117 ಸದಸ್ಯ ಬಲ ಇರುವ ಪಂಜಾಬ್ ವಿಧಾನಸಭೆಯಲ್ಲಿ ಅಧಿಕಾರದ ಗದ್ದುಗೆ ಏರಲು 59 ಸ್ಥಾನಗಳ ಅಗತ್ಯವಿದ್ದು ,ಇದುವರೆಗಿನ ಮತಎಣಿಕೆ ಪ್ರಕಾರ ಆಮ್ ಆದ್ಮಿ ಪಕ್ಷ 70 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ, ಬಿಜೆಪಿ 07 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಸದ್ಯ ಆಡಳಿತದಲ್ಲಿದ್ದ ಪಂಜಾಬ್ ಕಾಂಗ್ರೆಸ್ ಗೆ ಭಾರೀ ಮುಖಭಂಗವಾಗಿದೆ. ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಪಂಜಾಬ್ ನಲ್ಲಿ ಎಎಪಿ ಪಕ್ಷ ಅಧಿಕಾರಕ್ಕೆ ಬರುವ ನಿರೀಕ್ಷೆ ಇದೆ.

ರಾಜ್ಯದ 23 ಜಿಲ್ಲೆಗಳಲ್ಲಿ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಮೊದಲು ಅಂಚೆ ಮತಪತ್ರಗಳ ಎಣಿಕೆ ನಡೆಯಲಿದ್ದು, ನಂತರ ಇವಿಎಂಗಳಲ್ಲಿ ಚಲಾವಣೆಯಾದ ಮತಗಳ ಎಣಿಕೆ ನಡೆಯಲಿದೆ. ಪಂಜಾಬ್ನ 117 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗೆ ವೇದಿಕೆ ಸಿದ್ಧವಾಗಿದ್ದು, 1,304 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದೆ.






