ಬಂದಿದ್ದು ಅವರ ಅಭಿಮಾನಿಗಳಿಗೆ ಡಬಲ್ ಸಂತೋಷವನ್ನು ನೀಡುತ್ತದೆ.

ಅಪ್ಪು ಅವರ ಕನಸಿನ ಕೂಸು ಶಕ್ತಿಧಾಮ ಆ ಮಕ್ಕಳಿಗಾಗಿ ಮೀಸಲಾದ ಶಾಲೆಗಾಗಿ ಕರ್ನಾಟಕ ಸರ್ಕಾರ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದೆ. ಶಕ್ತಿಧಾಮ ಮಹಿಳಾ ಪುನರ್ವಸತಿ ಮತ್ತು ಅಭಿವೃದ್ಧಿ ಕೇಂದ್ರವು 1997 ರಲ್ಲಿ ಕಾರ್ಯನಿರ್ವಹಿಸಲು ಪ್ರಾರಂಭಿಸಿತು, ನಿರ್ಮಾಪಕ ಪಾರ್ವತಮ್ಮ ರಾಜ್ಕುಮಾರ್ ಅವರು ಸಂಕಷ್ಟದಲ್ಲಿರುವ ಮಹಿಳೆಯರಿಗೆ ಬೆಂಬಲ ನೀಡಲು ಮತ್ತು ಹಿಂದುಳಿದ ಕುಟುಂಬಗಳ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಲು ಪ್ರಾರಂಭಿಸಿದರು.