ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಸರ್ಕಾರ, ರಾಜ್ಯದಲ್ಲಿನ 424 ಮಂದಿಗೆ ಒದಗಿಸಿದ್ದ ಭದ್ರತೆಯನ್ನು ಹಿಂತೆಗೆದುಕೊಂಡಿದೆ. ಭದ್ರತೆಯನ್ನು ಹಿಂತೆಗೆದುಕೊಂಡವರಲ್ಲಿ ಅನೇಕರು ನಿವೃತ್ತ ಪೊಲೀಸ್ ಅಧಿಕಾರಿಗಳು, ಧಾರ್ಮಿಕ ಮುಖಂಡರು ಮತ್ತು ರಾಜಕೀಯ ವ್ಯಕ್ತಿಗಳು ಸೇರಿದ್ದಾರೆ.
ಕಳೆದ ಏಪ್ರಿಲ್ನಲ್ಲಿ ಮಾಜಿ ಸಚಿವರು, ಮಾಜಿ ಶಾಸಕರು ಮತ್ತು ಇತರ ನಾಯಕರು ಸೇರಿದಂತೆ 184 ಜನರ ಭದ್ರತೆಯನ್ನು ಹಿಂತೆಗೆದುಕೊಳ್ಳುವಂತೆ ಪಂಜಾಬ್ ಸರ್ಕಾರ ಆದೇಶ ನೀಡಿತ್ತು. ಪಂಜಾಬ್ನ ಮಾಜಿ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ, ಕ್ಯಾಪ್ಟನ್ ಅಮರಿಂದರ್ ಸಿಂಗ್, ಅವರ ಪುತ್ರ ರಣೀಂದರ್ ಸಿಂಗ್, ಕಾಂಗ್ರೆಸ್ ಶಾಸಕ ಪ್ರತಾಪ್ ಸಿಂಗ್ ಬಜ್ವಾವೆರೆ, ಅವರ ಪತ್ನಿ ಹಾಗೂ ಅವರ ಕುಟುಂಬಕ್ಕೆ ಒದಗಿಸಲಾಗಿದ್ದ ಭದ್ರತೆಯನ್ನು ಕಳೆದ ತಿಂಗಳು ಹಿಂಪಡೆಯಲಾಗಿತ್ತು. ಇದೀಗ ಮತ್ತೆ 424 ಜನರಿಗೆ ಒದಗಿಸಿದ್ದ ಭದ್ರತೆಯನ್ನು ಹಿಂತೆಗೆದುಕೊಂಡಿದೆ.