ಲಕ್ನೋ: ಮದ್ಯ ಕುಡಿಯಲು ನಿರಾಕರಿಸಿದ್ದಕ್ಕೆ ಸ್ನೇಹಿತರೇ ಟೆರೇಸ್ ಮೇಲಿಂದ ತಳ್ಳಿ, ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಉತ್ತರಪ್ರದೇಶದಲ್ಲಿ (Uttarpradesh) ದಲ್ಲಿ ಈ ಘಟನೆ ನಡೆದಿದೆ. ಗಾಯಾಳುವನ್ನು ರಂಜೀತ್ ಸಿಂಗ್ ಎಂದು ಗುರುತಿಸಲಾಗಿದೆ. ಸ್ನೇಹಿತರು ಲಕ್ನೋದ ರುಪ್ಪುರ್ ಖಾದ್ರಾದಲ್ಲಿರುವ ಮನೆಯ ಟೆರೇಸ್ ಮೇಲೆ ಕುಳಿತಿದ್ದಾರೆ. ಈ ವೇಳೆ ಎಣ್ಣೆ ಪಾರ್ಟಿ ಮಾಡಿದ್ದಾರೆ. ಎಣ್ಣೆ ಕುಡಿಯಲು ರಂಜೀತ್ ಸಿಂಗ್ ನಿರಾಕರಿಸಿದ್ದಾರೆ. ಈ ಸಂದರ್ಭದಲ್ಲಿ ಸ್ನೇಹಿತನೊಬ್ಬ ಮೇಲಿನಿಂದ ತಳ್ಳಿದ್ದಾನೆ. ಅಲ್ಲದೇ, ಮೂವರು ಸೇರಿ ರಂಜೀತ್‌ಗೆ ಮನಬಂದಂತೆ ಥಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಘಟನೆಯ ಸಂಪೂರ್ಣ ದೃಶ್ಯ ಮನೆಯ ಸುತ್ತಮುತ್ತ ಇರುವ ಕಟ್ಟಡದಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ನಡೆಯುತ್ತಿದ್ದಂತೆ ರಂಜೀತ್ ಸಿಂಗ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ದೂರು ದಾಖಲಾಗಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ.