ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಕಾಮನ್ ವೆಲ್ತ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಧ್ವಜಧಾರಿ ಆಗಿ ತಂಡವನ್ನು ಮುನ್ನಡೆಸುವ ಗೌರವಕ್ಕೆ ಪಾತ್ರರಾಗಿದ್ದಾರೆ.
ಲಂಡನ್ ನ ಬರ್ಮಿಂಗ್ ಹ್ಯಾಂನಲ್ಲಿ ನಾಳೆ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಪಿವಿ ಸಿಂಧು ರಾಷ್ಟ್ರಧ್ವಜ ಹಿಡಿಯಲಿದ್ದಾರೆ.
ಜಾವೆಲಿನ್ ಸ್ಪರ್ಧಿ ನೀರಜ್ ಜೋಪ್ರಾ ಗಾಯಗೊಂಡ ಹಿನ್ನೆಲೆಯಲ್ಲಿ ಕೊನೆ ಗಳಿಗೆಯಲ್ಲಿ ಅವರು ಧ್ವಜಧಾರಿ ಆಗುವ ಅವಕಾಶದಿಂದ ವಂಚಿತರಾದರು. ಈ ಹಿನ್ನೆಲೆಯಲ್ಲಿ ಒಲಿಂಪಿಕ್ಸ್ ನಲ್ಲಿ ಎರಡು ಪದಕ ಗೆದ್ದ ಸಾಧನೆ ಮಾಡಿರುವ ಪಿವಿ ಸಿಂಧುಗೆ ಈ ಗೌರವ ಲಭಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ನೀರಜ್ ಚೋಪ್ರಾ ಗಾಯಗೊಂಡ ನಂತರ ಧ್ವಜ ಹಿಡಿಯುವ ಅವಕಾಶ ನೀಡಲು ಬಾಕ್ಸರ್ ಲವ್ಲಿನಾ ಬೊರ್ಗೊಯಿನ್ ಮತ್ತು ವೇಟ್ ಲಿಫ್ಟರ್ ಮೀರಾಬಾಯಿ ಚಾನು ಅವರ ಹೆಸರನ್ನು ಪರಿಗಣಿಸಲಾಗಿತ್ತು. ಆದರೆ ಅಂತಿಮವಾಗಿ ಪಿವಿ ಸಿಂಧು ಅವರನ್ನು ಪರಿಗಣಿಸಲಾಗಿದೆ ಎಂದು ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.