• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕನ್ನಡದ ಜೀವಂತಿಕೆಗೆ ಎಲ್ಲರೂ ಶ್ರಮಿಸಲಿ: ಪುರುಷೋತ್ತಮ ಬಿಳಿಮಲೆ

ಪ್ರತಿಧ್ವನಿ by ಪ್ರತಿಧ್ವನಿ
July 15, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್: ‘ಕನ್ನಡ ಭಾಷೆ ಜೀವಂತವಾಗಿ ಉಳಿಯಲು ಎಲ್ಲರೂ ಕೂಡಿ ಶ್ರಮಿಸಬೇಕಿದೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದರು.ಕನ್ನಡ ಅನುಷ್ಠಾನದ ಕುರಿತು ಜಿಲ್ಲೆಯ ವಿವಿಧ ಕನ್ನಡ ಸಂಘಟನೆಗಳ ಮುಖಂಡರೊಂದಿಗೆ ಏರ್ಪಡಿಸಿದ್ದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.ಕನ್ನಡದ ಬೆಳವಣಿಗೆ ಯಾರೋ ಒಬ್ಬರಿಂದ ಸಾಧ್ಯವಿಲ್ಲ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು. ಈ ಕಾರಣಕ್ಕಾಗಿಯೇ ನಿಮ್ಮ ಸಲಹೆಗಳನ್ನು ಪಡೆಯಲು ಇಲ್ಲಿಗೆ ಬಂದು ಸಭೆ ನಡೆಸುತ್ತಿರುವೆ. ಈಗಾಗಲೇ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಸಾಹಿತ್ಯ ಪರಿಷತ್ತು, ವಿವಿಧ ಕನ್ನಡ ಪರ ಸಂಘಟನೆಗಳು ಕನ್ನಡದ ಜೀವಂತಿಕೆಗೆ ಕೆಲಸ ಮಾಡುತ್ತಿವೆ.

ADVERTISEMENT

ಸರ್ಕಾರದ ಯಾವುದೇ ಅನುದಾನ ಪಡೆಯದೇ ಕನ್ನಡ ಬೆಳವಣಿಗೆಗೆ ಶ್ರಮಿಸುತ್ತಿರುವ ಕೆಲ ಸಂಘಟನೆಗಳ ಕಾರ್ಯ ಶ್ಲಾಘನಾರ್ಹವಾದುದು ಎಂದು ಹೇಳಿದರು.ಕನ್ನಡದ ಪರಿಣಾಮಕಾರಿ ಅನುಷ್ಠಾನವಾಗುತ್ತಿಲ್ಲ ಎಂಬ ದೂರುಗಳಿವೆ. ಏನಾದರೂ ಲೋಪದೋಷಗಳಿದ್ದಲ್ಲಿ ಅದನ್ನು ಗಮನಕ್ಕೆ ತಂದರೆ ಜಿಲ್ಲಾಧಿಕಾರಿಗಳ ಜೊತೆ ನಡೆಯುವ ಸಭೆಯಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.

‘ಸಿ’ ಮತ್ತು ‘ಡಿ’ ಗ್ರುಪ್‌ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ 80ರಷ್ಟು ಉದ್ಯೋಗಗಳು ಸಿಗಬೇಕಿದೆ. ಸರೋಜಿನಿ ಮಹಿಷಿ ವರದಿ ಇನ್ನೂ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಬರಬೇಕು ಎಂದು ತಿಳಿಸಿದರು.ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ ಮಾತನಾಡಿ, ಕನ್ನಡದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಪ್ರಾಧಿಕಾರದ ಅಧ್ಯಕ್ಷರು ಪ್ರತಿ ಜಿಲ್ಲೆಗೆ ಭೇಟಿ ಕೊಟ್ಟು ಕನ್ನಡಕ್ಕಾಗಿ ಕೆಲಸ ಮಾಡುತ್ತಿರುವವರ ಸಭೆಗಳನ್ನು ನಡೆಸಿ, ಸಲಹೆಗಳನ್ನು ಪಡೆಯುತ್ತಿದ್ದಾರೆ. ಲೋಪಗಳೇನಾದರೂ ಇದ್ದರೆ ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನಶೆಟ್ಟಿ ಮಾತನಾಡಿ, ಕನ್ನಡ ನಾಮಫಲಕಗಳ ಅಳವಡಿಕೆ ಎಲ್ಲ ಕಡೆಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಆಗುತ್ತಿಲ್ಲ. ಗಡಿ ಭಾಗದ ಬಹಳಷ್ಟು ಕನ್ನಡ ‌ಶಾಲೆಗಳಲ್ಲಿ ಕನ್ನಡ ನಾಮಫಲಕಗಳೇ ಇಲ್ಲ. ಕನ್ನಡ ‌ಶಾಲೆಗಳನ್ನು ಆರಂಭಿಸಲು ಇರುವ ಅನುಮತಿಯ ನಿಯಮಗಳು ಸರಳವಾಗಬೇಕು. ಹೀಗಾದಾಗ ಕನ್ನಡ ಶಾಲೆಗಳನ್ನು ಉಳಿಸಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ್ ಸೋನಾರೆ, ಶಿವಕುಮಾರ ಕಟ್ಟೆ, ಎಸ್.ಬಿ‌.ಕುಚಬಾಳ, ಪಾರ್ವತಿ ಸೋನಾರೆ, ಭಾರತಿ ವಸ್ತ್ರದ್‌, ಎಂ. ದೇಶಪಾಂಡೆ, ಸಂತೋಷ ಕುಮಾರ ಜೋಳದಾಪಕೆ ಮತ್ತಿತರರು ಹಾಜರಿದ್ದರು.

Tags: CM SiddaramaiahCongress PartyDCM D.K ShivakumarEducation and Employment
Previous Post

Trump Friends ಟ್ರಂಪ್ ಮೇಲೆ ಗುಂಡು ಹಾರಿಸಿದ ವ್ಯಕ್ತಿಯ ಹಿನ್ನೆಲೆ ಬಯಲು ಮಾಡಿದ ಸ್ನೇಹಿತರು

Next Post

ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ

Related Posts

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!
Top Story

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

by ಪ್ರತಿಧ್ವನಿ
May 23, 2026
0

ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ‘ಕಾಕ್ರೋಚ್ ಜನತಾ ಪಕ್ಷ’ (ಸಿಜೆಪಿ) ಪೇಜ್‌ಗೆ ಸಂಬಂಧಿಸಿದಂತೆ ಅದರ ಅಡ್ಮಿನ್ ಅಭಿಜಿತ್ ದಿಪ್ಕೆ ಮಹತ್ವದ ಹೇಳಿಕೆ ನೀಡಿದ್ದಾರೆ. “ಸಿಜೆಪಿ ಹೆಸರಿನಲ್ಲಿ...

Read moreDetails
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

May 23, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post

ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada